ಕ್ಯಾಲಿಫೋರ್ನಿಯಾ ಕಾಡ್ಗಿಚ್ಚಿಗೆ ಐವರು ಸಾವು: 70 ಸಾವಿರ ಮಂದಿ ಸ್ಥಳಾಂತರ, ಹಾಲಿವುಡ್‌ ನಟರ ಕಟ್ಟಡಗಳು ಭಸ್ಮ

Date:

Advertisements

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಉಂಟಾಗಿರುವ ಭೀಕರ ಕಾಡ್ಗಿಚ್ಚಿಗೆ ಐವರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಬೆಂಕಿಯ ಅನಾಹುತದಲ್ಲಿ 1 ಸಾವಿರಕ್ಕೂ ಹೆಚ್ಚು ಕಟ್ಟಡಗಳು ಹಾನಿಯಾಗಿವೆ. ಸುಮಾರು ಅರಣ್ಯ ಸಮೀಪವಿರುವ 70 ಸಾವಿರ ಜನರನ್ನು ಸ್ಥಳದಿಂದ ಸ್ಥಳಾಂತರಿಸಲಾಗಿದೆ. ಕ್ಯಾಲಿಫೋರ್ನಿಯಾ ರಾಜ್ಯ ಸರ್ಕಾರ ಕೂಡ ಕಾಡ್ಗಿಚ್ಚು ತುರ್ತುಪರಿಸ್ಥಿತಿ ಘೋಷಿಸಿದೆ.

ಕಾಡ್ಗಿಚ್ಚಿನ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರು ತಮ್ಮ ಮುಂಬರುವ ಇಟಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿರುವ ಅವರು ಕಾಡ್ಗಿಚ್ಚು ತಡೆಯುವ ನಿಟ್ಟಿನಲ್ಲಿ ಎಲ್ಲ ರೀತಿಯ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ. ಬೈಡನ್‌ ಅವರು ಜನವರಿ 9ರಿಂದ 12ರವರೆಗೆ ಇಟಲಿಯಲ್ಲಿ ಪೋಪ್‌ ಫ್ರಾನ್ಸಿಸ್‌ ಅವರನ್ನು ಭೇಟಿ ಮಾಡುವ ಕಾರ್ಯಕ್ರಮವಿತ್ತು.

ಕ್ಯಾಲಿಫೋರ್ನಿಯಾದ ಲಾಸ್‌ ಏಂಜಲಿಸ್‌ನಲ್ಲಿ ಕಳೆದ ಒಂದು ವಾರದಿಂದ ಸಂಭವಿಸಿರುವ ಕಾಡ್ಗಿಚ್ಚಿನಿಂದ ಕಾಡಿನ ಸಮೀಪವಿರುವ ಪ್ರಮುಖ ಪ್ರದೇಶಗಳು ಹಾನಿಗೊಳಗಾಗಿವೆ. ಬೆಂಕಿಯನ್ನು ಶಮನಗೊಳಿಸಲು ಅಗ್ನಿಶಾಮಕ ಸಿಬ್ಬಂದಿ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾವೋವಾದಿಗಳು ಮುಖ್ಯವಾಹಿನಿಗೆ ಮರಳುತ್ತಿರುವುದು ಸ್ವಾಗತಾರ್ಹ

ಅಮೆರಿಕದ ಎರಡನೇ ಪ್ರಮುಖ ನಗರವಾಗಿರುವ ಲಾಸ್‌ ಏಂಜಲೀಸ್‌ನಲ್ಲಿ ಕೆಲವು ದಿನಗಳಲ್ಲಿ ಹಾಲಿವುಡ್‌ ಕಾರ್ಯಕ್ರಮಗಳು ಜರುಗಬೇಕಿತ್ತು. ಆದರೆ ಕಾಡ್ಗಿಚ್ಚಿನಿಂದಾಗಿ ಸಮಾರಂಭವನ್ನು ರದ್ದುಗೊಳಿಸಲಾಗಿದೆ.

ದುರಂತದಲ್ಲಿ ನೂರಕ್ಕೂ ಹೆಚ್ಚು ಮನೆಗಳು ನಾಶವಾಗಿವೆ. ಅರಣ್ಯ ಸನಿಹದ ಪ್ರದೇಶವಾದ ಕಾರಣ ಹಾಲಿವುಡ್‌ನ ಮೊದಲ ಸಾಲಿನ ನಟರು, ಸಂಗೀತ ನಿರ್ದೇಶಕರು ಸೇರಿದಂತೆ ನೂರಾರು ಗಣ್ಯರು ಲಾಸ್ ಏಂಜಲೀಸ್‌ನ ಪಲಿಸಡೆಸ್‌ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಗಣ್ಯರ ಕೋಟ್ಯಂತರ ಡಾಲರ್‌ ಬೆಲೆಬಾಳುವ ಮನೆಗಳು ಸುಟ್ಟು ಕರುಕಲಾಗಿವೆ ಎಂದು ವರದಿಗಳು ತಿಳಿಸಿವೆ.  

ಲಾಸ್‌ ಏಂಜಲೀಸ್‌ನಲ್ಲಿ ಹಬ್ಬಿದ ಕಾಡ್ಗಿಚ್ಚಿನಿಂದ ಸುಮಾರು 42,000 ಕೋಟಿ ರೂ. ಸಂಪತ್ತು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ನಿಯಂತ್ರಣಕ್ಕೆ ಬಾರದ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಸಮರೋಪಾದಿ ಕಾರ್ಯಾಚರಣೆ ನಡೆಸುತ್ತಿದೆ. ಬುಧವಾರ ಅಗ್ನಿಶಾಮಕ ದಳದ ಬೆಂಕಿ ನಂದಿಸುವ ಕಾರ್ಯ ಬಹುತೇಕ ಯಶಸ್ವಿಯಾಗುವ ಸಾಧ್ಯತೆಗಳಿತ್ತು. ಈ ವೇಳೆ ಚಂಡಮಾರುತ ಗಾಳಿ ಬೀಸಿದ್ದರಿಂದ ಬೆಂಕಿ ಕೆನ್ನಾಲಿಗೆ ಮತ್ತಷ್ಟು ವ್ಯಾಪಿಸಿತು ಎಂದು ವರದಿ ಹೇಳಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ...

Download Eedina App Android / iOS

X