ಇಮ್ರಾನ್‌ ಖಾನ್ ಬಂಧನ; ಪಾಕಿಸ್ತಾನದಾದ್ಯಂತ ಭುಗಿಲೆದ್ದ ಆಕ್ರೋಶ

Date:

  • ದೇಶದ ಹಲವು ಕಡೆ ನಡೆದ ಘರ್ಷಣೆಯಲ್ಲಿ 6 ಮಂದಿ ಮೃತ
  • ಪಾಕ್‌ನ ವಿವಿಧಡೆ ನಿಷೇಧಾಜ್ಞೆ, ಇಂಟರ್‌ನೆಟ್ ಸ್ಥಗಿತ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನದಿಂದಾಗಿ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಪಂಜಾಬ್‍ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಒಂದು ಸಾವಿರಕ್ಕೂ ಹೆಚ್ಚು ಜನರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಮ್ರಾನ್‌ ಖಾನ್‌ ಅವರನ್ನು 8 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಬಲೂಚಿಸ್ತಾನ, ಖೈಬರ್‌ ಪ್ರಾಂತ್ಯ ಹಾಗೂ ಪಂಜಾಬ್‌ನಲ್ಲಿ ಪಾಕ್‌ ಸೇನೆ ಕಟ್ಟೆಚ್ಚರ ವಹಿಸಿದೆ.

- Advertisement -

ಬಂಧಿತರಲ್ಲಿ ಬಹುತೇಕರು ಕಾನೂನು ಉಲ್ಲಂಘಿಸಿದ್ದು, ಉಳಿದವರು ಉಲ್ಲಂಘಿಸಿದವರಿಗೆ ಬೆಂಬಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಇಮ್ರಾನ್‌ ಖಾನ್‌ ಅವರನ್ನು ಇಸ್ಲಾಮಾಬಾದ್‍ನ ಹೈಕೋರ್ಟ್ ಬಳಿ ಪ್ಯಾರಾ ಮಿಲಿಟರಿ ಪಡೆ ಬಂಧಿಸಿತ್ತು. ನಂತರ ಉಂಟಾದ ಹಿಂಸಾಚಾರದಲ್ಲಿ ನೂರಾರು ಅಧಿಕಾರಿಗಳು ಗಾಯಗೊಂಡಿದ್ದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪ್ರಕರಣವೊಂದರ ವಿಚಾರಣೆಗಾಗಿ ಇಸ್ಲಾಮಾಬಾದ್‍ನ ಹೈಕೋರ್ಟ್ ತೆರಳುತ್ತಿದ್ದ ವೇಳೆ ಇಮ್ರಾನ್‍ಖಾನ್ ಅವರನ್ನು ಬಂಧಿಸಲಾಗಿತ್ತು. ಇಮ್ರಾನ್ ಅವರ ಬಂಧನವನ್ನು ವಿರೋಧಿಸಿದ ಅವರ ಬೆಂಬಲಿಗರು ಲಾಹೋರ್‌ನಲ್ಲಿರುವ ಸೇನಾ ಕಮಾಂಡರ್‌ಗಳ ನಿವಾಸದ ಆವರಣವನ್ನು ಪ್ರವೇಶಿಸಿ ದಾಂಧಲೆ ನಡೆಸಿದ್ದರು. ವಾಯುಪಡೆ ಸ್ಮಾರಕವನ್ನು ಧ್ವಂಸಗೊಳಿಸಲಾಗಿತ್ತು. ಪೇಶಾವರದಲ್ಲಿ ರೇಡಿಯೋ ಕಟ್ಟಡಕ್ಕೂ ಬೆಂಕಿ ಹಚ್ಚಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ

ಇಸ್ಲಾಮಾಬಾದ್‍ನಾದ್ಯಂತ ಜನರು ಗುಂಪಾಗಿ ಸೇರುವುದನ್ನು ನಿಷೇಧಿಸಲಾಗಿದ್ದು, ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಘರ್ಷಣೆಯಲ್ಲಿ ಆರು ಮಂದಿ ಮೃತ        

ಪಾಕಿಸ್ತಾನ್ ತೆಹ್ರೀಕ್ ಇ ಇನ್ಸಾಫ್ ಕಾರ್ಯಕರ್ತರು, ದೇಶಾದ್ಯಂತ ಬಂದ್‌ಗೆ ಕರೆ ನೀಡಿರುವ ಕಾರಣ ಪಾಕ್‌ನ ವಿವಿಧೆಡೆ ನಿಷೇಧಾಜ್ಞೆ ಹೇರಲಾಗಿದೆ. ಘರ್ಷಣೆಗಳಲ್ಲಿ ಈವರೆಗೂ ಆರು ಮಂದಿ ಮೃತಪಟ್ಟಿದ್ದಾರೆ. ಇಂಟರ್‌ನೆಟ್ ಸಂಪರ್ಕ ಸ್ಥಗಿತಗೊಂಡಿದೆ. ಇಸ್ಲಾಮಾಬಾದ್ ಸುತ್ತಮುತ್ತ ಬಿಗಿ ಬಂದೊಬಸ್ತ್ ವಹಿಸಲಾಗಿದೆ. ಇಮ್ರಾನ್ ಖಾನ್ ಬಿಡುಗಡೆಯಾಗುವವರೆಗೂ ಹೋರಾಟ ಮುಂದುವರೆಸುವುದಾಗಿ ಪಿಟಿಐ ಕಾರ್ಯಕರ್ತರು ತಿಳಿಸಿದ್ದಾರೆ.

ಅಲ್ ಖಾದಿರ್ ಟ್ರಸ್ಟ್ ಪ್ರಕರಣದಲ್ಲಿ ಇಮ್ರಾನ್ ಖಾನ್ ಅವರನ್ನು ಬಂಧಿಸಲಾಗಿದೆ. ಇಮ್ರಾನ್ ಖಾನ್ ಪ್ರಧಾನಿಯಾಗಿದ್ದಾಗ ಪಂಜಾಬ್ ಪ್ರಾಂತ್ಯದ ಝೇಲಂನಲ್ಲಿ ಅಲ್ ಖಾದಿರ್ ವಿವಿ ಸ್ಥಾಪನೆಯ ವಿಚಾರವಾಗಿ ರಿಯಲ್ ಎಸ್ಟೇಟ್ ಉದ್ಯಮಿ ಮಲಿಕ್ ರಿಯಾಜ್ ಅವರಿಂದ ಕಿಕ್ ಬ್ಯಾಕ್ ರೂಪದಲ್ಲಿ ಜಮೀನು ಪಡೆದುಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಇಮ್ರಾನ್ ಖಾನ್ ವಿರುದ್ಧ ಪ್ರಕರಣವೂ ದಾಖಲಾಗಿತ್ತು.

ಕಳೆದ ವರ್ಷ ಏಪ್ರಿಲ್‌ನಲ್ಲಿ ಅವಿಶ್ವಾಸದ ಮತದ ಮೂಲಕ ಅವರನ್ನು ಪದಚ್ಯುತಗೊಳಿಸಿದ ನಂತರ ಭಯೋತ್ಪಾದನೆ, ಧರ್ಮ ನಿಂದನೆ, ಕೊಲೆ, ಹಿಂಸೆ, ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಇಷ್ಟಲ್ಲದೆ ಇಮ್ರಾನ್ ಖಾನ್ ವಿರುದ್ಧ ಭ್ರಷ್ಟಾಚಾರದ ಹಲವು ಪ್ರಕರಣಗಳು ದಾಖಲಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...