ಟ್ರಂಪ್‌ ಭಾಷಣ ತಿದ್ದಿದ ಆರೋಪ: ಬಿಬಿಸಿಯ ಇಬ್ಬರು ಮುಖ್ಯಸ್ಥರ ರಾಜೀನಾಮೆ

Date:

ಬ್ರಿಟನ್‌ನ ಪ್ರಸಿದ್ಧ ಪ್ರಸಾರ ಸಂಸ್ಥೆ ಬಿಬಿಸಿ ಸುದ್ದಿ ವಾಹಿನಿಯಲ್ಲಿ ಮಹತ್ವದ ಬದಲಾವಣೆ ಸಂಭವಿಸಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾಷಣವನ್ನು ತಪ್ಪಾಗಿ ಎಡಿಟ್ ಮಾಡಿ ತೋರಿಸಿದ್ದಕ್ಕೆ ಮತ್ತು ಪಕ್ಷಪಾತದ ಆರೋಪದ ಕಾರಣಕ್ಕೆ ಸಂಸ್ಥೆಯ ಮಹಾ ನಿರ್ದೇಶಕ ಟಿಮ್ ಡೇವಿ ಹಾಗೂ ಸುದ್ದಿವಿಭಾಗದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡೆಬೋರಾ ಟರ್ನೆಸ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -

ಬಿಬಿಸಿ ತಯಾರಿಸಿದ ಒಂದು ಡಾಕ್ಯುಮೆಂಟರಿಯಲ್ಲಿ, ಡೊನಾಲ್ಡ್ ಟ್ರಂಪ್ ಅವರ ಭಾಷಣದ ಎರಡು ಬೇರೆ ಬೇರೆ ಭಾಗಗಳನ್ನು ಸೇರಿಸಿ, ಅವರು 2021ರ ಜನವರಿ 6ರಂದು ನಡೆದ ಕ್ಯಾಪಿಟಲ್ ಹಿಲ್ ಗಲಭೆಗೆ ಜನರನ್ನು ಪ್ರಚೋದಿಸಿದಂತೆ ತೋರಿಸಲಾಗಿದೆ ಎಂದು ಟೀಕೆಗಳು ಕೇಳಿಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಟಿಮ್ ಡೇವಿ ರಾಜೀನಾಮೆ ಘೋಷಿಸಿ, “ಈ ನಿರ್ಧಾರ ನನ್ನದಾಗಿದೆ. ಕೆಲಸದ ಒತ್ತಡವೂ ಹೆಚ್ಚಾಗಿದೆ, ಹೊಸ ವ್ಯಕ್ತಿಗೆ ಅವಕಾಶ ಕೊಡಲು ಬಯಸುತ್ತೇನೆ” ಎಂದಿದ್ದಾರೆ. ಹಾಗೆಯೇ ಡೆಬೋರಾ ಟರ್ನೆಸ್ ಸಹ “ಸಂಸ್ಥೆಯ ವಿಶ್ವಾಸ ಮತ್ತು ನಿಷ್ಠೆ ಕಾಪಾಡುವುದು ಮುಖ್ಯ” ಎಂದು ಹೇಳಿ ರಾಜೀನಾಮೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ʼವಂದೇ ಮಾತರಂ’ವಿವಾದ; ಪರಿವಾರ- ಪ್ರಧಾನಿ ಪೋಣಿಸಿದ ಸುಳ್ಳುಗಳ ಬೊಂತೆ

ಈ ತಪ್ಪು ಡೈಲಿ ಟೆಲಿಗ್ರಾಫ್ ಪತ್ರಿಕೆಯಲ್ಲಿ ಬಿಬಿಸಿಯ ಮಾಜಿ ಸಂಪಾದನಾ ಸಲಹೆಗಾರ ಮೈಕಲ್ ಪ್ರೆಸ್‌ಕಾಟ್‌ ಅವರ ದಾಖಲೆಗಳ ಮೂಲಕ ಬಯಲಾಗಿತ್ತು. ಈ ದಾಖಲೆಯಲ್ಲಿ ಟ್ರಂಪ್ ವಿಷಯದ ಜೊತೆಗೆ ಇಸ್ರೇಲ್-ಹಮಾಸ್ ಯುದ್ಧ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ವಿಷಯಗಳಲ್ಲಿಯೂ ಬಿಬಿಸಿಯ ಪಕ್ಷಪಾತದ ತಪ್ಪುಗಳನ್ನು ಪಟ್ಟಿ ಮಾಡಲಾಗಿತ್ತು.

ಟ್ರಂಪ್‌ರ ಮಾಧ್ಯಮ ಕಾರ್ಯದರ್ಶಿ ಕರೋಲಿನ್ ಲೆವಿಟ್ ಶುಕ್ರವಾರ ಪ್ರಕಟವಾದ ಸಂದರ್ಶನದಲ್ಲಿ ಬಿಬಿಸಿಯನ್ನು ಶೇ. 100 ನಕಲಿ ಸುದ್ದಿ ಹಾಗೂ ಪ್ರಚಾರ ಯಂತ್ರ ಎಂದು ಟೀಕಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...