ಕದನ ವಿರಾಮದ ಬಳಿಕ ರಕ್ಷಣಾ ತಂಡಗಳಿಂದ ಶೋಧ; ಗಾಜಾದಲ್ಲಿ ಸಾವಿನ ಸಂಖ್ಯೆ ಏರಿಕೆ

Date:

Advertisements

ಕದನ ವಿರಾಮ ಜಾರಿಗೆ ಬಂದ ಬಳಿಕ ರಕ್ಷಣಾ ತಂಡಗಳು ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಶೋಧ ಕಾರ್ಯಾಚರಣೆಯಲ್ಲಿ ಹಲವಾರು ಮೃತದೇಹಗಳು ಪತ್ತೆಯಾಗಿದೆ. ಇದರಿಂದಾಗಿ 2023ರ ಅಕ್ಟೋಬರ್‌ 7ರ ಬಳಿಕ ಇಸ್ರೇಲ್ ನಡೆಸಿದ ಭಾರೀ ಬಾಂಬ್‌ ದಾಳಿಗೆ ಬಲಿಯಾದವರ ಸಂಖ್ಯೆಯು ಏರಿಕೆಯಾಗಿದೆ. ರಕ್ಷಣಾ ತಂಡವು ಜನರು ನೆಲೆಸಿದ್ದ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಪ್ಯಾಲೇಸ್ತಿಯನ್ ಆರೋಗ್ಯ ಸಚಿವಾಲಯದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, 15 ತಿಂಗಳ ಯುದ್ಧದಲ್ಲಿ ಗಾಜಾದಲ್ಲಿ ಸಾವನ್ನಪ್ಪಿದವರ ಸಂಖ್ಯೆಯು 47,107ಕ್ಕೆ ಏರಿಕೆಯಾಗಿದೆ. ಇನ್ನು ಹೆಚ್ಚುವರಿಯಾಗಿ 111,147 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಇನ್ನು ಕೂಡಾ ಶೋಧ ಮುಂದುವರೆದಿದ್ದು ಸಾವಿನ ಸಂಖ್ಯೆ ಅಧಿಕವಾಗುವ ಸಾಧ್ಯತೆಯಿದೆ.

ಇದನ್ನು ಓದಿದ್ದೀರಾ? ಗಾಝಾ ಕದನ ವಿರಾಮ ವಿರೋಧಿಸಿ ಇಸ್ರೇಲಿನ ಮೂವರು ಮಂತ್ರಿಗಳ ರಾಜೀನಾಮೆ

Advertisements

ಕದನ ವಿರಾಮದ ನಂತರ, ಅವಶೇಷಗಳ ಅಡಿಯಲ್ಲಿ 183 ಶವಗಳು ಕಂಡುಬಂದಿದ್ದು, ಒಟ್ಟಾಗಿ ಸಾವಿನ ಸಂಖ್ಯೆಗೆ 248ಕ್ಕೂ ಹೆಚ್ಚು ಸೇರ್ಪಡೆಯಾಗಿದೆ. ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ಸುಮಾರು 54 ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಸಚಿವಾಲಯ ಬುಧವಾರ ಹೇಳಿದೆ. ಈ ಪೈಕಿ 53 ಶವಗಳನ್ನು ನಾಶವಾದ ಕಟ್ಟಡದ ಅವಶೇಷಗಳಿಂದ ಹೊರತೆಗೆಯಲಾಗಿದೆ. ಇನ್ನುಳಿದಂತೆ 19 ಮಂದಿ ಗಾಯಾಳುಗಳೂ ಕೂಡಾ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

“ನಾವು ನಾಶವಾದ ಮನೆಗಳು, ಕಟ್ಟಡಗಳು, ಇತರೆ ಸ್ಥಳಗಳಲ್ಲಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ಹುತಾತ್ಮರ ಮೃತದೇಹಗಳನ್ನು ಪತ್ತೆಹಚ್ಚುವ ಪ್ರಯಾಸಕರ ಕಾರ್ಯದಲ್ಲಿ ತೊಡಗಿದ್ದೇವೆ” ಎಂದು ಪ್ರಕಟಣೆಯು ತಿಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

Download Eedina App Android / iOS

X