ರಷ್ಯಾದಲ್ಲಿ ಕಾಣೆಯಾಗಿದ್ದ ಭಾರತೀಯ ಮೂಲದ ವಿದ್ಯಾರ್ಥಿಯ ಶವ ಜಲಾಶಯದಲ್ಲಿ ಪತ್ತೆ

Date:

19 ದಿನಗಳ ಹಿಂದೆ ರಷ್ಯಾದ ಉಫಾ ನಗರದಲ್ಲಿ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿಯ ಮೃತದೇಹ ಜಲಾಶಯದಲ್ಲಿ ಪತ್ತೆಯಾಗಿದೆ.

- Advertisement -

ವಿದ್ಯಾರ್ಥಿಯನ್ನು ರಾಜಸ್ಥಾನದ ಲಕ್ಷ್ಮಣಗಢದ ಕಫನ್‌ವಾಡ ಗ್ರಾಮದ ನಿವಾಸಿ ಅಜಿತ್ ಸಿಂಗ್ ಚೌಧರಿ ಎಂದು ಗುರುತಿಸಲಾಗಿದೆ. 2023 ರಲ್ಲಿ ಎಂಬಿಬಿಎಸ್ ಶಿಕ್ಷಣಕ್ಕಾಗಿ ಬಶ್ಕಿರ್ ರಾಜ್ಯದ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಸೇರಿದ್ದರು. ಅ.19 ರಂದು ಹಾಲು ಖರೀದಿಸಲು ಹೋಗುವುದಾಗಿ ಹೇಳಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ತನ್ನ ಹಾಸ್ಟೆಲ್‌ನಿಂದ ತೆರಳಿದ್ದರು. ಆದರೆ ವಾಪಸ್‌ ಬಂದಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

19 ದಿನಗಳ ಹಿಂದೆ ನದಿ ದಂಡೆಯ ಬಳಿ ಚೌಧರಿಯವರ ಬಟ್ಟೆ, ಮೊಬೈಲ್ ಫೋನ್ ಮತ್ತು ಶೂಗಳು ಪತ್ತೆಯಾಗಿದ್ದವು. ಈಗ ಅವರ ಮೃತದೇಹ ವೈಟ್ ರಿವರ್ ಪಕ್ಕದಲ್ಲಿರುವ ಅಣೆಕಟ್ಟಿನಲ್ಲಿ ಪತ್ತೆಯಾಗಿದೆ ಎಂದು ಅಲ್ವಾರ್ ಸರಸ್ ಡೈರಿ ಅಧ್ಯಕ್ಷ ನಿತಿನ್ ಸಾಂಗ್ವಾನ್ ತಿಳಿಸಿದ್ದಾರೆ. ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಚೌಧರಿ ಅವರ ಸಾವಿನ ಬಗ್ಗೆ ಅವರ ಕುಟುಂಬಕ್ಕೆ ಮಾಹಿತಿ ನೀಡಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹರಿಯಾಣದ ‘ಮಹಾ ಮತಗಳ್ಳತನ’ ಮತ್ತು ಚುನಾವಣಾ ಆಯೋಗವೆಂಬ ಮೋದಿ ‘ಪಂಜರದ ಗಿಳಿ’

ವಿದ್ಯಾರ್ಥಿಯ ಶವವನ್ನು ಭಾರತಕ್ಕೆ ತರಬೇಕು. ಅಹಿತಕರ ಘಟನೆ ಸಂಭವಿಸಿ ಆತ ಸಾವಿಗೀಡಾಗಿದ್ದಾನೆ. ಇದನ್ನು ಸಂಪೂರ್ಣ ಗಂಭೀರತೆಯಿಂದ ತನಿಖೆ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡರು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಒತ್ತಾಯಿಸಿದ್ದಾರೆ.

ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ಅಜಿತ್ ಸ್ನೇಹಿತರು ಶವದ ಗುರುತನ್ನು ಗುರುತಿಸಿದ್ದಾರೆ. ವಿದ್ಯಾರ್ಥಿಯ ಸಾವಿನ ಕುರಿತು ವಿಶ್ವವಿದ್ಯಾಲಯ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...