ಚೀನಾ | ಕಲ್ಲಿದ್ದಲು ಗಣಿಯಲ್ಲಿ ಭೀಕರ ಅನಿಲ ಸ್ಫೋಟ; 90ಕ್ಕೂ ಹೆಚ್ಚು ಕಾರ್ಮಿಕರ ಸಾವು

Date:

ಉತ್ತರ ಚೀನಾದ ಶಾಂಕ್ಸಿ ಪ್ರಾಂತ್ಯದ ಚಾಂಗ್ಝಿ ನಗರದಲ್ಲಿರುವ ʼಲಿಯುಶೆನ್ಯುʼ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಅನಿಲ (ಗ್ಯಾಸ್) ಸ್ಫೋಟದಲ್ಲಿ ಕನಿಷ್ಠ 90 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ ನೂರಾರು ಕಾರ್ಮಿಕರು ಭೂಮಿಯೊಳಗೆ ಸಿಲುಕಿಕೊಂಡಿದ್ದು, ಸದ್ಯ ಬೃಹತ್ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ತಿಳಿಸಿದೆ.

- Advertisement -

ಬೀಜಿಂಗ್‌ನಿಂದ ನೈಋತ್ಯಕ್ಕೆ ಸುಮಾರು 520 ಕಿ.ಮೀ ದೂರದಲ್ಲಿರುವ ಖಿನ್ಯುವಾನ್ ಕೌಂಟಿಯಲ್ಲಿ ನಿನ್ನೆ ಸಂಜೆ 7:30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಗಣಿಯಲ್ಲಿ ಕಾರ್ಬನ್ ಮೊನಾಕ್ಸೈಡ್ ಹೆಚ್ಚಾಗಿರುವ ಕುರಿತು ಅಲರ್ಟ್ ನೀಡಲಾದ ಕೆಲವೇ ಹೊತ್ತಿನಲ್ಲಿ ಈ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಘಟನೆ ನಡೆದಾಗ ಗಣಿಯೊಳಗೆ 247 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಇನ್ನೂ ಎಷ್ಟು ಜನ ಒಳಗೆ ಸಿಲುಕಿದ್ದಾರೆ ಎಂಬ ನಿಖರ ಮಾಹಿತಿ ಲಭ್ಯವಾಗಿಲ್ಲ. ಕೇವಲ ಒಂದು ರಾತ್ರಿಯಲ್ಲಿ ಸಾವಿನ ಸಂಖ್ಯೆ 8 ರಿಂದ 90ಕ್ಕೆ ಏರಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಘಟನೆ ಬೆನ್ನಲ್ಲೇ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ರಕ್ಷಣಾ ಸಿಬ್ಬಂದಿಗೆ ಸಂಪೂರ್ಣ ಶಕ್ತಿ ಬಳಸಿ ನಾಪತ್ತೆಯಾದ ಕಾರ್ಮಿಕರನ್ನು ಪತ್ತೆಹಚ್ಚಲು ಮತ್ತು ದುರಂತದ ನಂತರದ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಸೂಚಿಸಿದ್ದಾರೆ. “ಈ ಅಪಘಾತಕ್ಕೆ ಕಾರಣರಾದವರನ್ನು ಕಠಿಣ ಹೊಣೆಗಾರರನ್ನಾಗಿ ಮಾಡಬೇಕು ಎಂದು ಅವರು ಹೇಳಿದ್ದಾರೆ. ಎಲ್ಲಾ ಪ್ರದೇಶಗಳು ಮತ್ತು ಇಲಾಖೆಗಳು ಈ ಅಪಘಾತದಿಂದ ಪಾಠ ಕಲಿಯಬೇಕು. ಕೆಲಸದ ಸ್ಥಳದ ಸುರಕ್ಷತೆಯ ಬಗ್ಗೆ ಜಾಗರೂಕರಾಗಿರಬೇಕು, ಎಲ್ಲಾ ರೀತಿಯ ಅಪಾಯಗಳು ಮತ್ತು ಅಡಗಿರುವ ತೊಂದರೆಗಳನ್ನು ಕೂಲಂಕಷವಾಗಿ ತನಿಖೆ ಮಾಡಿ ಸರಿಪಡಿಸಬೇಕು” ಎಂದು ಜಿನ್‌ಪಿಂಗ್ ಎಚ್ಚರಿಸಿದ್ದಾರೆ.

ಜೊತೆಗೆ, ಚೀನಾದಲ್ಲಿ ಮಳೆಗಾಲ ಆರಂಭವಾಗುತ್ತಿರುವುದರಿಂದ ಪ್ರವಾಹ ತಡೆಗಟ್ಟುವ ಕ್ರಮಗಳನ್ನು ಬಲಪಡಿಸಲು ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ಇತ್ತೀಚೆಗಷ್ಟೇ ಹುನಾನ್ ಪ್ರಾಂತ್ಯದ ಶಿಮೆನ್ ಕೌಂಟಿಯಲ್ಲಿ ಭಾರಿ ಮಳೆಗೆ ಕನಿಷ್ಠ 7 ಜನ ಸಾವನ್ನಪ್ಪಿ, 14 ಮಂದಿ ನಾಪತ್ತೆಯಾಗಿದ್ದರು.

ಚೀನಾದ ಪ್ರಧಾನಿ ಲಿ ಕಿಯಾಂಗ್ ಕೂಡ ಅಧ್ಯಕ್ಷರ ಮಾತುಗಳನ್ನು ಪುನರುಚ್ಚರಿಸಿದ್ದು, ನಾಪತ್ತೆಯಾದ ಗಣಿಗಾರರ ಹುಡುಕಾಟಕ್ಕೆ ಯಾವುದೇ ವಿಳಂಬ ಮಾಡದಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಸ್ಫೋಟದ ಕಾರಣದ ಬಗ್ಗೆ ತ್ವರಿತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಏಷ್ಯಾ U-15 ಬಾಕ್ಸಿಂಗ್‌ ಚಾಂಪಿಯನ್‌ಶಿಪ್: ಉಜ್ಬೇಕಿಸ್ತಾನದಲ್ಲಿ ಚಿನ್ನ ಗೆದ್ದ ಕಾಶ್ಮೀರದ ಪೋರ

ದುರಂತ ಸಂಭವಿಸಿರುವ ಶಾಂಕ್ಸಿ ಚೀನಾದ ಪ್ರಮುಖ ಕಲ್ಲಿದ್ದಲು ಉತ್ಪಾದನಾ ಪ್ರಾಂತ್ಯವಾಗಿದೆ. ವಿಸ್ತೀರ್ಣದಲ್ಲಿ ಗ್ರೀಸ್ ದೇಶಕ್ಕಿಂತಲೂ ದೊಡ್ಡದಾಗಿರುವ ಈ ಪ್ರಾಂತ್ಯದಲ್ಲಿ ಸುಮಾರು 3.4 ಕೋಟಿ ಜನರು ವಾಸಿಸುತ್ತಿದ್ದಾರೆ. ಕಳೆದ ವರ್ಷ ಈ ಪ್ರಾಂತ್ಯವೊಂದರಿಂದಲೇ ಸುಮಾರು 1.3 ಬಿಲಿಯನ್ ಟನ್ ಕಲ್ಲಿದ್ದಲನ್ನು ಹೊರತೆಗೆಯಲಾಗಿತ್ತು. ಇದು ಚೀನಾದ ಒಟ್ಟು ಕಲ್ಲಿದ್ದಲು ಉತ್ಪಾದನೆಯ ಸುಮಾರು ಮೂರನೇ ಒಂದು ಭಾಗದಷ್ಟಿದೆ. ಸದ್ಯ ಸ್ಫೋಟಕ್ಕೆ ನಿಖರವಾದ ಕಾರಣವೇನು ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ | ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ...

ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...

ಈ ದಿನ ಸಂಪಾದಕೀಯ | ಪ್ರಧಾನಿಗೂ ಸಿಗದ ʼಬಾರಾಖೂನ್ ಮಾಫಿʼ ಗ್ಯಾನೇಶ್ ಕುಮಾರ್‌ಗೆ ಯಾಕೆ? ಕೊಡಿಸಿದವರು ಯಾರು?

ಚುನಾವಣೆಯ ಕಾವಲುಗಾರನಿಗೆ ಕಾನೂನಿನ ಕವಚ ಕುಂಡಲಗಳನ್ನು ನೀಡಿ, ಕಾನೂನಿನ ಕೈಗಳು ಮುಟ್ಟದಂತೆ,...