ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಪ್ರತಿಭಟನಾಕಾರರು ಮತ್ತು ಆಡಳಿತ ಪಕ್ಷದ ಬೆಂಬಲಿಗರ ನಡುವೆ ಘರ್ಷಣೆ ನಡೆದಿದ್ದು ಭೀಕರ ಘರ್ಷಣೆಯಲ್ಲಿ 14 ಪೊಲೀಸರು ಸೇರಿದಂತೆ ಸುಮಾರು 100 ಜನರು ಸಾವನ್ನಪ್ಪಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ. ಈ ಬೆನ್ನಲ್ಲೇ ಬಾಂಗ್ಲಾದೇಶದಾದ್ಯಂತ ಅನಿರ್ದಿಷ್ಟಾವಧಿಗೆ ನಿಷೇದಾಜ್ಞೆ ಹೇರಲಾಗಿದೆ.
ಉದ್ಯೋಗ ಮೀಸಲಾತಿ ವಿಚಾರದಲ್ಲಿ ಹಲವಾರು ದಿನಗಳಿಂದ ಬಾಂಗ್ಲಾದೇಶದಲ್ಲಿ ಪ್ರತಿಭಟನೆ, ಹಿಂಸಾಚಾರ ನಡೆಯುತ್ತಿದೆ. ಪ್ರತಿಭಟನಾಕಾರರು ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಈ ಪ್ರತಿಭಟನೆಗೆ ಆಡಳಿತ ಪಕ್ಷದ ಬೆಂಬಲಿಗರು ವಿರೋಧ ವ್ಯಕ್ತಪಡಿಸಿದ್ದು, ಅಲ್ಲಲ್ಲಿ ಘರ್ಷಣೆ ನಡೆದಿದೆ.
ದೇಶಾದ್ಯಂತ ನಡೆದ ಘರ್ಷಣೆಗಳು, ಗುಂಡಿನ ದಾಳಿಗಳು ಮತ್ತು ಇತರೆ ಹಿಂಸಾಚಾರದಲ್ಲಿ ಕನಿಷ್ಠ 97 ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಮುಖ ಬಂಗಾಳಿ ಮಾಧ್ಯಮ ಪ್ರೋಥೋಮ್ ಅಲೋ ವರದಿ ಮಾಡಿದೆ.
ಇದನ್ನು ಓದಿದ್ದೀರಾ? ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ: 10 ದಿನಗಳ ನಂತರ ಇಂಟರ್ನೆಟ್ ಸೇವೆ ಪುನರಾರಂಭ
ಪೊಲೀಸ್ ಪ್ರಧಾನ ಕಚೇರಿಯ ಪ್ರಕಾರ, ದೇಶಾದ್ಯಂತ 14 ಪೊಲೀಸರ ಹತ್ಯೆ ಮಾಡಲಾಗಿದೆ. ಅವರಲ್ಲಿ 13 ಮಂದಿ ಸಿರಾಜ್‌ಗಂಜ್‌ನ ಎನಾಯೆತ್‌ಪುರ ಪೊಲೀಸ್ ಠಾಣೆಯಲ್ಲಿ ಕೊಲೆಯಾಗಿದ್ದಾರೆ. 300ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಬಾಂಗ್ಲಾದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದವರ ಸಂಬಂಧಿಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇಕಡ 30ರಷ್ಟು ಮೀಸಲಿಡುವ ವ್ಯವಸ್ಥೆ ವಿರುದ್ಧ ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದು, ಇತ್ತೀಚಿಗಷ್ಟೆ ಸುಮಾರು 200 ಮಂದಿ ಸಾವನ್ನಪ್ಪಿದ್ದಾರೆ. ಅಂದಿನಿಂದ ಈವರೆಗೂ 11,000ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.
STORY | Nearly 100 killed, hundreds injured in clashes between protesters and ruling party supporters in Bangladesh
— Press Trust of India (@PTI_News) August 4, 2024
READ: https://t.co/AYVzZbSyIk pic.twitter.com/9kTG91Qse7