ಭಾರತದಲ್ಲಿ ಸಿಎಎ ಅನುಷ್ಠಾನ: ಕಳವಳ ವ್ಯಕ್ತಪಡಿಸಿದ ಅಮೆರಿಕ

Date:

ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನಗೊಳಿಸಿರುವ ಬಗ್ಗೆ ಅಮೆರಿಕ ಪ್ರತಿಕ್ರಿಯೆ ನೀಡಿದ್ದು, ವಿವಾದಾತ್ಮಕ ಕಾಯ್ದೆ ಬಗ್ಗೆ ನಿಕಟವಾಗಿ ಮೇಲ್ವಿಚಾರಣೆಗೊಳಿಸುತ್ತಿರುವುದಾಗಿ ತಿಳಿಸಿದೆ.

“ಮಾರ್ಚ್‌ 11ರಂದು ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಹೊರಡಿಸಿರುವುದಕ್ಕೆ ನಾವು ಕಳವಳಗೊಂಡಿದ್ದೇವೆ. ಕಾಯ್ದೆಯನ್ನು ಹೇಗೆ ಅನುಷ್ಠಾನಗೊಳಿಸಲಾಗುವುದರ ಬಗ್ಗೆ ನಾವು ನಿಕಟವಾಗಿ ಮೇಲ್ವಿಚಾರಣೆಗೊಳಿಸುತ್ತಿದ್ದೇವೆ. ಎಲ್ಲ ಸಮುದಾಯಗಳಿಗೆ ಮೂಲಭೂತ ಪ್ರಜಾಸತ್ತಾತ್ಮಕ ತತ್ವಗಳ ಕಾನೂನಿನಡಿ ಧಾರ್ಮಿಕ ಸ್ವಾತಂತ್ರ ಹಾಗೂ ಸಮಾನವಾಗಿ ನಡೆಸಿಕೊಳ್ಳಬೇಕು” ಎಂದು ಅಮೆರಿಕದ ವಕ್ತಾರರಾದ ಮ್ಯಾಥ್ಯೋ ಮಿಲ್ಲರ್ ತಿಳಿಸಿದ್ದಾರೆ.

ಅಮೆರಿಕದಲ್ಲಿನ ಹಿಂದು ಸಮುದಾಯಗಳು ಸಿಎಎಯನ್ನು ಸ್ವಾಗತಿಸಿದ ನಂತರ ಬೈಡೆನ್‌ ಆಡಳಿತದಿಂದ ಹೇಳಿಕೆ ಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ ಘೋಷಿಸಿದ ಐದು ಗ್ಯಾರಂಟಿ ಮತ್ತು ಆರ್ಥಿಕತೆಯ ನಿಜನೋಟ

ಮಾರ್ಚ್‌ 11 ರಂದು ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದ್ದು, ಕಾಯ್ದೆಯನ್ವಯ 2014 ಡಿಸೆಂಬರ್‌ 31 ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಿಂದ ಭಾರತಕ್ಕೆ ಆಗಮಿಸಿದ ಮುಸ್ಲಿಂಯೇತರ ವಲಸಿಗರಿಗೆ ದಾಖಲೆ ರಹಿತ ಪೌರತ್ವ ದೊರಕಿಸಿಕೊಡಲಾಗುತ್ತದೆ.

ಪ್ರತಿಪಕ್ಷಗಳ ಪ್ರತಿಭಟನೆಯ ನಂತರ ಹೇಳಿಕೆ ಹೊರಡಿಸಿರುವ ಕೇಂದ್ರ ಸರ್ಕಾರ, ಸಿಎಎ ಕಾಯ್ದೆ ಬಗ್ಗೆ ಮುಸ್ಲಿಂ ಸಮುದಾಯ ಚಿಂತಿಸಬೇಕಾಗಿಲ್ಲ. ಸಿಎಎ ಮುಸ್ಲಿಂ ಸಮುದಾಯದ ಪೌರತ್ವಕ್ಕೆ ಯಾವುದೇ ರೀತಿಯ ತೊಂದರೆ ನೀಡುವುದಿಲ್ಲ. ಹಿಂದೂ ಸಮುದಾಯದಂತೆ ಮುಸ್ಲಿಂ ಸಮುದಾಯ ಕೂಡ ಸಮಾನ ಅವಕಾಶ ಹೊಂದಿರುತ್ತಾರೆ ಎಂದು ತಿಳಿಸಿತ್ತು.

ಸಿಎಎ ಜಾರಿಯ ಬಗ್ಗೆ ಪಾಕಿಸ್ತಾನ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದು, ಕಾನೂನು ಸ್ವಾಭಾವತಃ ತಾರತಮ್ಯದಿಂದ ಕೂಡಿದ್ದು, ಧರ್ಮದ ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ ಎಂದು ಹೇಳಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್...

ಪಿಎಂ ಮೋದಿ ಸೂಪರ್‌ ಮ್ಯಾನ್ ಅಲ್ಲ ದುಬಾರಿ ಮ್ಯಾನ್: ಪ್ರಿಯಾಂಕಾ ಗಾಂಧಿ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಸೂಪರ್ ಮ್ಯಾನ್ ಅಲ್ಲ ಬದಲಾಗಿ ಅವರು ದುಬಾರಿ...

ಅರವಿಂದ್ ಕೇಜ್ರಿವಾಲ್ ಆರೋಗ್ಯವಾಗಿದ್ದಾರೆ, ಆದರೆ ದಿನಕ್ಕೆ ಎರಡು ಡೋಸ್ ಇನ್ಸುಲಿನ್ ನೀಡಲಾಗುತ್ತಿದೆ: ವೈದ್ಯರು

ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...

60 ವರ್ಷದ ಅಲೆಜಾಂಡ್ರಾ ಮುಡಿಗೇರಿತು ಬ್ಯೂನಸ್ ಐರಿಸ್ ಮಿಸ್‌ ಯೂನಿವರ್ಸ್‌ ಪಟ್ಟ!

ಸುಮಾರು 60 ವರ್ಷದ ಅರ್ಜೆಂಟೀನಾದ ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ಅವರು ಸೌಂದರ್ಯ...