ರಷ್ಯಾ ತೈಲ ಖರೀದಿ ನಿಲ್ಲಿಸದಿದ್ದರೆ ಭಾರತದ ಮೇಲೆ ಮತ್ತಷ್ಟು ಸುಂಕ: ಟ್ರಂಪ್‌ ಎಚ್ಚರಿಕೆ

Date:

ರಷ್ಯಾದಿಂದ ತೈಲ ಖರೀದಿಸುವ ವಿಚಾರದಲ್ಲಿ ಭಾರತವು ಅಮೆರಿಕದ ನಿಲುವಿಗೆ ಸಹಕರಿಸದಿದ್ದರೆ, ಭಾರತೀಯ ಸರಕುಗಳ ಮೇಲಿನ ಆಮದು ಸುಂಕವನ್ನು ಮತ್ತಷ್ಟು ಹೆಚ್ಚಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಎಚ್ಚರಿಕೆ ನೀಡಿದ್ದಾರೆ.

- Advertisement -

​ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಸೆರೆಹಿಡಿದ ನಂತರ ಅಮೆರಿಕದ ಮುಂದಿನ ನಡೆಗಳ ಕುರಿತು ಮಾಹಿತಿ ನೀಡುವ ವೇಳೆ ಟ್ರಂಪ್ ಈ ವಿಷಯ ಪ್ರಸ್ತಾಪಿಸಿದ್ದಾರೆ. ರಷ್ಯಾ ಜೊತೆಗಿನ ತೈಲ ವಹಿವಾಟನ್ನು ವಿರೋಧಿಸಿ, ಕಳೆದ ಆಗಸ್ಟ್ 2025ರಲ್ಲೇ ಅಮೆರಿಕವು ಭಾರತದ ಮೇಲಿನ ಸುಂಕವನ್ನು ಶೇ 50ರಷ್ಟು ಹೆಚ್ಚಿಸಿತ್ತು. ಇದೀಗ ಟ್ರಂಪ್ ಅವರ ಹೊಸ ಹೇಳಿಕೆ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಮತ್ತು ವಾಣಿಜ್ಯ ಸಂಬಂಧದಲ್ಲಿ ಮತ್ತಷ್ಟು ಬಿಕ್ಕಟ್ಟು ಸೃಷ್ಟಿಸುವ ಸಾಧ್ಯತೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

​ಶ್ವೇತಭವನ ಹಂಚಿಕೊಂಡಿರುವ ಆಡಿಯೊ ಒಂದರಲ್ಲಿ ಮಾತನಾಡಿರುವ ಟ್ರಂಪ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಸ್ತಾಪಿಸುತ್ತಾ, “ಮೋದಿ ಒಬ್ಬ ಒಳ್ಳೆಯ ವ್ಯಕ್ತಿ . ಆದರೆ, ರಷ್ಯಾ ತೈಲ ವಿಚಾರದಲ್ಲಿ ನಾನು ಸಂತೋಷವಾಗಿಲ್ಲ ಎಂಬುದು ಅವರಿಗೆ ತಿಳಿದಿದೆ. ಅವರು ನನ್ನನ್ನು ಸಂತೋಷವಾಗಿಡುವುದು ಮುಖ್ಯವಾಗಿತ್ತು. ಅವರು ವ್ಯಾಪಾರ ಮಾಡುತ್ತಿದ್ದಾರೆ, ಹೀಗಾಗಿ ನಾವು ಅವರ ಮೇಲಿನ ಸುಂಕಗಳನ್ನು ತ್ವರಿತವಾಗಿ ಹೆಚ್ಚಿಸಬಹುದು” ಎಂದು ಖಾರವಾಗಿ ನುಡಿದಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ‘ಕಾಮುಕರ’ ವಿರುದ್ಧ ಕುಡುಗೋಲು ಹಿಡಿದ ಮಹಿಳಾ ಶಕ್ತಿ!

ರಷ್ಯಾದ ತೈಲ ಖರೀದಿಯನ್ನು ಭಾರತ ನಿಲ್ಲಿಸಲಿದೆ ಎಂದು ಪ್ರಧಾನಿ ಮೋದಿ ತಮಗೆ ಭರವಸೆ ನೀಡಿದ್ದರು ಎಂದು ಕಳೆದ ಅಕ್ಟೋಬರ್‌ನಲ್ಲಿ ಟ್ರಂಪ್ ಹೇಳಿಕೊಂಡಿದ್ದರು. ಆದರೆ, ಭಾರತ ಸರ್ಕಾರವು ಟ್ರಂಪ್ ಅವರ ಈ ಹೇಳಿಕೆಯನ್ನು ತಳ್ಳಿಹಾಕಿತ್ತು. ಮೋದಿ ಮತ್ತು ಟ್ರಂಪ್ ನಡುವೆ ಅಂತಹ ಯಾವುದೇ ಮಾತುಕತೆ ನಡೆದಿಲ್ಲ ಎಂದು ಭಾರತ ಸ್ಪಷ್ಟಪಡಿಸಿತ್ತು.

​ಅಮೆರಿಕದ ನಿರಂತರ ಒತ್ತಡದ ನಡುವೆಯೂ, “ತನ್ನ ದೇಶದ ಇಂಧನ ಭದ್ರತೆ, ಗ್ರಾಹಕರ ಅಗತ್ಯಗಳು ಮತ್ತು ಮಾರುಕಟ್ಟೆಯಲ್ಲಿ ದೊರೆಯುವ ಉತ್ತಮ ಬೆಲೆಯನ್ನು ಆಧರಿಸಿ ತೈಲ ಖರೀದಿ ನೀತಿಯನ್ನು ರೂಪಿಸಲಾಗುತ್ತದೆ,” ಎಂದು ಭಾರತ ತನ್ನ ನಿಲುವನ್ನು ಬಲವಾಗಿ ಸಮರ್ಥಿಸಿಕೊಳ್ಳುತ್ತಲೇ ಬಂದಿದೆ.

ಪ್ರಸ್ತುತ ರಷ್ಯಾವು ಭಾರತಕ್ಕೆ ಅತಿ ಹೆಚ್ಚು ತೈಲ ಪೂರೈಸುವ ರಾಷ್ಟ್ರವಾಗಿದೆ. ಉಕ್ರೇನ್ ಮೇಲಿನ ಯುದ್ಧವನ್ನು ನಿಲ್ಲಿಸಲು ರಷ್ಯಾ ಅಧ್ಯಕ್ಷ ಪುಟಿನ್ ಮೇಲೆ ಒತ್ತಡ ಹೇರುವ ತಂತ್ರವಾಗಿ ಟ್ರಂಪ್ ಆಡಳಿತವು ಭಾರತದ ಮೇಲೆ ಭಾರೀ ಸುಂಕಗಳನ್ನು ವಿಧಿಸಿತ್ತು. ಭಾರತವು ರಷ್ಯಾದ ತೈಲವನ್ನು ಖರೀದಿಸುವ ಮೂಲಕ ಯುದ್ಧಕ್ಕೆ ಪರೋಕ್ಷವಾಗಿ ಇಂಧನ ನೀಡುತ್ತಿದೆ ಮತ್ತು ತೈಲ ಮರುಮಾರಾಟದಿಂದ ಕೋಟ್ಯಂತರ ಲಾಭ ಮಾಡುತ್ತಿದೆ ಎಂದು ಟ್ರಂಪ್ ಆಡಳಿತದ ಅಧಿಕಾರಿಗಳು ಆರೋಪಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...

ಗಾಜಾ ನರಮೇಧ : ಪ್ಯಾಲೆಸ್ತೀನಿಯನ್ ಪಟ್ಟಣಗಳ ನಾಶವನ್ನು ತೋರಿಸುವ ಉಪಗ್ರಹಚಿತ್ರಗಳು

ಜೆರುಸಲೇಮ್: ಕಳೆದ ವರ್ಷ ಇಸ್ರೇಲ್–ಹಮಾಸ್ ಕದನ ವಿರಾಮ ಒಪ್ಪಂದ ಜಾರಿಯಾದ ಬಳಿಕವೂ...

ಅಮೆಜಾನ್‌ನಲ್ಲಿ ಮತ್ತೆ ಉದ್ಯೋಗ ಕಡಿತ ; ಭಾರತದ ಉದ್ಯೋಗಿಗಳಿಗೂ ತಟ್ಟಿದ ಪರಿಣಾಮ

ದೆಹಲಿ/ವಾಷಿಂಗ್ಟನ್‌ ಡಿಸಿ : ಇ-ಕಾಮರ್ಸ್ ದೈತ್ಯ ಅಮೆಜಾನ್ ಮತ್ತೊಮ್ಮೆ ಉದ್ಯೋಗ ಕಡಿತದ...