ತೈಲ ನಿರ್ಬಂಧ; ಇಂಧನ ಭದ್ರತೆ ಸರ್ಕಾರದ ಪ್ರಮುಖ ಆದ್ಯತೆ: ವಿದೇಶಾಂಗ ಸಚಿವಾಲಯ

Date:

ರಷ್ಯಾದ ತೈಲ ನಿರ್ಬಂಧ, ತೈಲ ಆಮದಿನ ಬಗ್ಗೆ ವಿದೇಶಾಂಗ ಸಚಿವಾಲಯ ಶನಿವಾರ ತನ್ನ ನಿಲುವನ್ನು ಪುನರುಚ್ಚರಿಸಿದ್ದು, ಭಾರತದ ಇಂಧನ ಭದ್ರತೆಯು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಹೇಳಿದೆ.

- Advertisement -

” 1.4 ಶತಕೋಟಿ ಭಾರತೀಯರ ಇಂಧನ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಅತ್ಯುನ್ನತ ಆದ್ಯತೆಯಾಗಿದೆ ಎಂದು ಸರ್ಕಾರ ಹಲವಾರು ಸಂದರ್ಭಗಳಲ್ಲಿ ಸಾರ್ವಜನಿಕವಾಗಿ ಹೇಳಿದೆ” ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಇರಾನ್‌ನಿಂದ ತೈಲ ಆಮದು ಆರೋಪ: ಭಾರತದ ಆರು ಕಂಪನಿಗಳ ಸೇರಿ 20 ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ

“ವಸ್ತುನಿಷ್ಠ ಮಾರುಕಟ್ಟೆ ಪರಿಸ್ಥಿತಿಗಳು ಮತ್ತು ವಿಕಸನಗೊಳ್ಳುತ್ತಿರುವ ಅಂತಾರಾಷ್ಟ್ರೀಯ ಚಲನಶೀಲತೆಗೆ ಅನುಗುಣವಾಗಿ ನಮ್ಮ ಇಂಧನ ಮೂಲವನ್ನು ವೈವಿಧ್ಯಗೊಳಿಸುವುದು ನಮ್ಮ ಕಾರ್ಯತಂತ್ರವಾಗಿದೆ. ಭಾರತದ ಎಲ್ಲಾ ಕ್ರಮಗಳನ್ನುಗಮನದಲ್ಲಿಟ್ಟುಕೊಂಡು ತೆಗೆದುಕೊಳ್ಳಲಾಗುತ್ತದೆ” ಎಂದೂ ಹೇಳಿದೆ.

ಈ ನಡುವೆ ನವದೆಹಲಿಯಲ್ಲಿ ನಡೆದ NDTV ಪ್ರಾಫಿಟ್ ಕಾನ್ಕ್ಲೇವ್ 2026 ಕಾರ್ಯಕ್ರಮದಲ್ಲಿ ರಷ್ಯಾದ ತೈಲದ ಕುರಿತು ಮಾತನಾಡಿದ ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್, ರಷ್ಯಾದಿಂದ ತೈಲ ಆಮದು ಕಡಿಮೆ ಮಾಡುವುದರ ಹಿಂದೆ ಇರುವ ನಿರ್ಬಂಧಗಳಿಗೆ ಸಂಬಂಧಿಸಿದ ನೈಜ ಕಾರಣಗಳನ್ನು ಮಾಸ್ಕೋ ಅರ್ಥಮಾಡಿಕೊಂಡಿದೆ” ಎಂದು ಹೇಳಿದ್ದಾರೆ.

“ಭಾರತವು ತನ್ನ ಆರ್ಥಿಕ ವ್ಯವಸ್ಥೆಯನ್ನು ಅಂತಾರಾಷ್ಟ್ರೀಯ ನಿರ್ಬಂಧಗಳಿಗೆ ಗುರಿಪಡಿಸಲು ಬಯಸುವುದಿಲ್ಲ ಎಂಬ ಎಚ್ಚರಿಕೆಯ ನಿಲುವನ್ನು ರಷ್ಯಾ ಗೌರವಿಸುತ್ತದೆ. ಇರಾನ್ ಅಥವಾ ಮಧ್ಯಪ್ರಾಚ್ಯದ ಪರಿಸ್ಥಿತಿ ಹದಗೆಡದಿದ್ದರೆ ಮತ್ತು ತೈಲ ಬೆಲೆಗಳು ಸ್ಥಿರವಾಗಿದ್ದರೆ, ರಷ್ಯಾದಿಂದ ತೈಲ ಖರೀದಿ ಪ್ರಮಾಣವನ್ನು ಬದಲಿಸುವುದು ಭಾರತದ ಆರ್ಥಿಕತೆಯ ಮೇಲೆ ದೊಡ್ಡ ಪರಿಣಾಮ ಬೀರದು” ಎಂದೂ ಅಭಿಪ್ರಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಪಡಿತರ ಚೀಟಿ ರದ್ದಾಗಲು ಮೋದಿ ಸರ್ಕಾರವೇ ಮುಖ್ಯ ಕಾರಣ

“ಭಾರತದ ಇಂಧನ ಅಗತ್ಯಗಳನ್ನು ಪೂರೈಸಲು ಇತರ ದೇಶಗಳಿಂದ (ಅಮೆರಿಕ ಅಥವಾ ವೆನೆಜುವೆಲಾ ಸೇರಿದಂತೆ) ತೈಲವನ್ನು ಆಮದು ಮಾಡಿಕೊಳ್ಳುವ ಸಾಧ್ಯತೆಗಳ ಬಗ್ಗೆ ಯಾವುದೇ ತೀರ್ಮಾನಕ್ಕೆ ಬರುವ ಮೊದಲು ನಿಖರವಾದ ಆರ್ಥಿಕ ಲೆಕ್ಕಾಚಾರಗಳನ್ನು ಮಾಡಬೇಕಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು, “ಭಾರತ ಮತ್ತು ಅಮೆರಿಕ ನಡುವಿನ ಇತ್ತೀಚಿನ ಮಧ್ಯಂತರ ವ್ಯಾಪಾರ ಒಪ್ಪಂದವು ಭಾರತದ ರಫ್ತುಗಳ ಮೇಲಿನ ಸುಂಕಗಳನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಅಮೆರಿಕ ವಿಧಿಸಿದ್ದ ಶೇ. 25ರಷ್ಟು ಹೆಚ್ಚುವರಿ ಸುಂಕವು ಭಾರತೀಯ ಆರ್ಥಿಕತೆಗೆ ಅಡ್ಡಿಯಾಗಿತ್ತು, ಈಗ ಅದು ಶೇ. 18ಕ್ಕೆ ಇಳಿಕೆಯಾಗಿರುವುದು ಸಕಾರಾತ್ಮಕ ಬೆಳವಣಿಗೆಯಾಗಿದೆ” ಎಂದೂ ಹೇಳಿಕೊಂಡಿದ್ದಾರೆ.

ರಷ್ಯಾದ ಮೇಲಿನ ಅಮೆರಿಕದ ನಿರ್ಬಂಧಗಳಿಂದಾಗಿ ಭಾರತವು ರಷ್ಯಾದಿಂದ ತೈಲ ಖರೀದಿಯನ್ನು ಕಡಿಮೆ ಮಾಡಿ, ಅಮೆರಿಕದಿಂದ ಹೆಚ್ಚಿನ ತೈಲವನ್ನು ಖರೀದಿಸಲು ಒಪ್ಪಿಕೊಂಡಿದೆ. 2026ರ ಜನವರಿಯಲ್ಲಿ ರಷ್ಯಾದಿಂದ ಭಾರತಕ್ಕೆ ತೈಲ ರಫ್ತು 34% ರಷ್ಟು ಕುಸಿದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...