ಕಾರ್ಮಿಕ ಕಾನೂನು ಉಲ್ಲಂಘನೆ ಪ್ರಕರಣ; ನೊಬೆಲ್ ಪುರಸ್ಕೃತ ಮೊಹಮ್ಮದ್ ಯೂನಸ್‌ಗೆ ಜೈಲು

Date:

Advertisements

ಬಾಂಗ್ಲಾದೇಶದ ಕಾರ್ಮಿಕ ಕಾನೂನು ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಪ್ರೊ. ಮೊಹಮ್ಮದ್ ಯೂನಸ್‌ ಅವರನ್ನು ತಪ್ಪಿತಸ್ಥರೆಂದು ಅಲ್ಲಿನ ನ್ಯಾಯಾಲಯ ಆದೇಶಿಸಿದೆ. ಆದರೆ ಇದು ರಾಜಕೀಯ ಪ್ರೇರಿತ ಎಂದು ಅವರ ಬೆಂಬಲಿಗರು ಆರೋಪಿಸಿದ್ದಾರೆ.

ಪ್ರೊ. ಯೂನಸ್ ಅವರೊಂದಿಗೆ ಗ್ರಾಮೀಣ್ ಟೆಲಿಕಾಮ್‌ನ ಮೂವರು ಸಹೋದ್ಯೋಗಿಗಳನ್ನೂ ಅಪರಾಧಿಗಳೆಂದು ನ್ಯಾಯಾಲಯ ಹೇಳಿದ್ದು, ನಾಲ್ವರಿಗೂ ಆರು ತಿಂಗಳ ಸಾದಾ ಜೈಲು ಶಿಕ್ಷೆಯನ್ನು ವಿಧಿಸಿದೆ.

ಮೈಕ್ರೊ ಫೈನಾನ್ಸ್‌ ಪ್ರವರ್ತಕ 83 ವರ್ಷದ ಮೊಹಮ್ಮದ್ ಯೂನಸ್ ಸ್ಥಾಪಿಸಿದ ಬಾಂಗ್ಲಾದೇಶ ಕಂಪನಿಯ ಸಿಬ್ಬಂದಿಗೆ ಹಣ ಪಾವತಿಸದ್ದಕ್ಕಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ‘ಬಡವರ ರಕ್ತ ಹೀರುವ ವ್ಯಕ್ತಿ’ ಎಂದು ಆರೋಪಿಸುತ್ತಿದ್ದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರೊಂದಿಗಿನ ದೀರ್ಘ ಕಾಲದ ವೈಷಮ್ಯವನ್ನು ಯೂನಸ್‌ ಅವರು ಹೊಂದಿದ್ದರು. ಹೀಗಾಗಿಯೇ 2006ರ ನೊಬೆಲ್ ಪ್ರಶಸ್ತಿ ವಿಜೇತ ಯೂನಸ್ ವಿರುದ್ಧ ಹಸೀನಾ ಬಹಿರಂಗವಾಗಿಯೇ ಆರೋಪ ಮಾಡುತ್ತಿದ್ದರೆಂದು ವರದಿಯಾಗಿದೆ.

Advertisements

“ಯೂನಸ್ ವಿರುದ್ಧದ ಆರೋಪ ನ್ಯಾಯಾಲಯದಲ್ಲಿ ಸಾಬೀತಾಗಿದೆ. ಅವರಿಗೆ ಸದ್ಯ 6 ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಲಾಗಿದೆ. ಆದರೆ ನ್ಯಾಯಾಲಯ ಇನ್ನೂ ಹೆಚ್ಚಿನ ಶಿಕ್ಷೆಯನ್ನು ವಿಧಿಸುವ ಭರವಸೆ ಇದೆ. ಯೂನಸ್ ವಿರುದ್ಧ ಕಾರ್ಮಿಕ ಕಾನೂನು ಉಲ್ಲಂಘನೆಯ 100ಕ್ಕೂ ಹೆಚ್ಚು ಪ್ರಕರಣಗಳಿವೆ” ಎಂದು ಕಾರ್ಮಿಕರ ಪರ ವಕೀಲ ಖುರ್ಷಿದ್ ಆಲಂ ಖಾನ್ ತಿಳಿಸಿದ್ದಾರೆ.

“ತಾನು ಈವರೆಗೂ 50ಕ್ಕೂ ಹೆಚ್ಚು ಕಂಪನಿಗಳನ್ನು ತೆರೆದಿದ್ದು, ಯಾವುದರಿಂದಲೂ ಲಾಭ ಪಡೆಯುತ್ತಿಲ್ಲ. ನಾನು ಸ್ಥಾಪಿಸಿರುವ ಯಾವುದೇ ಸಂಸ್ಥೆಗಳು ಲಾಭಕ್ಕಾಗಿ ಅಲ್ಲ” ಎಂದು ಯೂನಸ್ ಅವರು ಹಿಂದಿನ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಹೇಳಿದ್ದರು.

“ಈ ತೀರ್ಪು ಆಧಾರ ರಹಿತವಾಗಿದ್ದು, ಸುಳ್ಳು ಮತ್ತು ಕೆಟ್ಟ ಉದ್ದೇಶ ಹೊಂದಿರುವಂತದ್ದು” ಎಂದು ವಕೀಲ ಖಾಜಾ ತನ್ವೀರ್ ಹೇಳಿದರು.

ಯೂನಸ್ ಅವರಿಗೆ ನಿರಂತರವಾಗಿ ನ್ಯಾಯಾಂಗ ಕಿರುಕುಳ ನೀಡುತ್ತಿರುವುದಾಗಿ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಮತ್ತು ವಿಶ್ವ ಸಂಸ್ಥೆಯ ಮಾಜಿ ಪ್ರಧಾನ ಕಾರ್ಯದರ್ಶಿ ಬಾನ್‌ ಕಿ ಮೂನ್ ಅವರನ್ನೂ ಒಳಗೊಂಡಂತೆ 160 ಗಣ್ಯರು ಬಹಿರಂಗ ಪತ್ರ ಬರೆದಿದ್ದರು. ನೊಬೆಲ್ ಪ್ರಶಸ್ತಿ ಪಡೆದ ನೂರಕ್ಕೂ ಹೆಚ್ಚು ಜನರು ಯೂನಸ್ ಅವರನ್ನು ಪ್ರಕರಣದಿಂದ ಮುಕ್ತಗೊಳಿಸಬೇಕೆಂದು ಒತ್ತಾಯಿಸಿದ್ದರು.

ಈ ಸುದ್ದಿ ಓದಿದ್ದೀರಾ? ರಾಮಮಂದಿರ ಉದ್ಘಾಟನೆಯ ದಿನ ಜೈ ಶ್ರೀರಾಮ್ ಪಠಿಸಲು ಮುಸ್ಲಿಮರಿಗೆ…

ಯೂನಸ್ ಅವರಿಗೆ ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಶೇಖ್ ಹಸೀನಾ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕಾರ್ಮಿಕ ಕಾನೂನನ್ನು ಅಂತಾರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿ ಪಡೆದ ಮೇರು ವ್ಯಕ್ತಿಯ ವಿರುದ್ಧ ಅಸ್ತ್ರವನ್ನಾಗಿ ಬಳಸಿ, ಸೇಡು ತೀರಿಸಿಕೊಳ್ಳಲಾಗುತ್ತಿರುವುದಾಗಿ ಆರೋಪ ವ್ಯಕ್ತವಾಗಿರುವುದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

Download Eedina App Android / iOS

X