ಕೆನಡಾ | ಟೇಕಾಫ್ ಆಗುತ್ತಿದ್ದಂತೆಯೇ 389 ಪ್ರಯಾಣಿಕರಿದ್ದ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ; ವಿಡಿಯೋ ವೈರಲ್

Date:

389 ಪ್ರಯಾಣಿಕರು ಮತ್ತು 13 ಸಿಬ್ಬಂದಿಗಳೊಂದಿಗೆ ಪ್ಯಾರಿಸ್‌ಗೆ ತೆರಳುತ್ತಿದ್ದ ಕೆನಡಾದ ವಿಮಾನವೊಂದು ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ಜೂನ್ 5ರಂದು ನಡೆದಿದ್ದು, ತಡವಾಗಿ ವರದಿಯಾಗಿದೆ. ಬೆಂಕಿ ಹೊತ್ತಿಕೊಂಡ ದೃಶ್ಯವು ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

- Advertisement -

ಏರ್ ಕೆನಡಾ ಸಂಸ್ಥೆಗೆ ಸೇರಿದ AC872 ವಿಮಾನವು ಜೂನ್ 5 ರಂದು ಟೊರೊಂಟೋದಿಂದ ಪ್ಯಾರಿಸ್‌ಗೆ ಹೊರಟಿತ್ತು. ಇದು ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬೆಂಕಿ ಕಾಣಿಸಿಕೊಂಡ ಕೂಡಲೇ ಏರ್ ಕಂಟ್ರೋಲ್ ಅಧಿಕಾರಿಯು ಪೈಲಟ್‌ಗಳಿಗೆ ಮಾಹಿತಿ ನೀಡಿದ್ದರಿಂದ ಅರ್ಧಗಂಟೆಯ ಬಳಿಕ ಮತ್ತೆ ಟೊರೊಂಟೊಗೆ ಮರಳಿ, ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಬಗ್ಗೆ ಮಾಹಿತಿ ನೀಡಿರುವ ಏರ್ ಕೆನಡಾ, “AC872 ವಿಮಾನವು ಜೂನ್ 5 ರಂದು ಟೊರೊಂಟೋದಿಂದ ಪ್ಯಾರಿಸ್‌ಗೆ ಹೊರಟಿತ್ತು. ಇಂಜಿನ್‌ನಲ್ಲಿನ ದೋಷದಿಂದಾಗಿ ಟೇಕಾಫ್ ವೇಳೆ ಬೆಂಕಿ ಕಾಣಿಸಿದೆ. ನಿರ್ಗಮಿಸಿದ ಸ್ವಲ್ಪ ಸಮಯದ ನಂತರ ಟೊರೊಂಟೊಗೆ ಮರಳಿತು. ವಿಮಾನವು ಸುರಕ್ಷಿತವಾಗಿ ಇಳಿಯಿತು. ಬೋಯಿಂಗ್ 777 ವಿಮಾನದಲ್ಲಿ 389 ಪ್ರಯಾಣಿಕರು ಮತ್ತು 13 ಸಿಬ್ಬಂದಿ ಇದ್ದರು. ಪ್ರಯಾಣಿಕರನ್ನು ಅಂದೇ ಸಂಜೆಯ ಬಳಿಕ ಮತ್ತೊಂದು ವಿಮಾನದಲ್ಲಿ ಕಳುಹಿಸಿ ಕೊಡಲಾಗಿದೆ” ಎಂದು ತಿಳಿಸಿದೆ.

“ನಮ್ಮ ಪೈಲಟ್‌ಗಳು ಹೆಚ್ಚು ನುರಿತ ವೃತ್ತಿಪರರು. ಇಂತಹ ಘಟನೆಗಳ ಸಂದರ್ಭದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡುವ ಬಗ್ಗೆ ಚೆನ್ನಾಗಿ ತರಬೇತಿ ಪಡೆದಿದ್ದಾರೆ. ಕೇವಲ ಇಂಜಿನ್ ಮಾತ್ರವಲ್ಲದೇ, ವಿವಿಧ ಅಂಶಗಳಿಂದ ಕೂಡ ಇಂತಹ ಘಟನೆಗಳು ಉಂಟಾಗುತ್ತದೆ” ಎಂದು ಸಂಸ್ಥೆ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...