ಅಮೆರಿಕನ್ ರೈಲಿನಲ್ಲಿ ಉಕ್ರೇನಿಯನ್ ನಿರಾಶ್ರಿತರ ಬರ್ಬರ ಕೊಲೆ; ಭಯಾನಕ ವಿಡಿಯೋ ವೈರಲ್

Date:

ಉಕ್ರೇನ್-ರಷ್ಯಾ ಯುದ್ಧದಿಂದ ನೊಂದಿದ್ದ ಯುವತಿಯೊಬ್ಬರು, ಅಮೆರಿಕದಲ್ಲಿ ಸುರಕ್ಷಿತ ಜೀವನ ಕಟ್ಟಿಕೊಳ್ಳಬಹುದು ಎಂಬ ಕನಸು ಹೊತ್ತು ಬಂದಿದ್ದರು. ಆದರೆ, ಆಕೆಯನ್ನು ಅಮೆರಿಕದ ರೈಲಿನಲ್ಲಿ ಬರ್ಬರವಾಗಿ ಇರಿದು ಕೊಲ್ಲಲಾಗಿದೆ. ಘಟನೆಯ ವಿಡಿಯೋ ರೈಲಿನಲ್ಲಿದ್ದ ಕಣ್ಗಾವಲು ಕ್ಯಾಮೆರಾದಲ್ಲಿ ಸೆರೆಯಾಗಿದೆ.

- Advertisement -

ಮೃತರನ್ನು 23 ವರ್ಷದ ಐರಿನಾ ಜರುಟ್ಸ್ಕಾ ಎಂದು ಗುರುತಿಸಲಾಗಿದೆ. ಆಕೆಯನ್ನು ರೈಲಿನ ಅಧಿಕಾರಿಯೇ ಕೊಂದಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

‘ಷಾರ್ಲೆಟ್ ಏರಿಯಾ ಟ್ರಾನ್ಸಿಟ್ ಸಿಸ್ಟಮ್’ ಘಟನೆ ದೃಶ್ಯಗಳನ್ನು ಬಿಡುಗಡೆ ಮಾಡಿದೆ. ಉತ್ತರ ಕೆರೊಲಿನಾದ ಷಾರ್ಲೆಟ್‌ನಲ್ಲಿ ಆಗಸ್ಟ್ 22ರಂದು ಘಟನೆ ನಡೆದಿದೆ. ಅಂದು ರಾತ್ರಿ ಸುಮಾರು 10 ಗಂಟೆಯ ಸಮಯದಲ್ಲಿ ಜರುಟ್ಸ್ಕಾ ಅವರು ಷಾರ್ಲಟ್‌ ಪ್ಲಾಟ್‌ಫಾರ್ಮ್‌ನಲ್ಲಿ ರೈಲು ಹತ್ತಿದ್ದಾರೆ. ರೈಲಿನಲ್ಲಿ ಮೊಬೈಲ್ ನೋಡುತ್ತಾ ಕುಳಿತಿದ್ದಾರೆ. ಅವರ ಹಿಂದಿನ ಸೀಟ್‌ನಲ್ಲಿ 34 ವರ್ಷದ ಡೆಕಾರ್ಲೋಸ್ ಬ್ರೌನ್ ಜೂನಿಯರ್ ಎಂಬಾತ ಕುಳಿತಿದ್ದ. ರೈಲು ಹೊರಟ 4 ನಿಮಿಷಗಳ ಬಳಿಕ, ಆತ ಆಕೆಯ ಮೇಲೆ ದಾಳಿ ಮಾಡಿ, ಚಾಕುವಿನಿಂದ ಬರ್ಬರವಾಗಿ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಗೈದ ಆರೋಪಿ ಬ್ರೌನ್ ಮುಂದಿನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಪ್ಲಾಟ್‌ಫಾರ್ಮ್ ಬಳಿ ಬಿದ್ದದ್ದ ಆತ ಬಳಸಿದ್ದ ಚಾಕುವನ್ನು ವಶಕ್ಕೆ ಪಡೆದಿದ್ದಾರೆ. ಷಾರ್ಲೆಟ್-ಮೆಕ್ಲೆನ್‌ಬರ್ಗ್ ಪೊಲೀಸ್ ಇಲಾಖೆಯ ಪ್ರಕಾರ, ಬಂಧನಕ್ಕೆ ಒಳಗಾಗುವ ಮೊದಲು ಅವರ ಕೈಯಲ್ಲಿ ಗಾಯವಾಗಿದ್ದಕ್ಕಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು ಮತ್ತು ಪ್ರಥಮ ದರ್ಜೆ ಕೊಲೆ ಆರೋಪ ಹೊರಿಸಲಾಯಿತು.

ಆರೋಪಿ ಬ್ರೌನ್‌ 2011ರಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದರಲ್ಲಿಯೂ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...