ನಿಜ್ಜಾರ್ ಹತ್ಯೆ | ಅಮಿತ್ ಶಾ ವಿರುದ್ಧದ ಕೆನಡಾ ಆರೋಪ ಕಳವಳಕಾರಿ : ಅಮೆರಿಕ

Date:

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕೆನಡಾ ಮಾಡಿದ ಆರೋಪಗಳು ಕಳವಳಕಾರಿ ಎಂದು ಬುಧವಾರ ಅಮೆರಿಕ ಹೇಳಿದೆ. ಜೊತೆಗೆ ಈ ಬಗ್ಗೆ ಕೆನಡಾದೊಂದಿಗೆ ಸಮಾಲೋಚನೆ ಮುಂದುವರಿಸುವುದಾಗಿ ಅಮೆರಿಕ ವಕ್ತಾರ ಮ್ಯಾಥ್ಯೂ ಮಿಲ್ಲರ್ ಸುದ್ದಿಗಾರರಿಗೆ ತಿಳಿಸಿದರು.

- Advertisement -

ಕೆನಡಾದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳನ್ನು ಗುರಿಯಾಗಿಸುವ ಅಭಿಯಾನದ ಹಿಂದೆ ಅಮಿತ್ ಶಾ ಇದ್ದಾರೆ ಎಂದು ಕೆನಡಾ ಆರೋಪಿಸಿರುವುದಾಗಿ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿತ್ತು. ಇದಾದ ಬಳಿಕ ಕೆನಡಾದ ರಾಷ್ಟ್ರೀಯ ಭದ್ರತೆ ಮತ್ತು ಗುಪ್ತಚರ ಸಲಹೆಗಾರರಾದ ನಥಾಲಿ ಡ್ರೊಯಿನ್ ಮತ್ತು ಉಪ ವಿದೇಶಾಂಗ ಸಚಿವ ಡೇವಿಡ್ ಮಾರಿಸನ್ ತಾವು ಈ ಆರೋಪ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಇದನ್ನು ಓದಿದ್ದೀರಾ? ‘ಖಲಿಸ್ತಾನಿ ಹೋರಾಟಗಾರರ ವಿರುದ್ಧ ಹಿಂಸಾಚಾರಕ್ಕೆ ಆದೇಶಿಸಿದ್ದೇ ಅಮಿತ್ ಶಾ’; ಕೆನಡಾ ಆರೋಪ

2023ರ ಜೂನ್‌ನಲ್ಲಿ ಕೊಲಂಬಿಯಾದಲ್ಲಿ ಕೆನಡಾದ ಸಿಖ್ ಕಾರ್ಯಕರ್ತ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯಾಗಿದೆ. ಈ ಹತ್ಯೆಯಲ್ಲಿ ಭಾರತ ಸರ್ಕಾರದ ಏಜೆಂಟರು ಭಾಗಿಯಾಗಿದ್ದಾರೆ ಎಂಬುದಕ್ಕೆ ಕೆನಡಾ ಪುರಾವೆಗಳನ್ನು ಹೊಂದಿದೆ ಎಂದು ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಒಂದು ವರ್ಷದ ಹಿಂದೆ ಹೇಳಿದ್ದರು. ಇದನ್ನು ಕೆನಡಾದ ಅಧಿಕಾರಿಗಳು ಪದೇ ಪದೇ ಪುನರುಚ್ಛರಿಸುತ್ತಿದ್ದಾರೆ.

ಆದರೆ ಕೆನಡಾ ಪುರಾವೆಗಳನ್ನು ಒದಗಿಸಿರುವುದನ್ನು ಭಾರತೀಯ ಅಧಿಕಾರಿಗಳು ಪದೇ ಪದೇ ನಿರಾಕರಿಸಿದ್ದಾರೆ. ಆರೋಪಗಳು ಅಸಂಬದ್ಧವೆಂದು ಕರೆದಿದ್ದಾರೆ. ಇದೀಗ ಕೆನಡಾದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳ ವಿರುದ್ಧದ ಅಭಿಯಾನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೆಸರು ಕೇಳಿಬಂದಿದೆ.

ಇನ್ನು ಒಟ್ಟಾವಾದಲ್ಲಿರುವ ಭಾರತದ ರಾಯಭಾರ ಕಚೇರಿಯು ಅಮಿತ್ ಶಾ ವಿರುದ್ಧದ ಆರೋಪದ ಕುರಿತು ಪ್ರತಿಕ್ರಿಯೆಯನ್ನು ನೀಡಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...