ರಾಷ್ಟ್ರೀಯ ಭದ್ರತೆ ಕಾರಣ ನೀಡಿ ವಿದೇಶಿ ಸಾಫ್ಟ್‌ವೇರ್ ನಿಷೇಧಿಸಿದ ಚೀನಾ

Date:

ಅಮೆರಿಕ ಮತ್ತು ಇಸ್ರೇಲ್ ಮೂಲದ ಸೈಬರ್ ಸೆಕ್ಯೂರಿಟಿ ಸಾಫ್ಟ್‌ವೇರ್‌ಗಳ ಬಳಕೆಯನ್ನು ನಿಲ್ಲಿಸುವಂತೆ ಚೀನಾ ಸರ್ಕಾರವು ತನ್ನ ದೇಶೀಯ ಕಂಪನಿಗಳಿಗೆ ಸೂಚನೆ ನೀಡಿದೆ. ರಾಷ್ಟ್ರೀಯ ಭದ್ರತೆ ಮತ್ತು ಸೂಕ್ಷ್ಮ ದತ್ತಾಂಶಗಳು ವಿದೇಶಗಳಿಗೆ ಸೋರಿಕೆಯಾಗಬಹುದು ಎಂಬ ಆತಂಕದ ಹಿನ್ನೆಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.

- Advertisement -

ಇತ್ತೀಚಿನ ವರ್ಷಗಳಲ್ಲಿ ತಾಂತ್ರಿಕ ಸ್ವಾವಲಂಬನೆಗೆ ಒತ್ತು ನೀಡುತ್ತಿರುವ ಚೀನಾ, ಈಗ ಸೈಬರ್ ಭದ್ರತೆಯ ಹೆಸರಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಅಮೆರಿಕ ಮತ್ತು ಇಸ್ರೇಲ್ ಮೂಲದ ಪ್ರಮುಖ ಸೈಬರ್ ಸೆಕ್ಯೂರಿಟಿ ಸಾಫ್ಟ್‌ವೇರ್‌ಗಳನ್ನು ಬಳಸದಂತೆ ತನ್ನ ದೇಶೀಯ ಕಂಪನಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರಾಯಿಟರ್ಸ್ ವರದಿಯ ಪ್ರಕಾರ, ಜನವರಿ 14ರಂದು ಚೀನಾದ ಅಧಿಕಾರಿಗಳು ಈ ಆದೇಶವನ್ನು ಹೊರಡಿಸಿದ್ದಾರೆ. ಸುಮಾರು 10ಕ್ಕೂ ಹೆಚ್ಚು ವಿದೇಶಿ ಕಂಪನಿಗಳ ಸಾಫ್ಟ್‌ವೇರ್‌ಗಳನ್ನು ಗುರಿಯಾಗಿಸಿಕೊಂಡು ನೋಟಿಸ್ ನೀಡಲಾಗಿದೆ. ಚೀನಾದ ಆರ್ಥಿಕತೆಯ ವಿವಿಧ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂಪನಿಗಳ ಮೇಲೆ ಇದು ನೇರ ಪರಿಣಾಮ ಬೀರಲಿದೆ.

ಚೀನಾ ಪಟ್ಟಿಯಲ್ಲಿರುವ ಕೆಲವು ಪ್ರಮುಖ ವಿದೇಶಿ ತಂತ್ರಜ್ಞಾನ ಕಂಪನಿಗಳೆಂದರೆ, ಅಮೆರಿಕ ಮೂಲದವಾದ ಬ್ರಾಡ್‌ಕಾಮ್ ಒಡೆತನದ VMware, Palo Alto Networks, ಮತ್ತು Fortinet. ಇಸ್ರೇಲ್ ಮೂಲದ Check Point Software Technologies ಸೇರಿವೆ.

ಈ ಸಾಫ್ಟ್‌ವೇರ್‌ಗಳು ಚೀನಾದ ‘ಗೌಪ್ಯ ಮಾಹಿತಿಯನ್ನು ಸಂಗ್ರಹಿಸಿ ವಿದೇಶಕ್ಕೆ ರವಾನಿಸಬಹುದು’ ಮತ್ತು ಈ ಮೂಲಕ ವಿದೇಶಿ ಶಕ್ತಿಗಳು ಚೀನಾದ ಡೇಟಾವನ್ನು ಪ್ರವೇಶಿಸಬಹುದು ಎಂಬುದು ಅಲ್ಲಿನ ಅಧಿಕಾರಿಗಳ ಪ್ರಮುಖ ಆತಂಕವಾಗಿದೆ.

ಚೀನಾ ಕಳೆದ ಕೆಲವು ವರ್ಷಗಳಿಂದ ಸೆಮಿಕಂಡಕ್ಟರ್‌ಗಳು ಮತ್ತು ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ವಿದೇಶಿ ಅವಲಂಬನೆಯನ್ನು ಕಡಿಮೆ ಮಾಡಲು ಹವಣಿಸುತ್ತಿದೆ. ಈಗ ಈ ಅಭಿಯಾನವು ಕಂಪ್ಯೂಟರ್ ಉಪಕರಣಗಳು ಮತ್ತು ಸಾಫ್ಟ್‌ವೇರ್ ಕ್ಷೇತ್ರಕ್ಕೂ ವಿಸ್ತರಿಸಿದೆ. ಪಾಶ್ಚಿಮಾತ್ಯ ತಂತ್ರಜ್ಞಾನಗಳು ವಿದೇಶಿ ಹ್ಯಾಕರ್‌ಗಳಿಗೆ ಸುಲಭವಾಗಿ ಬಲಿಯಾಗಬಹುದು ಎಂಬ ಭಯವು ಚೀನಾವನ್ನು ಸ್ವದೇಶಿ ಪರ್ಯಾಯಗಳತ್ತ ಮುಖ ಮಾಡುವಂತೆ ಮಾಡಿದೆ.

ಈ ಲೇಖನ ಓದಿದ್ದೀರಾ?: ನಿರುದ್ಯೋಗ ವರ್ಷವಾಗಲಿದೆ 2026: AI ಪಿತಾಮಹ ಜೆಫ್ರಿ ಹಿಂಟನ್‌ ಎಚ್ಚರಿಕೆ!

ಇದು ಚೀನಾದ ಹಠಾತ್ ನಿರ್ಧಾರವೇನಲ್ಲ. ಈ ಹಿಂದೆಯೂ ಚೀನಾ ಇಂತಹ ಕ್ರಮಗಳನ್ನು ಕೈಗೊಂಡಿತ್ತು. ಅಕ್ಟೋಬರ್ 2014ರಲ್ಲಿ, ಭದ್ರತಾ ಕಾರಣ ನೀಡಿ ಸರ್ಕಾರಿ ಕಂಪ್ಯೂಟರ್‌ಗಳಿಂದ ಮೈಕ್ರೋಸಾಫ್ಟ್ ವಿಂಡೋಸ್ (Microsoft Windows) ಅನ್ನು ಹಂತ ಹಂತವಾಗಿ ತೆಗೆದುಹಾಕಲು ಚೀನಾ ಆದೇಶಿಸಿತ್ತು. ಅದಕ್ಕೂ ಮೊದಲು ವಿಂಡೋಸ್ 8ಅನ್ನು ನಿಷೇಧಿಸಲಾಗಿತ್ತು. ಜೊತೆಗೆ, ಸರ್ಕಾರಿ ಉದ್ದಿಮೆಗಳಲ್ಲಿ ಸ್ವದೇಶಿ ಆಪರೇಟಿಂಗ್ ಸಿಸ್ಟಮ್‌ಗಳ ಬಳಕೆಗೆ ಒತ್ತು ನೀಡಲಾಗಿತ್ತು.

ಈ ಬೆಳವಣಿಗೆಯು ಕೇವಲ ತಾಂತ್ರಿಕವಲ್ಲ, ಬದಲಾಗಿ ಅಮೆರಿಕ ಮತ್ತು ಚೀನಾ ನಡುವಿನ ತೀವ್ರಗೊಳ್ಳುತ್ತಿರುವ ಪೈಪೋಟಿಯ ಭಾಗವಾಗಿದೆ. ವಿಶೇಷವಾಗಿ ಪಶ್ಚಿಮ ಏಷ್ಯಾದಲ್ಲಿ ಚೀನಾದ ಬೆಳೆಯುತ್ತಿರುವ ಆರ್ಥಿಕ ಮತ್ತು ತಾಂತ್ರಿಕ ಪ್ರಭಾವವನ್ನು ಹತ್ತಿಕ್ಕಲು ವಾಷಿಂಗ್ ಟನ್ ಪ್ರಯತ್ನಿಸುತ್ತಿದೆ. ಇದಕ್ಕೆ ಪ್ರತಿಯಾಗಿ ಚೀನಾ ತನ್ನ ತಾಂತ್ರಿಕ ಕೋಟೆಯನ್ನು ಭದ್ರಪಡಿಸಿಕೊಳ್ಳುತ್ತಿದೆ.

ಸದ್ಯಕ್ಕೆ ಚೀನಾದ ಸೈಬರ್ ಸ್ಪೇಸ್ ಅಡ್ಮಿನಿಸ್ಟ್ರೇಷನ್ ಅಥವಾ ಮಾಹಿತಿ ತಂತ್ರಜ್ಞಾನ ಸಚಿವಾಲಯವು ಈ ಬಗ್ಗೆ ಅಧಿಕೃತವಾಗಿ ಪ್ರತಿಕ್ರಿಯಿಸಿಲ್ಲ. ಆದರೆ, ಈ ನಿರ್ಧಾರವು ಜಾಗತಿಕ ತಂತ್ರಜ್ಞಾನ ಮಾರುಕಟ್ಟೆಯಲ್ಲಿ ದೊಡ್ಡ ಸಂಚಲನ ಮೂಡಿಸುವುದು ಖಚಿತ. ಚೀನಾ ತನ್ನದೇ ಆದ ಸೈಬರ್ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಿಕೊಳ್ಳುವ ಮೂಲಕ ಪಾಶ್ಚಿಮಾತ್ಯ ದೇಶಗಳಿಗೆ ಸಡ್ಡು ಹೊಡೆಯುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...