ಅಮೆರಿಕ ಕೈಕೊಟ್ಟ ನಂತರ ಇಂಗ್ಲೆಂಡ್ ಬೆಂಬಲ ಪಡೆದ ಉಕ್ರೇನ್‌ ಅಧ್ಯಕ್ಷ

Date:

ರಷ್ಯಾ ವಿರುದ್ಧ ನಡೆಯುತ್ತಿರುವ ಯುದ್ಧದಲ್ಲಿ ಅಮೆರಿಕ ಬೆಂಬಲ ಕೋರಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭೇಟಿ ಮಾಡಿದ ನಂತರ ನಿರೀಕ್ಷಿಸಿದ ಫಲ ಸಿಗದೆ ವಾಪಸಾಗಿದ್ದ ಉಕ್ರೇನ್‌ ಅಧ್ಯಕ್ಷ ವ್ಲಾದಿಮಿರ್ ಝೆಲೆನ್ಸ್ಕಿ ಇಂಗ್ಲೆಂಡ್ ಪ್ರಧಾನಿ ಕೀರ್‌ ಸ್ಟಾರ್ಮರ್‌ ಹಾಗೂ ಇತರ ಪಾಶ್ಚಿಮಾತ್ಯ ನಾಯಕರನ್ನು ಭೇಟಿ ಮಾಡಿ ನೆರವು ಪಡೆದಿದ್ದಾರೆ.

- Advertisement -

ಕೀರ್‌ ಸ್ಟಾರ್ಮರ್‌ ಹಾಗೂ ಐರೋಪ್ಯ ದೇಶಗಳ ನಾಯಕರನ್ನು ಭೇಟಿ ಮಾಡಿದ ವ್ಲಾದಿಮಿರ್ ಝೆಲೆನ್ಸ್ಕಿ ಯುದ್ಧೋಪಕರಣಗಳು ಹಾಗೂ ಆರ್ಥಿಕ ಸಹಾಯ ಪಡೆಯುವ ಮಾತುಕತೆಗಳು ಯಶಸ್ವಿಯಾಗಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಯುದ್ದೋಪಕರಣಗಳು ಹಾಗೂ ಶಸ್ತ್ರಾಸ್ತ್ರಗಳನ್ನು ಅಮೆರಿಕ ನೀಡುವ ಭರವಸೆ ಕೊನೆಗೊಂಡ ನಂತರ ಜರ್ಮನಿ ಒಳಗೊಂಡ ಐರೋಪ್ಯ ದೇಶಗಳ ನಾಯಕರು 3.1 ಬಿಲಿಯನ್‌ ಡಾಲರ್‌ ನೆರವನ್ನು ಉಕ್ರೇನ್‌ಗೆ ನೀಡುವುದಾಗಿ ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಉಕ್ರೇನ್‌ ಅಧ್ಯಕ್ಷ ವ್ಲಾದಿಮಿರ್ ಝೆಲೆನ್ಸ್ಕಿ ಇಂಗ್ಲೆಂಡ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರನ್ನು ಭೇಟಿ ಮಾಡಿ ಸಹಾಯ ಹಸ್ತದ ಭರವಸೆಯ ಜೊತೆ ಯುದ್ಧವನ್ನು ನಿಲ್ಲಿಸಲು ರಷ್ಯಾವನ್ನು ಒತ್ತಾಯಿಸುವಂತೆ ಅಮೆರಿಕಕ್ಕೆ ಮನವರಿಕೆ ಮಾಡುವುದಾಗಿ ಐರೋಪ್ಯ ನಾಯಕರು ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಸುದ್ದಿ ಓದಿದ್ದೀರಾ? ಚಾಂಪಿಯನ್ಸ್‌ ಟ್ರೋಫಿ | ಪಾಕ್‌ ವಿರುದ್ಧದ ಒಂದು ಪಂದ್ಯ – ವಿರಾಟ್ ಕೊಹ್ಲಿಗೆ ಹಲವು ದಾಖಲೆಗಳ ಕಿರೀಟ

ಮೂರು ವರ್ಷದಿಂದ ರಷ್ಯಾ ಉಕ್ರೇನ್‌ ಮೇಲೆ ಅಮಾನವೀಯವಾಗಿ ದಾಳಿ ನಡೆಸಿದ್ದು, ಈ ಕಾರಣದಿಂದ ನಾವು ಮಹತ್ವದ ಘಟ್ಟದಲ್ಲಿದ್ದೇವೆ. ಹೀಗಾಗಿ ನಾವು ಉಕ್ರೇನ್‌ಗೆ ಆರ್ಥಿಕ ಹಾಗೂ ಶಸ್ತ್ರಾಸ್ತ್ರ ನೆರವನ್ನು ದ್ವಿಗುಣಗೊಳಿಸುವ ಅಚಲ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ನಮ್ಮ ಒಕ್ಕೂಟದ ಸಹಭಾಗಿತ್ವದಲ್ಲಿ ಮಿತ್ರ ರಾಷ್ಟ್ರಕ್ಕೆ ಭದ್ರತಾ ಖಾತರಿಯನ್ನು ತೀವ್ರಗೊಳಿಸುವದರ ಜೊತೆ ಅಮೆರಿಕದೊಂದಿಗೆ ಮಾತುಕತೆಯನ್ನು ಮುಂದುವರೆಸುತ್ತೇವೆ ಎಂದು ಇಂಗ್ಲೆಂಡ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ತಿಳಿಸಿದ್ದಾರೆ.

ಇಂಗ್ಲೆಂಡ್‌ ಪ್ರಧಾನಿಯೊಂದಿಗೆ ನಡೆದ ಸಭೆಯಲ್ಲಿ ಗಮನಾರ್ಹ ಬೆಳವಣಿಯ ನಂತರ ಇಂದು (ಮಾ.03)ಉಕ್ರೇನ್‌ ಪ್ರಧಾನಿ ವ್ಲಾದಿಮಿರ್ ಝೆಲೆನ್ಸ್ಕಿ ಇಟಲಿ ಪ್ರಧಾನಿ ಜಾರ್ಜಿಯ ಮೆಲೋನಿ ಅವರನ್ನು ಭೇಟಿ ಮಾಡಿ ನೆರವು ಕೋರಲಿದ್ದಾರೆ. ನಂತರ ಫ್ರೆಂಚ್‌ ಪ್ರಧಾನಿ ಇಮ್ಯಾನುವೆಲ್ ಮಾಕ್ರೋನ್‌, ಐರೋಪ್ಯ ಒಕ್ಕೂಟದ ನಾಯಕರು, ಜರ್ಮನಿ, ಡೆನ್ಮಾರ್ಕ್, ಹಾಲೆಂಡ್, ನಾರ್ವೆ, ಸ್ಪೇನ್, ಕೆನಡಾ ಸೇರಿದಂತೆ ಪ್ರಮುಖ ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಡುವೆ ಶ್ವೇತಭವನದಲ್ಲಿ ನಡೆದ ಮಾತುಕತೆಯ ವೇಳೆ ಉಕ್ರೇನ್‌ನ ಯುದ್ಧತಂತ್ರ, ಅಮೆರಿಕದ ಮಿಲಿಟರಿ ನೆರವು ಮತ್ತು ಸಂಘರ್ಷ ಕೊನೆಗೊಳಿಸುವ ಪ್ರಯತ್ನಗಳಿಗೆ ಸಂಬಂಧಿಸಿದಂತೆ ಉಭಯ ಗಣ್ಯರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಚಕಮಕಿಯನ್ನು ಅಮೆರಿಕದ ಉಪಾಧ್ಯಕ್ಷ ಜೆ.ಡಿ.ವಾನ್ಸ್ ಕಟು ಶಬ್ದಗಳಲ್ಲಿ ಖಂಡಿಸಿದ್ದು, ಇದು ಉಕ್ರೇನ್‌ಗೆ ಭವಿಷ್ಯದಲ್ಲಿ ಬೆಂಬಲ ಮುಂದುವರಿಸುವ ಸಂಬಂಧ ಉಭಯ ದೇಶಗಳ ನಡುವೆ ಸಂಘರ್ಷ ಹೆಚ್ಚುತ್ತಿರುವುದನ್ನು ತೋರಿಸುತ್ತಿದೆ ಎಂದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2026ರ ನೊಬೆಲ್ ಸಾಹಿತ್ಯ ಪ್ರಶಸ್ತಿ: ಕೆನಡಾದ ಖ್ಯಾತ ಕವಯಿತ್ರಿ ‘ಆನ್ ಕಾರ್ಸನ್’ ಮುಡಿಗೇರಿದ ಗರಿ

ಸಾಹಿತ್ಯ ಲೋಕದ ಅತ್ಯಂತ ಪ್ರತಿಷ್ಠಿತ ಗೌರವವಾದ 2026ನೇ ಸಾಲಿನ 'ನೊಬೆಲ್ ಸಾಹಿತ್ಯ...

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...