ವಿಶ್ವ ವ್ಯಾಪಾರ ಸಂಸ್ಥೆಯಲ್ಲಿ ಭಾರತದ ವಿರುದ್ಧ ದೂರು ದಾಖಲಿಸಿದ ಚೀನಾ

Date:

ವಿದ್ಯುತ್ ವಾಹನಗಳು(ಇವಿಗಳು) ಮತ್ತು ಬ್ಯಾಟರಿಗಳಿಗೆ ಸಬ್ಸಿಡಿ ನೀಡುವ ವಿಚಾರದಲ್ಲಿ ಚೀನಾ ವಿಶ್ವ ವ್ಯಾಪಾರ ಸಂಸ್ಥೆಯಲ್ಲಿ (ಡಬ್ಲ್ಯುಟಿಒ) ಭಾರತದ ವಿರುದ್ಧ ದೂರು ದಾಖಲಿಸಿದೆ. ಚೀನಾ ನೀಡಿದ ದೂರಿನ ಬಗ್ಗೆ ಸಚಿವಾಲಯ ಪರಿಶೀಲಿಸುತ್ತದೆ ಎಂದು ವಾಣಿಜ್ಯ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಹೇಳಿದ್ದಾರೆ.

- Advertisement -

ಇನ್ನು ಟರ್ಕಿ, ಕೆನಡಾ ಮತ್ತು ಇಯು ವಿರುದ್ಧವೂ ಚೀನಾ ಇದೇ ರೀತಿಯ ದೂರನ್ನು ಸಲ್ಲಿಸಿದೆ. “ಚೀನಾವು ಭಾರತದೊಂದಿಗೆ ಸಮಾಲೋಚನೆ ಕೋರಿದೆ” ಎಂದು ಹೇಳಲಾಗಿದೆ. ಡಬ್ಲ್ಯುಟಿಒ ನಿಯಮಗಳ ಪ್ರಕಾರ ವಿವಾದ ಇತ್ಯರ್ಥ ಪ್ರಕ್ರಿಯೆಯ ಮೊದಲ ಹೆಜ್ಜೆ ಸಮಾಲೋಚನೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಕರ್ನಾಟಕದ ಸಾರಿಗೆ ವ್ಯವಸ್ಥೆ; ಪರಿಣಾಮಕಾರಿ ಬದಲಾವಣೆ ಸಾಧ್ಯವೇ?

ಭಾರತದೊಂದಿಗೆ ನಡೆಸುವ ಸಮಾಲೋಚನೆಯು ತೃಪ್ತಿದಾಯಕ ಪರಿಹಾರವನ್ನು ನೀಡಿದಿದ್ದರೆ, ತೀರ್ಪು ನೀಡಲು ಪ್ರಕರಣದಲ್ಲಿ ಡಬ್ಲ್ಯುಟಿಒ ಒಂದು ಸಮಿತಿಯನ್ನು ರಚಿಸುವಂತೆ ಯುರೋಪಿಯನ್ ಒಕ್ಕೂಟವು ವಿನಂತಿಸಬಹುದು.

ಚೀನಾ ಭಾರತದ ಎರಡನೇ ಅತಿದೊಡ್ಡ ವ್ಯಾಪಾರ ಪಾಲುದಾರ ದೇಶವಾಗಿದೆ. 2023-24ರಲ್ಲಿ ಚೀನಾಕ್ಕೆ ಭಾರತದಿಂದ 16.66 ಬಿಲಿಯನ್‌ ಡಾಲರ್ ಮೌಲ್ಯದ ರಫ್ತು ಮಾಡಲಾಗಿದೆ. ಆದರೆ ಕಳೆದ ವರ್ಷ ರಫ್ತು ಶೇಕಡ 14.5ರಷ್ಟು ಕುಸಿದು 14.25 ಬಿಲಿಯನ್‌ ಡಾಲರ್‌ಗೆ ತಲುಪಿದೆ.

ಆಮದು 2024-25ರಲ್ಲಿ ಶೇ. 11.52ರಷ್ಟು ಏರಿಕೆಯಾಗಿ 2023-24ರಲ್ಲಿ 101.73 ಬಿಲಿಯನ್ ಡಾಲರ್‌ಗಳಷ್ಟಿದ್ದುದರಿಂದ 113.45 ಬಿಲಿಯನ್ ಡಾಲರ್‌ಗಳಿಗೆ ತಲುಪಿದೆ. 2024-25ರಲ್ಲಿ ಚೀನಾದೊಂದಿಗಿನ ಭಾರತದ ವ್ಯಾಪಾರ ಕೊರತೆಯು 99.2 ಬಿಲಿಯನ್ ಡಾಲರ್‌ಗಳಿಗೆ ಏರಿಕೆಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...