ಉತ್ತರ ಗಾಜಾದ ಜಬಾಲಿಯಾ ನಿರಾಶ್ರಿತರ ಶಿಬಿರದಲ್ಲಿನ ವಸತಿ ಬ್ಲಾಕ್‌ನ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯ ಬಳಿಕ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 100 ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ’ಅಲ್‌ಜಜೀರಾ’ ವರದಿ ಮಾಡಿದೆ.
ಶೆಹಾಬ್ ಕುಟುಂಬದ ಮನೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದ್ದು, ಅಕ್ಕಪಕ್ಕದ ಮನೆಗಳಿಗೆ ಅಪಾರ ಹಾನಿಯಾಗಿದೆ.
ವೈದ್ಯಕೀಯ ಸೌಲಭ್ಯ ಕಲ್ಪಿಸಿದ್ದ ಜಬಾಲಿಯಾ ಪ್ರದೇಶದಲ್ಲಿ ನಡೆಸಿದ ದಾಳಿಯಲ್ಲಿ ಮಕ್ಕಳು ಸೇರಿದಂತೆ ಅನೇಕರು ಕೊಲ್ಪಟ್ಟರಿದ್ದಾರೆ ಮತ್ತು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಹಲವರು ಚಿಕಿತ್ಸೆಗಾಗಿ ಪರದಾಡುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಗಾಜಾದ 36 ಆಸ್ಪತ್ರೆಗಳಲ್ಲಿ 11 ಮಾತ್ರ ಭಾಗಶಃ ಕಾರ್ಯನಿರ್ವಹಿಸುತ್ತಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಜಬಾಲಿಯಾ ಮೇಲೆ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ. ಗಾಜಾ ಪಟ್ಟಿಯ ದಕ್ಷಿಣ ನಗರವಾದ ಖಾನ್ ಯೂನಿಸ್, ಮಧ್ಯ ಗಾಜಾದ ದೇರ್ ಅಲ್-ಬಲಾಹ್ ಸೇರಿದಂತೆ ಹಲವಾರು ಭಾಗಗಳ ಮೇಲೆ ಇಸ್ರೇಲಿ ಪಡೆಗಳು ದಾಳಿ ಮಾಡಿವೆ.
ರಾಫಾದ ಜಿನೆನಾ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು ಅನೇಕರು ಗಾಯಗೊಂಡಿದ್ದಾರೆ ಎಂದು ಮತ್ತೊಂದು ವರದಿಯಾಗಿದೆ.
ಪಶ್ಚಿಮ ದಂಡೆಯ ಆಕ್ರಮಿತ ತುಲ್ಕರೆಮ್‌ನಲ್ಲಿರುವ ನೂರ್ ಶಮ್ಸ್ ನಿರಾಶ್ರಿತರ ಶಿಬಿರವನ್ನು ಇಸ್ರೇಲಿ ವಿಮಾನವೊಂದು ಗುರಿಯಾಗಿಸಿಕೊಂಡಿದೆ. ಕನಿಷ್ಠ ಇಬ್ಬರು ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ವರದಿ ಹೇಳಿದೆ.
ಗಾಜಾದಲ್ಲಿ ನಡೆದ ಹೋರಾಟದಲ್ಲಿ ಇಬ್ಬರು ಮೀಸಲು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್‌ನ ಮಿಲಿಟರಿ ತಿಳಿಸಿದೆ. ಇಸ್ರೇಲ್ ಆಕ್ರಮಣ ಆರಂಭವಾದ ಮೇಲೆ ಇಲ್ಲಿಯವರೆಗೆ ಇಸ್ರೇಲಿ ಮಿಲಿಟರಿಯ 121 ಜನರು ಸಾವನ್ನಪ್ಪಿದ್ದಾರೆ.
ಉತ್ತರ ಗಾಜಾದ ಕಮಲ್ ಅಡ್ವಾನ್ ಆಸ್ಪತ್ರೆಯಲ್ಲಿ ಇಸ್ರೇಲಿ ಬುಲ್ಡೋಜರ್‌ಗಳು ಕಾರ್ಯಾಚರಣೆ ನಡೆಸಿ ಜನರನ್ನು ಜೀವಂತವಾಗಿ ಸಮಾಧಿ ಮಾಡಿರುವ ವರದಿಗಳ ಬಗ್ಗೆ ತನಿಖೆ ನಡೆಸುವಂತೆ ಗಾಜಾ ಆರೋಗ್ಯ ಸಚಿವರು ಆಗ್ರಹಿಸಿದ್ದಾರೆ.
ಸೆರೆಯಾಳುಗಳ ಕುಟುಂಬಗಳು ಟೆಲ್ ಅವಿವ್‌ನಲ್ಲಿ ರ್ಯಾಲಿ ನಡೆಸುತ್ತಿದ್ದಂತೆ ಬಂಧಿತರ ಬಿಡುಗಡೆಯ ಮಾತುಕತೆಗಳನ್ನು ಪುನರಾರಂಭ ಮಾಡುವ ಸೂಚನೆಯನ್ನು ನೆತನ್ಯಾಹು ದೃಢಪಡಿಸಿರುವುದಾಗಿ ಹೇಳಲಾಗುತ್ತಿದೆ.
ಪ್ಯಾಲೆಸ್ತೀನಿಯನ್ ಆರೋಗ್ಯ ಸಚಿವಾಲಯದ ಪ್ರಕಾರ, ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲಿ ದಾಳಿಯಲ್ಲಿ ಕನಿಷ್ಠ ಮೂವರು ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ.
“ಹೌತಿಗಳ ವಿರುದ್ಧ ಇಸ್ರೇಲ್ ಕಾರ್ಯನಿರ್ವಹಿಸಲು ಸಿದ್ಧವಾಗಿದೆ” ಎಂದು ಇಸ್ರೇಲಿ ರಕ್ಷಣಾ ಸಚಿವರು ಪ್ರತಿಕ್ರಿಯಿಸಿದ್ದಾರೆ.