15 ಪಾಕ್‌ ಮೀನುಗಾರರನ್ನು ಬಂಧಿಸಿದ ಬಿಎಸ್ಎಫ್

Date:

Advertisements

ಕಛ್ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿ ಬಳಿ 15 ಮಂದಿ ಪಾಕಿಸ್ತಾನಿ ಮೀನುಗಾರರನ್ನು ಸೆರೆ ಹಿಡಿದಿರುವ ಗಡಿ ಭದ್ರತಾ ಪಡೆ, ಅವರಿಂದ ಒಂದು ಯಾಂತ್ರಿಕ ನಾಡದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಭಾನುವಾರ ಗಡಿ ಭದ್ರತಾ ಪಡೆ ತಿಳಿಸಿದೆ.

ಗುಜರಾತ್ ರಾಜ್ಯದ ಕಛ್ ಪ್ರಾಂತ್ಯದಲ್ಲಿನ ಕೋರಿ ಕ್ರೀಕ್ ಬಳಿಯ ಗಡಿ ಹೊರಠಾಣೆ ಬಳಿಯ ಸಾಮಾನ್ಯ ಪ್ರದೇಶದಲ್ಲಿ ಅಪರಿಚಿತ ದೋಣಿಯೊಂದು ಪತ್ತೆಯಾಗಿದೆ ಎಂಬ ನಿಖರ ಮಾಹಿತಿಯನ್ನು ಆಧರಿಸಿ, ಗಡಿ ಭದ್ರತಾ ಪಡೆಯು ಶನಿವಾರ ಶೋಧ ಕಾರ್ಯಾಚರಣೆಗೆ ಚಾಲನೆ ನೀಡಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಲೆಮಾರಿ ಸಮುದಾಯಗಳಿಗೆ ಅನ್ಯಾಯ – ಜಾತಿಗಣತಿಯ ಮೇಲೂ ಕರಿನೆರಳು: ರಾಹುಲ್‌ ಗಾಂಧಿ ಗಮನಿಸುವರೇ?

Advertisements

“ಅಕ್ಕಪಕ್ಕದ ತೀರಗಳಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಲಾಯಿತು ಹಾಗೂ ಈ ಶೋಧ ಕಾರ್ಯಾಚರಣೆಯ ವೇಳೆ 60 ಕೆಜಿ ಮೀನು, ಒಂಬತ್ತು ಮೀನುಗಾರಿಕೆಯ ಬಲೆ, ಡೀಸೆಲ್, ಆಹಾರ ಸಾಮಗ್ರಿಗಳು ಹಾಗೂ ಮರದ ದೊಣ್ಣೆಗಳನ್ನು ಹೊಂದಿದ್ದ ಒಂದು ಯಾಂತ್ರಿಕ ದೋಣಿಯನ್ನು ವಶಪಡಿಸಿಕೊಳ್ಳಲಾಗಿದೆ. ಇದರೊಂದರಿಗೆ ಒಂದು ಮೊಬೈಲ್ ಫೋನ್, 200 ರೂ. ಪಾಕಿಸ್ತಾನಿ ನಗದನ್ನೂ ವಶಪಡಿಸಿಕೊಳ್ಳಲಾಗಿದೆ” ಎಂದು ಗಡಿ ಭದ್ರತಾ ಪಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

ಜಮ್ಮು ಕಾಶ್ಮೀರ ಮೇಘಸ್ಫೋಟ: ಹತ್ತನೇ ದಿನಕ್ಕೆ ಕಾಲಿಟ್ಟ ಕಾರ್ಯಾಚರಣೆ, ಇನ್ನೂ 36 ಮಂದಿ ನಾಪತ್ತೆ

ಜಮ್ಮು ಕಾಶ್ಮೀರ ಮೇಘಸ್ಫೋಟ ದುರಂತದಲ್ಲಿ ಕನಿಷ್ಠ 68 ಮಂದಿ ಸಾವನ್ನಪ್ಪಿ 36...

ಬ್ಯಾಂಕ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ನಿವಾಸದ ಮೇಲೆ ಸಿಬಿಐ ದಾಳಿ, ಎಫ್‌ಐಆರ್ ದಾಖಲು

ಸುಮಾರು ಎರಡು ಸಾವಿರ ಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ...

Download Eedina App Android / iOS

X