ರಾಜ್ಯ ನಿಧಿ ದುರುಪಯೋಗದ ಆರೋಪದ ಮೇಲೆ ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರನ್ನು ಶುಕ್ರವಾರ ಅಪರಾಧ ತನಿಖಾ ಇಲಾಖೆ (ಸಿಐಡಿ) ಬಂಧಿಸಿದೆ ಎಂದು ವರದಿಯಾಗಿದೆ.
2023ರಲ್ಲಿ ಶ್ರೀಲಂಕಾದ ಅಧ್ಯಕ್ಷರಾಗಿದ್ದಾಗ ರನಿಲ್ ಅವರು ತಮ್ಮ ಪತ್ನಿಯ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಲಂಡನ್ಗೆ ಭೇಟಿ ನೀಡಿದ್ದರು. ಈ ಬಗ್ಗೆ ಸಿಐಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದ 76 ವರ್ಷದ ವಿಕ್ರಮಸಿಂಘೆ ಅವರನ್ನು ಬಂಧಿಸಲಾಗಿದೆ.
ಇದನ್ನು ಓದಿದ್ದೀರಾ? ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಶ್ರೀಲಂಕಾದ ನಾಲ್ವರು ಐಸಿಸ್ ಉಗ್ರರ ಬಂಧನ
ಶ್ರೀಲಂಕಾ ಪೊಲೀಸ್ ವಕ್ತಾರರು ಬಂಧನವನ್ನು ತಕ್ಷಣ ದೃಢಪಡಿಸಿಲ್ಲ. ಹಾಗೆಯೇ ವಿಕ್ರಮಸಿಂಘೆ ಅವರ ಕಚೇರಿ ಪ್ರತಿಕ್ರಿಯಿಸಿಲ್ಲ.
ಶ್ರೀಲಂಕಾದ ಪ್ರಧಾನ ಮಂತ್ರಿಯಾಗಿ ದಾಖಲೆಯ ಆರು ಬಾರಿ ಸೇವೆ ಸಲ್ಲಿಸಿದ್ದ ವಕೀಲರಾದ ವಿಕ್ರಮಸಿಂಘೆ ಅವರು 2022ರಲ್ಲಿ ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಅಧ್ಯಕ್ಷರಾಗಿದ್ದರು.
ಆರ್ಥಿಕ ಕುಸಿತದ ವೇಳೆ ಗೊಟಬಯ ರಾಜಪಕ್ಸೆ ಶ್ರೀಲಂಕಾದಿಂದ ಪಲಾಯನವಾದ, ರಾಜೀನಾಮೆ ನೀಡಿದ ನಂ
