‘ಇಂದು ರಾತ್ರಿ ನಾಗರಿಕತೆಯೊಂದು ನಾಶವಾಗಲಿದೆ’; ಇರಾನ್‌ಗೆ ಟ್ರಂಪ್‌ ಬೆದರಿಕೆ

Date:

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಂಗಳವಾರ ಇರಾನ್‌ಗೆ ಮತ್ತೊಂದು ಬೆದರಿಕೆ ಹಾಕಿದ್ದಾರೆ. ‘ಅಂತಿಮ ಗಡುವು ಮುಗಿಯುವ ಮೊದಲು ಅಮೆರಿಕದ ಯುದ್ಧ ಬೇಡಿಕೆಗಳನ್ನು ಒಪ್ಪಿಕೊಳ್ಳದಿದ್ದರೆ, ಇರಾನ್‌ನ ಇಡೀ ನಾಗರಿಕತೆಯೇ ನಾಶವಾಗಲಿದೆ’ ಎಂದು ಹೇಳಿದ್ದಾರೆ.

- Advertisement -

ತಮ್ಮ ‘ಟ್ರುತ್ ಸೋಶಿಯಲ್’ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಟ್ರಂಪ್, “ಇಂದು ರಾತ್ರಿ, ಇಡೀ ನಾಗರಿಕತೆಯೊಂದು ಅಂತ್ಯವಾಗಲಿದೆ. ಅದು ಮತ್ತೆ ಎಂದಿಗೂ ಮರಳಿ ಬರುವುದಿಲ್ಲ. ಅಂತಹ ಘಟನೆ ನಡೆಯುವುದು ನನಗೆ ಇಷ್ಟವಿಲ್ಲ. ಆದರೆ, ಅದು ಸಂಭವಿಸುವ ಸಾಧ್ಯತೆಯಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ಹಿಂದೆ, ಮತ್ತೊಂದು ಪೋಸ್ಟ್‌ ಹಂಚಿಕೊಂಡಿದ್ದ ಟ್ರಂಪ್, “ಅಮೆರಿಕದ ಮಿಲಿಟರಿಯು ಇರಾನ್‌ನ ಸೇತುವೆಗಳು, ವಿದ್ಯುತ್ ಸ್ಥಾವರಗಳು ಹಾಗೂ ಇತರ ನಾಗರಿಕ ಮೂಲಸೌಕರ್ಯಗಳ ಮೇಲೆ ಬಾಂಬ್ ದಾಳಿ ನಡೆಸುವ ಮೂಲಕ ದೇಶವನ್ನು ‘ಶಿಲಾಯುಗ’ಕ್ಕೆ ತಳ್ಳಬಹುದು” ಎಂದು ಹೇಳಿದ್ದರು. ತೈಲ ಮತ್ತು ಇತರ ವಸ್ತುಗಳ ಸಾಗಣೆಗೆ ಬಳಸಲಾಗುವ ಆಯಕಟ್ಟಿನ ಜಲಮಾರ್ಗವಾದ ‘ಹಾರ್ಮುಜ್ ಜಲಸಂಧಿ’ ಮೇಲೆ ಇರಾನ್ ನಿರ್ಬಂಧ ಹೇರಿರುವುದನ್ನು ತೆರವುಗೊಳಿಸಲು ಬುಧವಾರ ಬೆಳಗ್ಗೆ 5:30ರವರೆಗೆ (ಭಾರತೀಯ ಕಾಲಮಾನ) ಸಮಯವಿದೆ ಎಂದು ಗಡುವು ನೀಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅ.7ರಂದು ಆಣದೂರ ಆರೋಗ್ಯ ಕೇಂದ್ರದಲ್ಲಿ ಸಾಮೂಹಿಕ ರಕ್ತದಾನ ಶಿಬಿರ

ಬೀದರ್‌ ತಾಲೂಕಿನ ಆಣದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅ.7ರಂದು ಬೆಳಿಗ್ಗೆ...

ಧಾರವಾಡ | ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ...

ಧಾರವಾಡ | ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಒಗ್ಗೂಡಿದ ಪ್ರಗತಿಪರ ಧ್ವನಿಗಳು

ಸಂವಿಧಾನ, ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಮಾಜಿಕ ಸೌಹಾರ್ದತೆಯ ರಕ್ಷಣೆಗಾಗಿ ಧಾರವಾಡದಲ್ಲಿ...

ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಇಬ್ಬರು ಕೇಂದ್ರ ಸಚಿವರಿಗೆ ಕೊಕ್

ಉತ್ತರ ಪ್ರದೇಶದಿಂದ ತೆರವಾಗಲಿರುವ ಎಂಟು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಸೋಮವಾರ (ಅ....