ಅಮೆರಿಕ-ಇರಾನ್ ಕದನ ವಿರಾಮದಲ್ಲಿ ಚೀನಾ ಪಾತ್ರ!

Date:

ಇರಾನ್ ಮತ್ತು ಅಮೆರಿಕ ನಡುವೆ ಎರಡು ವಾರಗಳ ಕದನ ವಿರಾಮ ಘೋಷಣೆಯಾಗಿದೆ. ಈ ಕದನ ವಿರಾಮ ಒಪ್ಪಂದದ ಹಿಂದೆ, ಇರಾನ್‌ನ ಅತಿದೊಡ್ಡ ವ್ಯಾಪಾರ ಪಾಲುದಾರ ರಾಷ್ಟ್ರವಾಗಿರುವ ಚೀನಾ ಪ್ರಮುಖ ಪಾತ್ರ ವಹಿಸಿದೆ. ಪ್ರೇರಕ ಶಕ್ತಿಯಾಗಿ ಕೆಲಸ ಮಾಡಿದೆ ಎನ್ನಲಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಕಾರ, ಇರಾನ್ ಅನ್ನು ಮಾತುಕತೆಯ ಮೇಜಿನ ಬಳಿ ತರುವಲ್ಲಿ ಪಾಕಿಸ್ತಾನದ ಜೊತೆಗೆ ಚೀನಾ ಮಹತ್ತರ ಪಾತ್ರ ವಹಿಸಿದೆ.

- Advertisement -

ಇರಾನ್ ಜೊತೆ ಸಂಧಾನ ನಡೆಸಲು ಚೀನಾ ಮಧ್ಯಸ್ಥಿಕೆ ವಹಿಸಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಟ್ರಂಪ್, “ಹೌದು ಎಂದು ನಾನು ಕೇಳಿದ್ದೇನೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಮೇ ತಿಂಗಳ ಮಧ್ಯಭಾಗದಲ್ಲಿ ಟ್ರಂಪ್ ಅವರು ಚೀನಾಕ್ಕೆ ಭೇಟಿ ನೀಡಿ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರನ್ನು ಭೇಟಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ, ಯುದ್ಧದ ವಾತಾವರಣ ತಿಳಿಯಾಗುವುದು ಚೀನಾಕ್ಕೆ ಅತಿ ಮುಖ್ಯವಾಗಿದೆ. ಈ ಮೊದಲು ಮಾರ್ಚ್ ಅಂತ್ಯಕ್ಕೆ ನಿಗದಿಯಾಗಿದ್ದ ಚೀನಾ ಪ್ರವಾಸವನ್ನು, ಯುದ್ಧದ ಸನ್ನಿವೇಶದ ಕಾರಣ ನೀಡಿ ಟ್ರಂಪ್ ಮುಂದೂಡುತ್ತಾ ಬಂದಿದ್ದರು ಎನ್ನಲಾಗಿದೆ.

ಕದನ ವಿರಾಮ ಪ್ರಕ್ರಿಯೆಯಲ್ಲಿ ಚೀನಾ ಸದ್ದಿಲ್ಲದೆ ಪ್ರಭಾವಶಾಲಿಯಾಗಿ ಕೆಲಸ ಮಾಡಿದೆ. ಪಾಕಿಸ್ತಾನ, ಟರ್ಕಿ ಹಾಗೂ ಈಜಿಪ್ಟ್‌ನಂತಹ ಮಧ್ಯವರ್ತಿ ದೇಶಗಳ ಮೂಲಕ ಇರಾನ್ ಅನ್ನು ಶಾಂತಿಯ ಹಾದಿಗೆ ತರುವಲ್ಲಿ ಚೀನಾ ಯಶಸ್ವಿಯಾಗಿದೆ. ಮಾತುಕತೆಗಳು ನಡೆಯುತ್ತಿದ್ದ ಅವಧಿಯಲ್ಲಿ ಚೀನಾದ ಅಧಿಕಾರಿಗಳು ನಿರಂತರವಾಗಿ ಇರಾನ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದರು ಎಂದು ‘ಅಸೋಸಿಯೇಟೆಡ್ ಪ್ರೆಸ್’ ವರದಿ ಮಾಡಿದೆ.

“ಯುದ್ಧ ಆರಂಭವಾದಾಗಿನಿಂದಲೂ ಚೀನಾ ಶಾಂತಿಗಾಗಿ ದಣಿವರಿಯಿಲ್ಲದೆ ಕೆಲಸ ಮಾಡುತ್ತಿದೆ” ಎಂದು ವಾಷಿಂಗ್ಟನ್‌ನಲ್ಲಿರುವ ಚೀನಾ ರಾಯಭಾರ ಕಚೇರಿ ಹೇಳಿದೆ.

ಈ ಲೇಖನ ಓದಿದ್ದೀರಾ?: ಸಿಇಸಿ ವಿರುದ್ಧದ ಅವಿಶ್ವಾಸ; ಕಾರಣವಿಲ್ಲದೇ ನೋಟಿಸ್‌ ತಿರಸ್ಕಾರ ಕೂಡ ಪ್ರಜಾತಂತ್ರಕ್ಕೆ ಮಾರಕ!

ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಮಾವೋ ನಿಂಗ್ ಅವರು ಪ್ರತಿಕ್ರಿಯಿಸಿದ್ದು, “ಎಲ್ಲ ಕಡೆಯವರು ಪ್ರಾಮಾಣಿಕತೆಯನ್ನು ಪ್ರದರ್ಶಿಸಬೇಕು ಮತ್ತು ಮೊದಲೇ ನಡೆಯಬಾರದಿದ್ದ ಈ ಯುದ್ಧವನ್ನು ಶೀಘ್ರವಾಗಿ ಕೊನೆಗೊಳಿಸಬೇಕು ಎಂಬುದನ್ನು ಚೀನಾ ಪ್ರತಿಪಾದಿಸುತ್ತಲೇ ಇತ್ತು. ಜಾಗತಿಕ ಆರ್ಥಿಕತೆ ಮತ್ತು ಇಂಧನ ಭದ್ರತೆಯ ಮೇಲೆ ಈ ಸಂಘರ್ಷ ಬೀರುತ್ತಿರುವ ಪರಿಣಾಮಗಳ ಬಗ್ಗೆ ಚೀನಾ ತೀವ್ರ ಕಳವಳಗೊಂಡಿತ್ತು” ಎಂದು ಹೇಳಿದ್ದಾರೆ.

ಜಾಗತಿಕ ವ್ಯವಹಾರಗಳಲ್ಲಿ ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳಲು ಚೀನಾ ಈ ಅವಕಾಶವನ್ನು ಬಳಸಿಕೊಳ್ಳುತ್ತಿದೆ ಎಂಬ ಅಭಿಪ್ರಾಯಗಳಿವೆ.

ಕಳೆದ ಮಂಗಳವಾರವಷ್ಟೇ, ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ರಕ್ಷಣೆಗೆ ರಾಷ್ಟ್ರಗಳು ಒಗ್ಗೂಡಬೇಕು ಮತ್ತು ಬಲವಂತದಿಂದಾದರೂ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸಬೇಕೆಂದು ವಿಶ್ವಸಂಸ್ಥೆ ನಿರ್ಣಯ ಮಂಡಿಸಿತ್ತು. ಈ ನಿರ್ಣಯದ ವಿರುದ್ಧ ಚೀನಾ ಮತ್ತು ರಷ್ಯಾ ತಮ್ಮ ‘ವೀಟೋ’ ಅಧಿಕಾರವನ್ನು ಬಳಸಿದ್ದವು. ಅಮೆರಿಕವು ಒಂದು ನಾಗರಿಕತೆಯ ಅಸ್ತಿತ್ವಕ್ಕೇ ಬೆದರಿಕೆ ಹಾಕುತ್ತಿರುವಾಗ ಇಂತಹ ನಿರ್ಣಯವನ್ನು ಅಂಗೀಕರಿಸುವುದು ತಪ್ಪು ಸಂದೇಶ ರವಾನಿಸುತ್ತದೆ ಎಂದು ಚೀನಾದ ವಿಶ್ವಸಂಸ್ಥೆಯ ರಾಯಭಾರಿ ಫೂ ಕಾಂಗ್ ವಾದಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...