ಬಾಂಗ್ಲಾದೇಶ | ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; 105 ಮಂದಿ ಸಾವು, ಕರ್ಫ್ಯೂ ಘೋಷಣೆ

Date:

ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು ವಿದ್ಯಾರ್ಥಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ ಕನಿಷ್ಠ 105 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಬೆನ್ನಲ್ಲೇ ಬಾಂಗ್ಲಾದೇಶದ ಅಧಿಕಾರಿಗಳು ರಾಷ್ಟ್ರವ್ಯಾಪಿ ಕರ್ಫ್ಯೂ ವಿಧಿಸಿದ್ದಾರೆ.

- Advertisement -

ಬಾಂಗ್ಲಾದೇಶದಲ್ಲಿ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಹಿಂಸಾಚಾರದಲ್ಲಿ ನೂರಾರು ಮಂದಿ ಸಾವನ್ನಪ್ಪುತ್ತಿದ್ದಂತೆ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿದ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಶಾಂತಿಯುತವಾಗಿ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಲು ಮಾತುಕತೆಗೆ ವಿದ್ಯಾರ್ಥಿಗಳನ್ನು ಆಹ್ವಾನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಇದನ್ನು ಓದಿದ್ದೀರಾ?  ಬಾಂಗ್ಲಾದೇಶ | ಹಿಂಸಾಚಾರಕ್ಕೆ ತಿರುಗಿದ ಮೀಸಲಾತಿ ವಿರೋಧಿ ಪ್ರತಿಭಟನೆ; 32 ಸಾವು

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ಇದು ಬಾಂಗ್ಲಾದೇಶದ ಆಂತರಿಕ ವಿಷಯ” ಎಂದು ಹೇಳಿದ್ದಾರೆ. ಇನ್ನು 8,500 ವಿದ್ಯಾರ್ಥಿಗಳು ಸೇರಿದಂತೆ ಸುಮಾರು 15,000 ಭಾರತೀಯರು ಬಾಂಗ್ಲಾದೇಶದಲ್ಲಿ ನೆಲೆಸಿದ್ದು ಅವರೆಲ್ಲವರೂ ಸುರಕ್ಷಿತವಾಗಿದ್ದಾರೆ. 125 ವಿದ್ಯಾರ್ಥಿಗಳು ಸೇರಿದಂತೆ 245 ಭಾರತೀಯ ನಾಗರಿಕರು ಭಾರತಕ್ಕೆ ಹಿಂದಿರುಗಲು ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ವಿದ್ಯಾರ್ಥಿ ಪ್ರತಿಭಟನಾಕಾರರು ಕೇಂದ್ರ ಬಾಂಗ್ಲಾದೇಶದ ನರಸಿಂಗಡಿ ಜಿಲ್ಲೆಯ ಜೈಲಿಗೆ ನುಗ್ಗಿ ಬೆಂಕಿ ಹಚ್ಚಿದ ಕಾರಣ ನೂರಾರು ಕೈದಿಗಳನ್ನು ಬಿಡುಗಡೆ ಮಾಡಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಎಎಫ್‌ಪಿಗೆ ತಿಳಿಸಿದ್ದಾರೆ. “ನನಗೆ ಕೈದಿಗಳ ಸಂಖ್ಯೆ ತಿಳಿದಿಲ್ಲ, ಆದರೆ ಅದು ನೂರಾರು ಕೈದಿಗಳಿರುತ್ತಾರೆ” ಎಂದು ಹೇಳಿದರು.

1971ರ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಜನರ ಕುಟುಂಬಗಳಿಗೆ ಶೇಕಡ 30ರಷ್ಟು ಸರ್ಕಾರಿ ಉದ್ಯೋಗ ಮೀಸಲಾತಿಯನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಮೆನ್ ರಾಷ್ಟ್ರಪತಿ ಭವನದ ಮೇಲೆ ಹೂತಿಗಳ ಕ್ಷಿಪಣಿ ದಾಳಿ: ಐವರ ಸಾವು

ಯಮೆನ್‌ನ ದಕ್ಷಿಣ ಭಾಗದ ಪ್ರಮುಖ ನಗರವಾದ ಅದನ್‌ನಲ್ಲಿರುವ ಅಲ್-ಮಾಶಿಕ್ ರಾಷ್ಟ್ರಪತಿ ಭವನದ...

ಭಾರತದ ಮೇಲೆ ಶೇ.100 ಸುಂಕ: 10 ದಿನಗಳಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅಂತಿಮ ತೀರ್ಮಾನ!

ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಶೇ. 100ರಷ್ಟು ಭಾರಿ ಆಮದು...

ರಾತ್ರಿ ವೇಳೆಯಲ್ಲೂ ರವಿ; ಸೂರ್ಯನ ಬೆಳಕು ಮಾರಾಟ ಮಾಡಲು ಅಮೆರಿಕ-ಭಾರತ ಸಹಭಾಗಿತ್ವ: ಏನಿದು ಯೋಜನೆ?

ವಿಜ್ಞಾನ ಕಲ್ಪನೆಗಳಿಗಿಂತಲೂ ಮಿಗಿಲಾದ ಅಪರೂಪದ ಯೋಜನೆಯೊಂದು ಈಗ ಜಾಗತಿಕ ಇಂಧನ ಕ್ಷೇತ್ರದಲ್ಲಿ...

ಸೌದಿ ಅರಾಮ್ಕೊ ಪ್ರಧಾನ ಕಚೇರಿ ಮೇಲೆ ದಾಳಿ: ಮತ್ತೆ ಪುಟಿದೆದ್ದರೇ ಹೂತಿ ಬಂಡುಕೋರರು?

ಯೆಮನ್‌ನ ಹೂತಿ ಬಂಡುಕೋರರು ಸೌದಿ ಅರೇಬಿಯಾದ ಧಹ್ರಾನ್‌ನಲ್ಲಿರುವ ತೈಲ ದೈತ್ಯ ಕಂಪನಿ...