‘ಇಸ್ರೇಲ್ ಒಂದು ಶಾಪ, ನರಕದಲ್ಲಿ ಬೇಯಲಿ’: ಪಾಕ್ ರಕ್ಷಣಾ ಸಚಿವನ ಹೇಳಿಕೆಗೆ ಇಸ್ರೇಲ್ ಕೆಂಡ

Date:

ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಗೆ ಇಸ್ಲಾಮಾಬಾದ್ ವೇದಿಕೆಯಾಗುತ್ತಿರುವ ವೇಳೆಯಲ್ಲಿಯೇ, ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್ ಅವರು ಇಸ್ರೇಲ್ ವಿರುದ್ಧ ಮಾಡಿದ ತೀವ್ರ ವಾಗ್ದಾಳಿಯು ದೊಡ್ಡ ರಾಜತಾಂತ್ರಿಕ ವಿವಾದಕ್ಕೆ ಕಾರಣವಾಗಿದೆ. ಆಸಿಫ್ ಅವರ ಹೇಳಿಕೆಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಚೇರಿ ಕೆರಳಿದ್ದು, ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಪಾಕ್ ಸಚಿವರು ತಮ್ಮ ವಿವಾದಾತ್ಮಕ ‘ಎಕ್ಸ್’ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾರೆ.

- Advertisement -

ಮೊದಲು ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್, “ಇಸ್ರೇಲ್ ಒಂದು ದುಷ್ಟ ಶಕ್ತಿ ಮತ್ತು ಮಾನವಕುಲಕ್ಕೆ ಒಂದು ಶಾಪ” ಎಂದು ಜರೆದಿದ್ದರು. “ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ನಡೆಯುತ್ತಿರುವ ವೇಳೆಯಲ್ಲಿಯೇ, ಲೆಬನಾನ್‌ನಲ್ಲಿ ನರಮೇಧ ನಡೆಯುತ್ತಿದೆ. ಮೊದಲು ಗಾಜಾ, ನಂತರ ಇರಾನ್, ಮತ್ತು ಈಗ ಲೆಬನಾನ್‌ನಲ್ಲಿ ನಿರ್ದೋಷಿ ನಾಗರಿಕರನ್ನು ಇಸ್ರೇಲ್ ಕೊಲ್ಲುತ್ತಿದೆ, ರಕ್ತ ಹರಿಯುವುದು ನಿರಂತರವಾಗಿದೆ,” ಎಂದು ಆರೋಪಿಸಿದ್ದರು. ಮುಂದುವರಿದು, “ಪ್ಯಾಲೆಸ್ತೀನ್ ಭೂಮಿಯಲ್ಲಿ ಈ ಕ್ಯಾನ್ಸರ್ ರಾಜ್ಯವನ್ನು ಸೃಷ್ಟಿಸಿದ ಜನರು ನರಕದಲ್ಲಿ ಬೇಯಲಿ ಎಂದು ನಾನು ಆಶಿಸುತ್ತೇನೆ ಮತ್ತು ಪ್ರಾರ್ಥಿಸುತ್ತೇನೆ,” ಎಂದು ಅತ್ಯಂತ ವಿವಾದಾತ್ಮಕ ಪದಗಳನ್ನು ಬಳಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಸಾಮ್ರಾಜ್ಯಶಾಹಿಯ ಅಟ್ಟಹಾಸಕ್ಕೆ ಪ್ರತಿರೋಧದ ಕಿಚ್ಚು: ಅಮೆರಿಕ-ಇಸ್ರೇಲ್ ದಬ್ಬಾಳಿಕೆಯ ವಿರುದ್ಧ ಸಿಡಿದೆದ್ದ ಲೆಬನಾನ್

ಈ ಹೇಳಿಕೆಯನ್ನು ಕಂಡು ಕೆರಳಿದ ಇಸ್ರೇಲಿನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯು, ಆಸಿಫ್ ಅವರ ಮಾತುಗಳನ್ನು “ಅಸಹ್ಯ ಮತ್ತು ಅತಿರೇಕ” ಎಂದು ಖಂಡಿಸಿದೆ. “ಇಸ್ರೇಲಿನ ವಿನಾಶಕ್ಕೆ ಕರೆ ನೀಡಿರುವ ಈ ಹೇಳಿಕೆಯನ್ನು ಯಾವ ಸರ್ಕಾರದಿಂದಲೂ ಸಹಿಸಲು ಸಾಧ್ಯವಿಲ್ಲ. ವಿಶೇಷವಾಗಿ, ಶಾಂತಿಯ ಮಧ್ಯಸ್ಥಿಕೆ ವಹಿಸುತ್ತಿರುವುದಾಗಿ ಹೇಳಿಕೊಳ್ಳುತ್ತಿರುವ ತಟಸ್ಥ ರಾಷ್ಟ್ರವೊಂದರಿಂದ ಇಂತಹ ಹೇಳಿಕೆಯನ್ನು ಖಂಡಿತವಾಗಿಯೂ ಒಪ್ಪಲು ಸಾಧ್ಯವಿಲ್ಲ,” ಎಂದು ಕಚೇರಿ ಸ್ಪಷ್ಟಪಡಿಸಿದೆ.

ಇಸ್ರೇಲ್ ವಿದೇಶಾಂಗ ನೀತಿ ಸಚಿವ ಗಿಡಿಯಾನ್ ಸಾರ್ ಅವರು ಸಹ ಇದನ್ನು “ಯಹೂದಿ ವಿರೋಧಿ ಹೇಳಿಕೆ” ಎಂದು ಜರೆದಿದ್ದು, ಇಸ್ರೇಲ್ ತನ್ನ ವಿರೋಧಿಗಳ ವಿರುದ್ಧ ತನ್ನನ್ನು ತಾನು ರಕ್ಷಿಸಿಕೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...