RSS ಮುಖ್ಯಸ್ಥ ಮೋಹನ್ ಭಾಗವತ್‌ಗೆ ಕೆನಡಾ ಪ್ರವೇಶ ನಿರಾಕರಣೆ: 40ಕ್ಕೂ ಅಧಿಕ ಸಂಘಟನೆಗಳಿಂದ ಸರ್ಕಾರಕ್ಕೆ ಪತ್ರ

Date:

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್‌ ಅವರ ಮುಂಬರುವ ಕೆನಡಾ ಭೇಟಿಗೆ ಅಲ್ಲಿನ ಅನೇಕ ಸಂಘಟನೆಗಳು ಮತ್ತು ರಾಜಕೀಯ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 40ಕ್ಕೂ ಹೆಚ್ಚು ಕೆನಡಿಯನ್ ನಾಗರಿಕ ಸಮಾಜದ ಸಂಘಟನೆಗಳು ಜಂಟಿ ಪತ್ರ ಬರೆದು, ಮೋಹನ್ ಭಾಗವತ್ ಅವರಿಗೆ ಕೆನಡಾ ಪ್ರವೇಶಿಸದಂತೆ ತಡೆ ನೀಡಬೇಕು ಎಂದು ಕೆನಡಾ ಫೆಡರಲ್ ಸರ್ಕಾರವನ್ನು ಒತ್ತಾಯಿಸಿವೆ.

- Advertisement -

ಸಂಘಟನೆಗಳ ಜತೆಗೆ ಕೆನಡಾದ ಪ್ರತಿಪಕ್ಷವಾದ ನ್ಯೂ ಡೆಮಾಕ್ರಟಿಕ್ ಪಾರ್ಟಿ (NDP) ಸಂಸದರಾದ ಹೆದರ್ ಮೆಕ್‌ಫರ್ಸನ್ (ವಿದೇಶಾಂಗ ವ್ಯವಹಾರಗಳ ವಿಮರ್ಶಕಿ) ಮತ್ತು ಜೆನ್ನಿ ಕ್ವಾನ್ (ಸಾರ್ವಜನಿಕ ಭದ್ರತೆ ಹಾಗೂ ವಲಸೆ ವ್ಯವಹಾರಗಳ ವಿಮರ್ಶಕಿ) ಅವರು ಕೆನಡಾ ಸರ್ಕಾರದ ವಿದೇಶಾಂಗ, ಸಾರ್ವಜನಿಕ ಭದ್ರತೆ ಮತ್ತು ವಲಸೆ ಸಚಿವರಿಗೆ ಜಂಟಿ ಬಹಿರಂಗ ಪತ್ರ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಇದನ್ನೂ ಓದಿ: ಅಂಗಗಳ ಸಹಿತ ಸಂಘದ ಜಾಡು ಹಿಡಿಯುವ ಕೆಲಸ ತಲೆ ಸುತ್ತು ತರುವುದು ಖಚಿತ; RSSಗೆ ಬೇಕಿರುವುದೂ ಇದೇ’

ಈ ಪತ್ರದಲ್ಲಿ ಆರ್‌ಎಸ್‌ಎಸ್ ಅನ್ನು ನಿಷೇಧಿತ ಸಂಘಟನೆಗಳ ಪಟ್ಟಿಗೆ ಸೇರಿಸಬೇಕು. ಆಗಸ್ಟ್ ಕೊನೆಯಲ್ಲಿ ಯೋಜಿಸಲಾಗಿರುವ ಮೋಹನ್ ಭಾಗವತ್ ಅವರ ಕೆನಡಾ ಭೇಟಿಗೆ ವೀಸಾ ನೀಡಬಾರದು ಮತ್ತು ದೇಶ ಪ್ರವೇಶಿಸದಂತೆ ತಡೆಯಬೇಕು ಎಂದು ಮನವಿ ಮಾಡಿದ್ದಾರೆ.

ಕೆನಡಾದ ಸಂಸದರು ಮತ್ತು ವಿವಿಧ ಸಂಘಟನೆಗಳು ಕೆನಡಾದ ವಲಸೆ ಮತ್ತು ನಿರಾಶ್ರಿತರ ರಕ್ಷಣಾ ಕಾಯ್ದೆಯಡಿ (Immigration and Refugee Protection Act) ಭಾಗವತ್ ಅವರಿಗೆ ಪ್ರವೇಶ ನಿರಾಕರಿಸಬೇಕು ಎಂದು ವಾದಿಸಿದ್ದಾರೆ. ಧರ್ಮಗಳ ನಡುವೆ ದ್ವೇಷ ಬಿತ್ತುವ ಆರ್‌ಎಸ್‌ಎಸ್ ನಾಯಕರ ಭೇಟಿಯಿಂದ ಕೆನಡಾದಲ್ಲಿರುವ ವಿವಿಧ ಧಾರ್ಮಿಕ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆಗೆ ಧಕ್ಕೆಯಾಗಬಹುದು ಮತ್ತು ದ್ವೇಷಪೂರಿತ ವಾತಾವರಣ ನಿರ್ಮಾಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದೆ.

ಕೆನಡಾದಲ್ಲಿ ಆರ್‌ಎಸ್‌ಎಸ್ ಮತ್ತು ತೀವ್ರಗಾಮಿ ಗುಂಪುಗಳು ಕೆನಡಿಯನ್ ನಾಗರಿಕರ ಮೇಲೆ ಪ್ರಭಾವ ಬೀರಲು ಮತ್ತು ಬೆದರಿಕೆಯೊಡ್ಡಲು ಯತ್ನಿಸುತ್ತಿವೆ ಎಂಬ ಆರೋಪಗಳನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಪ್ರಸ್ತುತ ಕೆನಡಾ ಸರ್ಕಾರವು ಈ ಕುರಿತು ಯಾವುದೇ ಅಧಿಕೃತ ನಿರ್ಧಾರ ಅಥವಾ ಹೇಳಿಕೆಯನ್ನು ಪ್ರಕಟಿಸಿಲ್ಲ. ಇನ್ನಷ್ಟೇ ನಿರ್ಧಾರವನ್ನು ಕೈಗೊಳ್ಳಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಸುಪ್ರೀಂ’ ನಲ್ಲಿ ವಂದೇ ಮಾತರಂ ವಿಚಾರಣೆ-  ಟಿ.ಎಂ.ಕೃಷ್ಣ ನಕ್ಸಲೈಟ್ ಎಂದು ಜರೆದ ಸಾಲಿಸಿಟರ್ ಜನರಲ್

ಮಂಗಳವಾರ ಸುಪ್ರೀಮ್ ಕೋರ್ಟಿನಲ್ಲಿ ವಿಚಾರಣೆಯ ಸಂದರ್ಭದಲ್ಲಿ ಸಾಲಿಸಿಟರ್ ಜನರಲ್  ತುಷಾರ್ ಮೆಹ್ತಾ...

‘ವಂದೇ ಮಾತರಂ’ ಹಾಡದಿದ್ದರೆ ಅಪರಾಧವಲ್ಲ, ಶಿಕ್ಷೆಯೂ ಇಲ್ಲ: ಸುಪ್ರೀಂ ಕೋರ್ಟ್

‘ವಂದೇ ಮಾತರಂ’ನ ಹಾಡುವುದು ಕಡ್ಡಾಯವಲ್ಲ. ಹಾಡದಿದ್ದ ಕಾರಣಕ್ಕೆ ಶಿಕ್ಷೆ ನೀಡಲಾಗುವುದಿಲ್ಲ ಎಂದು...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ: ಸೆ.22 ವಿಶ್ವ ಗುಲಾಬಿ ದಿನ

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ...

ಜಗತ್ತಿನಲ್ಲೇ ಮೊದಲು: ಹಂದಿ ಮೂತ್ರಪಿಂಡದಿಂದ 9 ತಿಂಗಳು ಜೀವಿಸಿದ ವ್ಯಕ್ತಿ

ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬೆಳವಣಿಗೆಯೊಂದು ನಡೆದಿದೆ. ತಳಿವಿಜ್ಞಾನದ (ಜೆನೆಟಿಕ್ಸ್‌) ಮೂಲಕ...