ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

Date:

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000 ದಾಟಿದೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಹೇಳಿದೆ. ಕಳೆದು ಮೂರು ವರ್ಷಗಳಿಂದ ಇಸ್ರೇಲ್ ಎಸಗುತ್ತಿರುವ ಕ್ರೌರ್ಯದ ವಿರುದ್ಧ ನಾನಾ ರಾಷ್ಟ್ರಗಳು ತೀವ್ರ ಖಂಡನೆ ವ್ಯಕ್ತಪಡಿಸುತ್ತಿವೆ. ಈ ನಡುವೆ, ಇಸ್ರೇಲ್‌ನಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ವಿಪಕ್ಷಗಳು ಒಗ್ಗೂಡುತ್ತಿದ್ದು, ಮುಂದಿನ ಚುನಾವಣೆಯಲ್ಲಿ ನೆಹನ್ಯಾಹು ಅವರನ್ನು ಮಣಿಸಲು ಸಿದ್ದತೆ ನಡೆಸುತ್ತಿವೆ.

- Advertisement -

ಗಾಜಾದ ಆರೋಗ್ಯ ಸಚಿವಾಲಯವು ನೀಡಿರುವ ಇತ್ತೀಚಿನ ಅಧಿಕೃತ ಮಾಹಿತಿಯ ಪ್ರಕಾರ, ಪ್ಯಾಲೆಸ್ತೀನಿಯರ ಮೇಲೆ 2023ರ ಅಕ್ಟೋಬರ್ 7ರಂದು ಇಸ್ರೇಲ್‌ ಕ್ರೌರ್ಯ ಆರಂಭಿಸಿದಾಗಿನಿಂದ ಈವರೆಗೆ 74,016 ಮಂದಿ ಗಾಜಾ ಜನರು ಸಾವನ್ನಪ್ಪಿದ್ದಾರೆ. 1,75,068ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

2025ರ ಅಕ್ಟೋಬರ್‌ನಲ್ಲಿ ಅಮೆರಿಕ ಮಧ್ಯಸ್ಥಿಕೆವಹಿಸಿ, ಶಾಂತಿ ಮಾತುಕತೆ ನಡೆಸಿತ್ತು. ಅಕ್ಟೋಬರ್‌ 10ರಿಂದ ಕದನ ವಿರಾಮ ಜಾರಿಯಲ್ಲಿದೆ. ಆದರೆ, ಅಮೆರಿಕವು ಗಾಜಾವನ್ನು ತನ್ನ ಪ್ರವಾಸೋದ್ಯಮ ತಾಣವಾಗಿ ಮಾಡಿಕೊಳ್ಳುವ ಒಳಸಂಚು ಹೊಂದಿದೆ. ಆದ್ದರಿಂದ, ಗಾಜಾ ಜನರು ಇಸ್ರೇಲ್ ಮಾತ್ರವಲ್ಲದೆ, ಅಮೆರಿಕದ ಕರಾಳ ದೃಷ್ಠಿಯಿಂದಲೂ ತಪ್ಪಿಸಿಕೊಳ್ಳಬೇಕಿದೆ. ಇದೆಲ್ಲದರ ನಡುವೆ, ಇಸ್ರೇಲ್ ಪದೇ-ಪದೇ ಕದನ ವಿರಾಮವನ್ನು ಉಲ್ಲಂಘಸಿ ಗಾಜಾ ಮೇಲೆ ದಾಳಿ ನಡೆಸುತ್ತಲೇ ಇದೆ. ಕದನ ವಿರಾಮ ಜಾರಿಯಾದ ನಂತರವೂ ಕನಿಷ್ಠ 1,145 ಫಿಲೆಸ್ತೀನಿಯನ್ನರು ಇಸ್ರೇಲ್ ಕೊಂದಿದೆ.

ಗಾಜಾದ ಅರ್ಧಕ್ಕಿಂತ ಹೆಚ್ಚಿನ ಪ್ರದೇಶವು ಈಗ ಇಸ್ರೇಲ್ ಸೇನೆಯ ಸಂಪೂರ್ಣ ನಿಯಂತ್ರಣದಲ್ಲಿದೆ. ಹಮಾಸ್ ತನ್ನ ಶಸ್ತ್ರಾಸ್ತ್ರಗಳನ್ನು ಪೂರ್ಣವಾಗಿ ತ್ಯಜಿಸುವವರೆಗೆ ಸೇನೆಯನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ನೆತನ್ಯಾಹು ಹೇಳಿದ್ದಾರೆ. ಮತ್ತೊಂದೆಡೆ, ಗಾಜಾದ ವಿಮೋಚನೆಗಾಗಿ ಹೋರಾಡುತ್ತಿರುವ ಹಮಾಸ್ ಶಸ್ತ್ರತ್ಯಾಗಕ್ಕೆ  ಒಪ್ಪುವುದಿಲ್ಲ ಎಂದು ಬಲವಾಗಿ ಪ್ರತಿಪಾದಿಸಿದೆ.

ಈ ಯುದ್ಧದ ಹಿನ್ನೆಲೆಯಲ್ಲಿ ಇಸ್ರೇಲ್ ದೇಶೀಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ಪ್ರಧಾನಿ ನೆತನ್ಯಾಹು ವಿರುದ್ಧ ಪ್ರಮುಖ ಯಹೂದಿ ವಿರೋಧ ಪಕ್ಷಗಳ ನಾಯಕರು ಶನಿವಾರ ಜಂಟಿ ಸಭೆ ನಡೆಸಿ, ಮುಂದಿನ ಚುನಾವಣೆಗೆ ಮೈತ್ರಿ ಘೋಷಿಸಿದ್ದಾರೆ. ಮಾಜಿ ಸೇನಾ ಮುಖ್ಯಸ್ಥ ಗಾಡಿ ಐಸೆನ್‌ಕೋಟ್, ಮಾಜಿ ಪ್ರಧಾನಿಗಳಾದ ನಫ್ತಾಲಿ ಬೆನೆಟ್ ಮತ್ತು ಯೇರ್ ಲಾಪಿಡ್, ಸೆಂಟರ್-ಲೆಫ್ಟ್ ಪಕ್ಷದ ಮುಖ್ಯಸ್ಥ ಯೇರ್ ಗೋಲನ್ ಮತ್ತು ಪ್ರಭಾವಿ ನಾಯಕ ಅವಿಗ್ಡೋರ್ ಲೈಬರ್‌ಮ್ಯಾನ್ ಅವರು ಒಟ್ಟಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಮುಂಬರುವ ಸಾರ್ವತ್ರಿಕ ಚುನಾವಣೆಯು ಇಸ್ರೇಲ್‌ನ ಭವಿಷ್ಯದ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿದ್ದು, ಮತದಾನದ ಪ್ರಮಾಣವನ್ನು ಹೆಚ್ಚಿಸಲು, ಅಪಪ್ರಚಾರ ಹಾಗೂ ಸುಳ್ಳು ಸುದ್ದಿಗಳನ್ನು ಮೆಟ್ಟಿ ನಿಲ್ಲಲು ಮತ್ತು ಮುಂದಿನ ಸರ್ಕಾರದ ಮೂಲ ತತ್ವಗಳನ್ನು ರೂಪಿಸಲು ಜಂಟಿಯಾಗಿ ಶ್ರಮಿಸುವುದಾಗಿ ವಿಪಕ್ಷ ನಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ...

ಮಳೆ ಅಬ್ಬರ: ಉತ್ತರ ಪ್ರದೇಶದಲ್ಲಿ 10 ಮಂದಿ ಸಾವು; ಒಡಿಶಾದಲ್ಲಿ ಪ್ರವಾಹ

ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಉತ್ತರ ಪ್ರದೇಶ...

26 ಬಾರಿ ಸೋತರೂ ಕುಗ್ಗದ ಛಲ; 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕ ಹುದ್ದೆ ಪಡೆದ ವೃದ್ಧ

ಸರಿಯಾದ ಪ್ರಯತ್ನ ಮತ್ತು ಛಲವಿದ್ದರೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು...

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...