ಲೆಬನಾನ್ ಮೇಲೆ ಮುಂದುವರೆದ ಇಸ್ರೇಲ್ ಕ್ರೌರ್ಯ; 37 ಮಂದಿ ಸಾವು

Date:

ಲೆಬನಾನ್, ಗಾಝಾ ಮತ್ತು ಪ್ಯಾಲೆಸ್ತೀನ್‌ನ ಪಶ್ಚಿಮ ದಂಡೆಯ ಮೇಲೆ ಇಸ್ರೇಲಿ ಪಡೆಗಳು ತಮ್ಮ ಕ್ರೌರ್ಯವನ್ನು ಮುಂದುವರೆಸಿವೆ. ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಗಳಲ್ಲಿ ಕಳೆದ 24 ಗಂಟೆಗಳಲ್ಲಿ 37 ಮಂದಿ ಸಾವನ್ನಪ್ಪಿದ್ದಾರೆ. 151 ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾನಿನ ಆರೋಗ್ಯ ಸಚಿವಾಲಯ ತಿಳಿಸಿದೆ.

- Advertisement -

ಲೆಬಾನಾನ್ ರಾಜಧಾನಿ ಬೈರುತ್‌ನ ಜನನಿಬಿಡ ಧೈಯಾ ಪ್ರದೇಶದ ಮೇಲೆ ಶುಕ್ರವಾರ ತಡರಾತ್ರಿ ಇಸ್ರೇಲ್ ಸರಣಿ ಬಾಂಬ್ ದಾಳಿ ನಡೆಸಿದೆ. ಈ ದಾಳಿಯನ್ನು, 2023ರ ಅಕ್ಟೋಬರ್‌ನಲ್ಲಿ ಹೆಜ್ಬುಲ್ಲಾ-ಇಸ್ರೇಲ್ ಸಂಘರ್ಷ ಪ್ರಾರಂಭವಾದ ಬಳಿಕ ನಡೆದ ಅತೀ ದೊಡ್ಡ ದಾಳಿ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಇತ್ತೀಚೆಗೆ ಹತ್ಯೆಗೀಡಾದ ಹೆಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಅವರ ಸೋಧರ ಸಂಬಂಧಿ ಹಾಗೂ ನಸ್ರಲಾ ಅವರ ಉತ್ತರಾಧಿಕಾರಿ ಎಂದು ಹೇಳಲಾಗುತ್ತಿರುವ ಸೈಫುದ್ದೀನ್ ಗುರಿಯಾಗಿಸಿಕೊಂಡು ಬೈರುತ್‌ನ ಭೂಗತ ಬಂಕರ್ ಮೇಲೆ ಇಸ್ರೇಲ್ ದಾಳಿ ನಡೆಸಿದೆ.

ಮತ್ತೊಂದೆಡೆ ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ತುಲ್ಕರೆಮ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲಿ ಜೆಟ್ ಫೈಟರ್ ನಡೆಸಿದ ದಾಳಿಯಲ್ಲಿ ಕನಿಷ್ಠ 18 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ.

ಎರಡು ದಿನಗಳಲ್ಲಿ ಗಾಝಾ ಪಟ್ಟಿಯಲ್ಲಿ ಇಸ್ರೇಲಿ ಪಡೆಗಳು ಮೂರು ಯುಎನ್ ನಡೆಸುವ ಶಾಲಾ ಆಶ್ರಯಗಳ ಮೇಲೆ ದಾಳಿ ನಡೆಸಿದ್ದರಿಂದ ಕನಿಷ್ಠ 21 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಪ್ಯಾಲೆಸ್ತೀನ್ ನಿರಾಶ್ರಿತರಿಗಾಗಿ ಕೆಲಸ ಮಾಡುವ ವಿಶ್ವ ಸಂಸ್ಥೆಯ ಏಜೆನ್ಸಿ ಯುಎನ್‌ಆರ್‌ಡಬ್ಲ್ಯೂಎನ ಮುಖ್ಯಸ್ಥರು ತಿಳಿಸಿದ್ದಾರೆ.

ಈ ವರದಿ ಓದಿದ್ದೀರಾ?: ಪೇಜರ್ ದಾಳಿ | ಚೀನಾ ಸಾಕೆ, ಇಸ್ರೇಲ್‌ ಮೇಲೂ ಭಾರತ ನಿರ್ಬಂಧ ಹೇರಬೇಕಲ್ಲವೇ?

ಇರಾನ್ ಪ್ರಾದೇಶಿಕ ಯುದ್ಧವನ್ನು ಬಯಸುವುದಿಲ್ಲ ಎಂದು ಕತಾರ್ ಮೂಲಕ ವಾಷಿಂಗ್ಟನ್‌ಗೆ ಸಂದೇಶವನ್ನು ರವಾನಿಸಿದೆ. ಆದರೆ ‘ಏಕಪಕ್ಷೀಯ ಸ್ವಯಂ ಸಂಯಮದ ಹಂತವು ಕೊನೆಗೊಂಡಿದೆ’ ಎಂದು ತಿಳಿಸಿದೆ ಅಲ್ ಜಝೀರಾ ವರದಿ ಮಾಡಿದೆ.

ಕಳೆದ ವರ್ಷ ಅಕ್ಟೋಬರ್‌ನಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಲ್ಲಿ ಇದುವರೆಗೆ 41,788 ಜನರು ಸಾವನ್ನಪ್ಪಿದ್ದಾರೆ ಮತ್ತು 96,794 ಜನರು ಗಾಯಗೊಂಡಿದ್ದಾರೆ. ಇದಕ್ಕೂ ಮುನ್ನ ಇಸ್ರೇಲ್‌ ರಾಜಧಾನಿ ಟೆಲ್‌ ಅವೀವ್ ಮೇಲೆ ಹಮಾಸ್ ನಡೆಸಿದ ದಾಳಿಯಲ್ಲಿ 1,139 ಜನರು ಸಾವನ್ನಪ್ಪಿದ್ದರು ಮತ್ತು 200ಕ್ಕೂ ಹೆಚ್ಚು ಜನರನ್ನು ಹಮಾಸ್ ಒತ್ತೆಯಾಳಾಗಿಟ್ಟುಕೊಂಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್; ಭೇಟಿಯ ನಿರೀಕ್ಷೆ ಏನು?

ಚೀನಾದ ಅಧ್ಯಕ್ಷ ಕ್ಷಿ ಜಿನ್‌ಪಿಂಗ್ 11 ವರ್ಷಗಳ ಬಳಿಕ ಅಮೆರಿಕಕ್ಕೆ ಅಧಿಕೃತ...

ಶರಣಾಗುವ ಪ್ರಶ್ನೆಯೇ ಇಲ್ಲ; ಟ್ರಂಪ್‌ನ ‘ಸರ್ವನಾಶ’ದ ಬೆದರಿಕೆಗೆ ಜಗ್ಗದೆ ಎದೆ ಸೆಟೆಸಿದ ಇರಾನ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ "ಇರಾನ್ ಅನ್ನು ಸಂಪೂರ್ಣವಾಗಿ ಸರ್ವನಾಶ ಮಾಡುತ್ತೇವೆ"...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಭಾತರ ಮತ್ತು ನೇಪಾಳದಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತವು ಇಂದು ಸಂಜೆ ತಡವಾಗಿ ಉತ್ತರ...