ಬ್ರೆಜಿಲ್‌| ಭಾರೀ ಮಳೆಯಿಂದ ಪ್ರವಾಹ; 78 ಸಾವು- 1,15,000ಕ್ಕೂ ಅಧಿಕ ಜನರ ಸ್ಥಳಾಂತರ

Date:

ಬ್ರೆಜಿಲ್‌ನ ದಕ್ಷಿಣ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿ ಈವರೆಗೆ ಕನಿಷ್ಠ 78 ಮಂದಿ ಸಾವನ್ನಪ್ಪಿದ್ದಾರೆ. 115,000 ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ. ಇನ್ನೂ ಹಲವಾರು ಮಂದಿ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

- Advertisement -

ರಾಜ್ಯ ನಾಗರಿಕ ರಕ್ಷಣಾ ಪ್ರಾಧಿಕಾರದ ಪ್ರಕಾರ, ಭಾನುವಾರದವರೆಗೆ ಸುಮಾರು 105 ಜನರು ನಾಪತ್ತೆಯಾಗಿದ್ದಾರೆ. ಇದರಿಂದಾಗಿ ಸಾವಿನ ಸಂಖ್ಯೆ ಇನ್ನೂ ಗಣನೀಯವಾಗಿ ಹೆಚ್ಚಾಗಬಹುದು. ಇದಕ್ಕೂ ಹಿಂದಿನ ದಿನ 70 ಮಂದಿ ಮೃತಪಟ್ಟಿರುವುದು ಖಚಿತವಾಗಿದ್ದು ಪ್ರಸ್ತುತ ಆ ಸಂಖ್ಯೆ 78ಕ್ಕೆ ಏರಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಕಳೆದ ಕೆಲವು ದಿನಗಳಲ್ಲಿ ಚಂಡಮಾರುತದಿಂದ ಭಾರೀ ಮಳೆಯಾಗಿ ಪ್ರವಾಹ ಉಂಟಾಗಿದೆ. ಈ ಪ್ರವಾಹವು ಉರುಗ್ವೆ ಮತ್ತು ಅರ್ಜೆಂಟೀನಾದ ಗಡಿಯಲ್ಲಿರುವ ರಾಜ್ಯದ ಸುಮಾರು 500 ನಗರಗಳಲ್ಲಿ ಮೂರನೇ ಎರಡಕ್ಕಿಂತ ಹೆಚ್ಚು ಭಾಗದ ಮೇಲೆ ಪ್ರಭಾವ ಬೀರಿದೆ. 1,15,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ಮರುಭೂಮಿ ದೇಶ ದುಬೈನಲ್ಲಿ ಭಾರೀ ಮಳೆಯಿಂದ ಪ್ರವಾಹ; ಒಮಾನ್​ನಲ್ಲಿ 18 ಮಂದಿ ಸಾವು

ಪ್ರವಾಹದಿಂದಾಗಿ ಹಲವಾರು ನಗರಗಳಲ್ಲಿ ರಸ್ತೆಗಳು ಮತ್ತು ಸೇತುವೆಗಳು ನಾಶವಾಗಿದೆ. ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು ಸಣ್ಣ ಜಲವಿದ್ಯುತ್ ಸ್ಥಾವರದಲ್ಲಿ ಅಣೆಕಟ್ಟಿನಲ್ಲಿ ಭಾಗಶಃ ಕುಸಿತವಾಗಿದೆ. ಇದರಿಂದಾಗಿ 400,000ಕ್ಕೂ ಹೆಚ್ಚು ಜನರಿಗೆ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಸುಮಾರು ಮೂರನೇ ಒಂದು ಭಾಗದಷ್ಟು ಜನರು ನೀರಿಲ್ಲದೆ ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋರ್ಟೊ ಅಲೆಗ್ರೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಶುಕ್ರವಾರದಿಂದ ಎಲ್ಲಾ ವಿಮಾನಗಳನ್ನು ಸ್ಥಗಿತಗೊಳಿಸಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಮೆನ್ ರಾಷ್ಟ್ರಪತಿ ಭವನದ ಮೇಲೆ ಹೂತಿಗಳ ಕ್ಷಿಪಣಿ ದಾಳಿ: ಐವರ ಸಾವು

ಯಮೆನ್‌ನ ದಕ್ಷಿಣ ಭಾಗದ ಪ್ರಮುಖ ನಗರವಾದ ಅದನ್‌ನಲ್ಲಿರುವ ಅಲ್-ಮಾಶಿಕ್ ರಾಷ್ಟ್ರಪತಿ ಭವನದ...

ಭಾರತದ ಮೇಲೆ ಶೇ.100 ಸುಂಕ: 10 ದಿನಗಳಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅಂತಿಮ ತೀರ್ಮಾನ!

ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಶೇ. 100ರಷ್ಟು ಭಾರಿ ಆಮದು...

ರಾತ್ರಿ ವೇಳೆಯಲ್ಲೂ ರವಿ; ಸೂರ್ಯನ ಬೆಳಕು ಮಾರಾಟ ಮಾಡಲು ಅಮೆರಿಕ-ಭಾರತ ಸಹಭಾಗಿತ್ವ: ಏನಿದು ಯೋಜನೆ?

ವಿಜ್ಞಾನ ಕಲ್ಪನೆಗಳಿಗಿಂತಲೂ ಮಿಗಿಲಾದ ಅಪರೂಪದ ಯೋಜನೆಯೊಂದು ಈಗ ಜಾಗತಿಕ ಇಂಧನ ಕ್ಷೇತ್ರದಲ್ಲಿ...

ಸೌದಿ ಅರಾಮ್ಕೊ ಪ್ರಧಾನ ಕಚೇರಿ ಮೇಲೆ ದಾಳಿ: ಮತ್ತೆ ಪುಟಿದೆದ್ದರೇ ಹೂತಿ ಬಂಡುಕೋರರು?

ಯೆಮನ್‌ನ ಹೂತಿ ಬಂಡುಕೋರರು ಸೌದಿ ಅರೇಬಿಯಾದ ಧಹ್ರಾನ್‌ನಲ್ಲಿರುವ ತೈಲ ದೈತ್ಯ ಕಂಪನಿ...