ಅಮೆರಿಕ, ಇಸ್ರೇಲ್ ಎರಡೂ ದೇಶಗಳ ಮೇಲೂ ದಾಳಿ: ಇರಾನ್ ಎಚ್ಚರಿಕೆ

Date:

ಇರಾನ್‌ನಲ್ಲಿ ಆಂತರಿಕ ದಂಗೆ ತೀವ್ರಗೊಂಡಿರುವ ನಡುವೆಯೇ, ಪರಿಸ್ಥಿತಿಯ ಲಾಭ ಪಡೆದು ಅಮೆರಿಕ ಸೇನಾ ಕಾರ್ಯಾಚರಣೆಗೆ ಮುಂದಾದರೆ ಅಮೆರಿಕದ ನೆಲೆಗಳು ಹಾಗೂ ಇಸ್ರೇಲ್ ಈ ಎರಡೂ ದೇಶಗಳ ಮೇಲೆ ಮುಗಿಬೀಳುವುದಾಗಿ ಇರಾನ್ ಬಹಿರಂಗ ಎಚ್ಚರಿಕೆ ನೀಡಿದೆ.

- Advertisement -

​ಭಾನುವಾರ ನಡೆದ ಇರಾನ್ ಸಂಸತ್ತಿನ ಅಧಿವೇಶನದಲ್ಲಿ ಮಾತನಾಡಿದ ಸ್ಪೀಕರ್ ಮೊಹಮ್ಮದ್ ಬಾಘರ್ ಖಾಲಿಬಾಫ್, “ದೇಶದಲ್ಲಿನ ಅಶಾಂತಿಯ ನೆಪವೊಡ್ಡಿ ಅಮೆರಿಕ ನಮ್ಮ ಮೇಲೆ ಆಕ್ರಮಣಕ್ಕೆ ಮುಂದಾದರೆ ಸುಮ್ಮನಿರುವುದಿಲ್ಲ. ಈ ಪ್ರಾಂತ್ಯದಲ್ಲಿರುವ ಅಮೆರಿಕದ ಸೇನಾ ನೆಲೆಗಳು ಹಾಗೂ ಇಸ್ರೇಲ್ ದೇಶ ಇವೆರಡನ್ನೂ ‘ನ್ಯಾಯಸಮ್ಮತ ಗುರಿ’ಗಳನ್ನಾಗಿ ಪರಿಗಣಿಸಿ, ಎರಡೂ ಕಡೆಗಳಲ್ಲೂ ಭೀಕರ ಪ್ರತಿದಾಳಿ ನಡೆಸಲಾಗುವುದು,” ಎಂದು ಎಚ್ಚರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

​ಇದೇ ವೇಳೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್, “ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಅಮೆರಿಕ ಮತ್ತು ಇಸ್ರೇಲ್ ಕುಮ್ಮಕ್ಕು ನೀಡುತ್ತಿವೆ. ಗಲಭೆಕೋರರು ಮತ್ತು ಭಯೋತ್ಪಾದಕರನ್ನು ಬಳಸಿಕೊಂಡು ಇರಾನ್‌ನಲ್ಲಿ ಅಸ್ಥಿರತೆ ಉಂಟುಮಾಡಲು ಈ ಎರಡೂ ದೇಶಗಳು ಸಂಚು ರೂಪಿಸಿವೆ,” ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಟ್ರಂಪ್ ವಿರುದ್ಧ ಇನ್ನಾದರೂ ಎದೆ ಸೆಟೆಸುವರೇ ಮೋದಿ?

ಇನ್ನೊಂದೆಡೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ಇರಾನ್ ಜನರು ಸರ್ಕಾರದ ದಬ್ಬಾಳಿಕೆ ವಿರುದ್ಧ ತಿರುಗಿಬಿದ್ದಿದ್ದಾರೆ. ಪ್ರತಿಭಟನಾಕಾರರ ಮೇಲೆ ದೌರ್ಜನ್ಯ ನಡೆದರೆ ಅಮೆರಿಕ ಪ್ರಬಲ ಉತ್ತರ ನೀಡಬೇಕಾಗುತ್ತದೆ,” ಎಂದು ಎಚ್ಚರಿಸಿದ್ದಾರೆ.
​
ಇರಾನ್ ಕರೆನ್ಸಿ (ರಿಯಾಲ್) ಮೌಲ್ಯ ಕುಸಿತ ಮತ್ತು ಗಗನಕ್ಕೇರುತ್ತಿರುವ ಜೀವನ ವೆಚ್ಚದ ವಿರುದ್ಧ ಸುಮಾರು ಎರಡು ವಾರಗಳ ಹಿಂದೆ ಆರಂಭವಾದ ಪ್ರತಿಭಟನೆ, ಇದೀಗ ಇರಾನ್‌ನ ಧಾರ್ಮಿಕ ನಾಯಕತ್ವದ ವಿರುದ್ಧದ ಹೋರಾಟವಾಗಿ ಮಾರ್ಪಟ್ಟಿದೆ. ಟೆಹ್ರಾನ್, ಮಶಹದ್ ಸೇರಿದಂತೆ ಪ್ರಮುಖ ನಗರಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಮಾನವ ಹಕ್ಕುಗಳ ಸಂಘಟನೆಗಳ ಪ್ರಕಾರ, ಈ ಸಂಘರ್ಷದಲ್ಲಿ ಈವರೆಗೆ 116 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 2,600 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿಬೆಟ್‌ನಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ: ಜಲಪ್ರಳಯದ ಬೆನ್ನಲ್ಲೇ ಚೀನಾಗೆ ಮತ್ತೊಂದು ಆಘಾತ

ಚೀನಾದ ಟಿಬೆಟ್ ಭಾಗದಲ್ಲಿ ಗುರುವಾರ ರಾತ್ರಿ 7.0 ತೀವ್ರತೆಯ ಭಾರಿ ಭೂಕಂಪ...

ಗಾಜಾ ಯುದ್ಧದ ನೆರಳಲ್ಲಿ ನಿರ್ಣಾಯಕ ಸಮರ; ಹೇಗಿರಲಿದೆ ಗೊತ್ತೇ ಇಸ್ರೇಲ್ ಚುನಾವಣೆ?

ಇಸ್ರೇಲ್‌ನಲ್ಲಿ ಇದೇ ಅಕ್ಟೋಬರ್ 27ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ದೇಶದ 26ನೇ...

ಎಪ್‌ಸ್ಟೀನ್ ಫೋಟೊ ಬಾಂಬ್‌! ಮೋದಿ-ಪುರಿ ವಿರುದ್ಧ ವಿಪಕ್ಷಗಳ ವಾಗ್ದಾಳಿ

ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಅಮೆರಿಕದ ಕುಖ್ಯಾತ ಅಪರಾಧಿ ಜೆಫ್ರಿ ಎಪ್‌ಸ್ಟೀನ್...