BRICS ಶೃಂಗಸಭೆ | ಭಾರತಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್‌ ಭೇಟಿ?

Date:

ಇದೇ ಸೆಪ್ಟೆಂಬರ್‌ 12 ಮತ್ತು 13ರಂದು ನವದೆಹಲಿಯಲ್ಲಿ ನಡೆಯಲಿರುವ ಬ್ರಿಕ್ಸ್‌ (BRICS) ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಭಾರತಕ್ಕೆ ಆಗಮಿಸುವ ಸಾಧ್ಯತೆಯಿದೆ. ಅವರ ಪ್ರವಾಸ ಅಧಿಕೃತವಾಗಿ ಖಚಿತವಾದರೆ, 2020ರ ಗಾಲ್ವಾನ್‌ ಕಣಿವೆ ಸಂಘರ್ಷದ ಬಳಿಕ ಷಿ ಜಿನ್‌ಪಿಂಗ್‌ ಕೈಗೊಳ್ಳುತ್ತಿರುವ ಮೊದಲ ಭಾರತ ಪ್ರವಾಸ ಇದಾಗಲಿದೆ.

- Advertisement -

ಷಿ ಜಿನ್‌ಪಿಂಗ್‌ ಅವರು ಸುಮಾರು 400 ಅಧಿಕಾರಿಗಳನ್ನೊಳಗೊಂಡ ಬೃಹತ್‌ ನಿಯೋಗದೊಂದಿಗೆ ಭಾರತಕ್ಕೆ ಬರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. 2019ರಲ್ಲಿ ಅವರು ಭಾರತಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಆಗಮಿಸಿದ್ದ ನಿಯೋಗಕ್ಕೆ ಹೋಲಿಸಿದರೆ ಈ ಬಾರಿ ನಿಯೋಗದ ಗಾತ್ರ ಸುಮಾರು ಎರಡು ಪಟ್ಟು ಹೆಚ್ಚಿರಲಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಭಾರತ-ಚೀನಾ ನಡುವಿನ ರಾಜತಾಂತ್ರಿಕ ಮಾತುಕತೆಗಳು ಮತ್ತೆ ಚುರುಕುಗೊಂಡಿರುವ ಸಂದರ್ಭದಲ್ಲೇ ಷಿ ಜಿನ್‌ಪಿಂಗ್‌ ಅವರ ಸಂಭಾವ್ಯ ಭಾರತ ಭೇಟಿಯ ಸುದ್ದಿ ಹೊರಬಿದ್ದಿದೆ. ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರು ಗಡಿ ವಿವಾದಕ್ಕೆ ಸಂಬಂಧಿಸಿದ 25ನೇ ಸುತ್ತಿನ ವಿಶೇಷ ಪ್ರತಿನಿಧಿಗಳ (SR) ಮಟ್ಟದ ಮಾತುಕತೆಗಾಗಿ ಚೀನಾಕ್ಕೆ ತೆರಳಿದ್ದಾರೆ.

ಜಿನ್‌ಪಿಂಗ್‌ ಅವರ ಭೇಟಿಯ ಹಿನ್ನೆಲೆಯಲ್ಲಿ ಭದ್ರತೆ, ವಸತಿ ಸೇರಿದಂತೆ ಅಗತ್ಯ ಸಿದ್ಧತೆಗಳ ಕುರಿತು ಎರಡೂ ದೇಶಗಳ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಿನ್‌ಪಿಂಗ್‌ ಅವರ ಭಾರತ ಪ್ರವಾಸವನ್ನು ಚೀನಾ ವಿದೇಶಾಂಗ ಸಚಿವಾಲಯವಾಗಲಿ ಅಥವಾ ಭಾರತ ಸರ್ಕಾರವಾಗಲಿ ಇನ್ನೂ ಅಧಿಕೃತವಾಗಿ ಖಚಿತಪಡಿಸಿಲ್ಲ.

ಈ ಕುರಿತು ಪ್ರತಿಕ್ರಿಯಿಸಿರುವ ಚೀನಾ, BRICS ಸಹಕಾರಕ್ಕೆ ತಾನು ಹೆಚ್ಚಿನ ಮಹತ್ವ ನೀಡುತ್ತಿದ್ದು, ಭಾರತ ಆಯೋಜಿಸುತ್ತಿರುವ ಶೃಂಗಸಭೆಗೆ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದೆ.

ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಜಿನ್‌ಪಿಂಗ್‌ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯುವ ಸಾಧ್ಯತೆಯೂ ಇದೆ. ಉಭಯ ನಾಯಕರ ಭೇಟಿ ನಡೆದರೆ, ಗಡಿ ವಿವಾದ ಸೇರಿದಂತೆ ಭಾರತ-ಚೀನಾ ಸಂಬಂಧಗಳ ಹಲವು ಪ್ರಮುಖ ವಿಚಾರಗಳು ಚರ್ಚೆಗೆ ಬರುವ ಸಾಧ್ಯತೆಯಿದೆ.

2020ರ ಜೂನ್‌ನಲ್ಲಿ ಪೂರ್ವ ಲಡಾಖ್‌ನ ಗಾಲ್ವಾನ್‌ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೇನೆಗಳ ನಡುವೆ ನಡೆದ ಸಂಘರ್ಷದಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದರು. ಈ ಘಟನೆ ಬಳಿಕ ಎರಡೂ ದೇಶಗಳ ನಡುವಿನ ಸಂಬಂಧ ತೀವ್ರವಾಗಿ ಹದಗೆಟ್ಟಿತ್ತು.

ಚೀನಾದ ಹೂಡಿಕೆಗಳು ಹಾಗೂ ಹಲವು ಮೊಬೈಲ್‌ ಆ್ಯಪ್‌ಗಳ ಮೇಲೆ ಭಾರತ ಕಠಿಣ ನಿರ್ಬಂಧಗಳನ್ನು ವಿಧಿಸಿತ್ತು. ಗಡಿ ಪ್ರದೇಶದಲ್ಲಿ ಸೇನಾ ನಿಯೋಜನೆ ಹೆಚ್ಚಿಸುವುದರೊಂದಿಗೆ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳ ಮೇಲೂ ಸಂಘರ್ಷದ ಪರಿಣಾಮ ಬೀರಿತ್ತು.

ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಕೂಡ 2020ರಿಂದ 2024ರವರೆಗೆ ಗಡಿ ಪರಿಸ್ಥಿತಿಯಿಂದಾಗಿ ಭಾರತ-ಚೀನಾ ಸಂಬಂಧಗಳು ಕಠಿಣ ಹಂತದಲ್ಲಿದ್ದವು ಎಂದು ಇತ್ತೀಚೆಗೆ ಹೇಳಿದ್ದರು. ಸಂಬಂಧಗಳು ಸಹಜ ಸ್ಥಿತಿಗೆ ಮರಳಲು ಗಡಿ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಕಾಪಾಡುವುದು ಅತ್ಯಂತ ಅಗತ್ಯ ಎಂದೂ ಅವರು ಹೇಳಿದ್ದರು.

ಇದನ್ನೂ ಓದಿ: ವಿದೇಶಕ್ಕೆ ಕಳುಹಿಸುವುದಾಗಿ ನಂಬಿಸಿ ವಂಚನೆ: ಮಾನವ ಕಳ್ಳಸಾಗಣೆ ಕುರಿತು ಪಂಜಾಬ್‌-ಹರಿಯಾಣ ಹೈಕೋರ್ಟ್‌ ಕಳವಳ

ಅರುಣಾಚಲ ಪ್ರದೇಶದ ಹಲವು ಸ್ಥಳಗಳಿಗೆ ಚೀನಾ ಮರುನಾಮಕರಣ ಮಾಡಲು ನಡೆಸಿದ ಪ್ರಯತ್ನಗಳನ್ನೂ ಭಾರತ ತೀವ್ರವಾಗಿ ತಿರಸ್ಕರಿಸಿದ್ದು, ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ ಎಂಬ ನಿಲುವನ್ನು ಪುನರುಚ್ಚರಿಸಿದೆ.

ಜಿನ್‌ಪಿಂಗ್‌ ಅವರು ಕೊನೆಯ ಬಾರಿ 2019ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು. ಅಕ್ಟೋಬರ್‌ 11 ಮತ್ತು 12ರಂದು ತಮಿಳುನಾಡಿನ ಮಹಾಬಲಿಪುರಂನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಜಿನ್‌ಪಿಂಗ್‌ ನಡುವೆ ಎರಡನೇ ಅನೌಪಚಾರಿಕ ಶೃಂಗಸಭೆ ನಡೆದಿತ್ತು.

ಹೀಗಾಗಿ, ಈ ಬಾರಿ ಜಿನ್‌ಪಿಂಗ್‌ ಅವರ ಭಾರತ ಭೇಟಿ ಅಧಿಕೃತವಾಗಿ ಖಚಿತವಾದರೆ, ಗಾಲ್ವಾನ್‌ ಸಂಘರ್ಷದ ಬಳಿಕ ಉಭಯ ದೇಶಗಳ ನಡುವಿನ ಸಂಬಂಧದಲ್ಲಿ ಮಹತ್ವದ ರಾಜತಾಂತ್ರಿಕ ಬೆಳವಣಿಗೆಯಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...