ಪಾಕಿಸ್ತಾನ ಪಡೆ ಮತ್ತು ಟಿಟಿಪಿ ನಡುವೆ ಘರ್ಷಣೆ; 17 ಮಂದಿ ಸಾವು

Date:

ಪಾಕಿಸ್ತಾನ ಪಡೆಗಳು ಮತ್ತು ನಿಷೇಧಿತ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ನಡುವೆ ಘರ್ಷಣೆ ನಡೆದಿದ್ದು, ಸುಮಾರು 17 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನದ ವಾಯುವ್ಯ ಪ್ರಾಂತ್ಯದ ಖೈಬರ್ ಪಖ್ತುನ್‌ಖ್ವಾದಲ್ಲಿ ಘಟನೆ ನಡೆದಿದೆ.

- Advertisement -

ಟಿಟಿಪಿ ಬಂಡುಕೋರರ ವಿರುದ್ಧ ಪಾಕಿಸ್ತಾನದ ಫ್ರಾಂಟಿಯರ್ ಕಾರ್ಪ್ಸ್ (ಎಫ್‌ಸಿ) ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ, ಭಯೋತ್ಪಾದಕ ಸಂಘಟನೆಯ 17 ಮಂದಿಯನ್ನು ಹತ್ಯೆಗೈಯಲಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕರಕ್ ಜಿಲ್ಲೆಯ ಜಿಲ್ಲಾ ಪೊಲೀಸ್ ಅಧಿಕಾರಿ (ಡಿಪಿಒ) ಶಹಬಾಜ್ ಎಲಾಹಿ ಹೇಳುವಂತೆ; ಖೈಬರ್ ಪಖ್ತುನ್‌ಖ್ವಾ ಪ್ರದೇಶದಲ್ಲಿ ಟಿಟಿಪಿ ಮತ್ತು ಮುಲ್ಲಾ ನಜೀರ್ ಗುಂಪಿನೊಂದಿಗೆ ಸಂಬಂಧ ಹೊಂದಿರುವವರು ಇದದ್ದಾರೆಂದು ಖಚಿತ ಮಾಹಿತಿ ದೊರೆತಿತ್ತು. ಬಳಿಕ, ಗುಪ್ತಚರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಟಿಟಿಪಿ ಭಯೋತ್ಪಾದಕರು ಇರುವ ನೆಲೆಗಳನ್ನು ಭದ್ರತಾ ಪಡೆಗಳು ಸಮೀಪಿಸುತ್ತಿದ್ದಂತೆಯೇ ಅವರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ಮಾಡಿದ್ದಾರೆ. ಪಡೆಗಳು ತ್ವರಿತ ಕಾರ್ಯಾಚರಣೆ ನಡೆಸಿದ್ದು, ಅಲ್ಲಿದ್ದ ಎಲ್ಲ 17 ಭಯೋತ್ಪಾದಕರನ್ನೂ ಹತ್ಯೆಗೈಯಲಾಗಿದೆ. ಸ್ಥಳದಲ್ಲಿದ್ದ ಗಣನೀಯ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಗುಂಡಿನ ಚಕಮಕಿಯಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಎಲಾಹಿ ತಿಳಿಸಿದ್ದಾರೆ.

ಹತ್ಯೆಗೊಳಗಾದ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲಿನ ದಾಳಿ, ಸುಲಿಗೆಗಾಗಿ ಅಪಹರಣ ಹಾಗೂ ಇತರ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...