ಎಲ್ಲ ಮಾದರಿಯ ಕ್ರಿಕೆಟ್‌ಗೆ ಬ್ರಾವೊ ವಿದಾಯ

Date:

Advertisements

ವೆಸ್ಟ್‌ ಇಂಡೀಸ್ ಕ್ರಿಕೆಟ್‌ ತಂಡದ ಆಲ್‌ರೌಂಡರ್‌ ಆಟಗಾರ ಡ್ವೇನ್‌ ಬ್ರಾವೊ ಅವರು ತಮ್ಮ ಕ್ರಿಕೆಟ್‌ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ. ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಕೆರೀಬಿಯನ್ ಸೂಪರ್‌ ಲೀಗ್‌ನಲ್ಲಿ ಆಡುತ್ತಿದ್ದ ಅವರಿಗೆ ಗಾಯಗಳಾಗಿದ್ದು, ಲೀಗ್‌ನಿಂದ ಹೊಪರಬಂದಿದ್ದರು. ಇದೀಗ, ಅವರು ಕ್ರಿಕೆಟ್‌ ವೃತ್ತಿಗೆ ನಿವೃತ್ತಿ ಘೋಷಿಸಿದ್ದಾರೆ.

“ನನಗೆ ಎಲ್ಲವನ್ನೂ ಕೊಟ್ಟ ಆಟಕ್ಕೆ ವಿದಾಯ ಹೇಳುತ್ತಿದ್ದೇನೆ” ಎಂದು ಬ್ರಾವೊ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

Advertisements

ಬ್ರಾವೊ ಅವರು ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ (ಸಿಎಸ್‌ಕೆ) ತಂಡದಲ್ಲಿ ಆಡುತ್ತಿದ್ದರು. ಇದೀಗ, ಅವರು ನಿವೃತ್ತಿ ಘೋಷಿಸಿದ್ದು, ಐಪಿಎಲ್‌ನಿಂದಲೂ ಹೊರಗುಳಿಯಲಿದ್ದಾರೆ. ಅದಾಗ್ಯೂ, ಐಪಿಎಲ್‌ ಜೊತೆಗೆ ಮುಂದುವರೆಯಲಿದ್ದು, ಕೋಲ್ಕತ್ತ ನೈಟ್ ರೈಡರ್ಸ್‌ ತಂಡಕ್ಕೆ ಮೆಂಟರ್ ಆಗಿ ಸೇರಿಲಿದ್ದಾರೆ.

2021ರಲ್ಲಿ ಬ್ರಾವೊ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಅಲ್ಲದೆ, ಕಳೆದ ವರ್ಷ ನಡೆದ ಐಪಿಎಲ್‌ ಟೂರ್ನಿಯಲ್ಲಿ ಆಡಿದ್ದು, ಅವರು ಟೂರ್ನಿ ಮುಗಿದ ಬಳಿಕ ಐಪಿಎಲ್‌ಗೆ ನಿವೃತ್ತಿ ಘೋಷಿಸಿದ್ದರು.

ಇನ್ನು, ಬ್ರಾವೊ ಅವರು ಕೆಕೆಆರ್‌ ತಂಡದ ಮೆಂಟರ್‌ ಆಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕೆಕೆಆರ್‌ ಗ್ರೂಪ್‌ ಸಿಇಒ ವೆಂಕಿ ಮೈಸೂರ್, “ಬ್ರಾವೊ ಅವರು ತಂಡಕ್ಕೆ ಸೇರುತ್ತಿರುವುದು ಸಂತಸ ತಂದಿದೆ. ಗೆಲ್ಲಬೇಕೆಂಬ ಅವರ ತುಡಿತ, ಕ್ರಿಕೆಟ್ ವೃತ್ತಿಯಲ್ಲಿ ಅವರ ಅನುಭವ ಮತ್ತು ಜ್ಞಾನವು ನಮ್ಮ ಫ್ರಾಂಚೈಸಿ ಮತ್ತು ಆಟಗಾರರಿಗೆ ನೆರವಾಗಲಿದೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

RCBಯದ್ದು ಕಳ್ಳ ಒಪ್ಪಂದ; ಆರ್‌ ಅಶ್ವಿನ್ ಬಹಿರಂಗ ಟೀಕೆ

2025ರ ಐಪಿಎಲ್‌ ಟೂರ್ನಿಗಾಗಿ ನಡೆದ ಮೆಗಾ ಹರಾಜಿನ ಸಮಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್...

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

Download Eedina App Android / iOS

X