ಅಪಾಯಕಾರಿ ಸಂದರ್ಭದಲ್ಲಿ ಧೈರ್ಯ ಪ್ರದರ್ಶನ: ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ಇಸ್ರೇಲ್‌ನ ಅತ್ಯುನ್ನತ ನಾಗರಿಕ ಶೌರ್ಯ ಪ್ರಶಸ್ತಿ

Date:

ಟೆಲ್ ಅವೀವ್: 2026ರ ಸೆಪ್ಟೆಂಬರ್ 30ರಂದು ದುಬೈಯಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಪ್ರಯಾಣಿಸುತ್ತಿದ್ದ ಫ್ಲೈದುಬೈ ವಿಮಾನ FZ1073ರಲ್ಲಿ ಧೈರ್ಯ ಪ್ರದರ್ಶಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ ಇಸ್ರೇಲ್ ಸರ್ಕಾರವು ತನ್ನ ಅತ್ಯುನ್ನತ ನಾಗರಿಕ ಶೌರ್ಯ ಪ್ರಶಸ್ತಿಗಳಲ್ಲೊಂದನ್ನು ನೀಡಲು ನಿರ್ಧರಿಸಿದೆ. ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜಾಗ್ ಈ ಗೌರವವನ್ನು ಘೋಷಿಸಿದ್ದಾರೆ.

- Advertisement -

ಘಟನೆ ನಡೆದ ಸಂದರ್ಭದಲ್ಲಿ ವಿಮಾನದಲ್ಲಿ 174 ಪ್ರಯಾಣಿಕರಿದ್ದರು. ವರದಿಗಳ ಪ್ರಕಾರ, ಪ್ರಯಾಣದ ವೇಳೆ ಕಾಕ್‌ಪಿಟ್‌ನಲ್ಲಿ ಒಮಾನ್‌ನ ಸಹ-ಪೈಲಟ್ ಹಮ್ಮಾಮ್ ಅಲ್-ಹಮ್ಮಾಮಿ ಅವರು ತುರ್ತು ಪರಿಸ್ಥಿತಿಯಲ್ಲಿ ವಿಮಾನದ ಬಾಗಿಲು ಅಥವಾ ಇತರ ಭಾಗಗಳನ್ನು ತೆರೆಯಲು ಬಳಸುವ ಕೊಡಲಿಯಂತಹ ಸಾಧನದಿಂದ ಕ್ಯಾಪ್ಟನ್ ಸ್ಮಿತ್ ಅವರ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ಈ ಸಂದರ್ಭದಲ್ಲಿ ಕ್ಯಾಪ್ಟನ್ ಸ್ಮಿತ್ ಅವರ ಧೈರ್ಯ ಮತ್ತು ವೃತ್ತಿಪರತೆಯು ದೊಡ್ಡ ವಿಮಾನ ದುರಂತವನ್ನು ತಪ್ಪಿಸಲು ನೆರವಾಯಿತು ಎಂದು ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜಾಗ್ ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಕ್ಯಾಪ್ಟನ್ ಸ್ಮಿತ್ ಅವರು ಅಬುಧಾಬಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತಿದೆ ಎಂದು ವರದಿಯಾಗಿದೆ.

ಇದೇ ಸಂದರ್ಭದಲ್ಲಿ ಸಾಹಸ ತೋರಿದ  6 ಮಂದಿ ಇಸ್ರೇಲಿ ಪ್ರಯಾಣಿಕರಿಗೆ ಅಕ್ಟೋಬರ್ 8ರಂದು ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜಾಗ್ ಅವರು ಜೆರುಸಲೇಮ್‌ನಲ್ಲಿ ನಡೆದ ಸಮಾರಂಭದಲ್ಲಿ ನಾಗರಿಕ ಶೌರ್ಯ ಪದಕಗಳನ್ನು ಪ್ರದಾನ ಮಾಡಿದ್ದಾರೆ.

ಇತರರ ಜೀವಗಳನ್ನು ಉಳಿಸಲು ತಮ್ಮ ಜೀವವನ್ನೇ ಅಪಾಯಕ್ಕೆ ಒಡ್ಡಿ ಅಸಾಧಾರಣ ಧೈರ್ಯ ಮತ್ತು ಸಾಹಸ ಪ್ರದರ್ಶಿಸಿದ ನಾಗರಿಕರನ್ನು ಗೌರವಿಸಲು ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಕ್ಯಾಪ್ಟನ್ ಸ್ಮಿತ್ ಅವರು ಚೇತರಿಸಿಕೊಂಡ ಬಳಿಕ ಅವರಿಗೆ ಪ್ರಶಸ್ತಿ ಪ್ರದಾನ ಮಾಡುವ ಉದ್ದೇಶವಿದೆ ಎಂದು ವರದಿಯಾಗಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಕೂಡ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಅವರ ಅಸಾಧಾರಣ ಧೈರ್ಯವನ್ನು ಶ್ಲಾಘಿಸಿದ್ದರು. “ನೀವು ಭಾರತ ಮತ್ತು ಇಸ್ರೇಲ್‌ನ ಧೈರ್ಯಶಾಲಿ ಜನರ ನಿಜವಾದ ವೀರರು ಹಾಗೂ ಇಡೀ ಜಗತ್ತಿನ ವೀರರು” ಎಂದು ಅವರು ಬಣ್ಣಿಸಿದ್ದರು ಎಂದು ಟೈಮ್ಸ್‌ ಆಫ್‌ ಇಸ್ರೇಲ್‌ ವರದಿ ಮಾಡಿತ್ತು.

ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ ಸಾಹಸಕ್ಕೆ ಭಾರತದಲ್ಲಿಯೂ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಫೆಡರೇಶನ್ ಆಫ್ ಇಂಡಿಯನ್ ಪೈಲಟ್ಸ್ (FIP), ಗಂಭೀರವಾಗಿ ಗಾಯಗೊಂಡಿದ್ದರೂ ವಿಮಾನದ ಸುರಕ್ಷತೆಯನ್ನು ಕಾಪಾಡಿ ತುರ್ತು ಭೂಸ್ಪರ್ಶಕ್ಕೆ ನೆರವಾದ ಅವರ ಧೈರ್ಯವನ್ನು ಗುರುತಿಸಿ, ಸೂಕ್ತ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಅಥವಾ ನಾಗರಿಕ ಗೌರವ ನೀಡುವಂತೆ ಪ್ರಧಾನಿ ಕಚೇರಿಗೆ ಮನವಿ ಸಲ್ಲಿಸಿತ್ತು. ಮತ್ತೊಂದೆಡೆ, ರಾಜ್ಯಸಭಾ ಸಂಸದ ಮಿಲಿಂದ್ ದೇವ್ರಾ ಅವರು ಕ್ಯಾಪ್ಟನ್ ಸ್ಮಿತ್ ಅವರಿಗೆ ದೇಶದ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿಯಾದ ಅಶೋಕ ಚಕ್ರ ನೀಡುವಂತೆ ಪರಿಗಣಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಪ್ರಜಾಪ್ರಭುತ್ವದ ಕರಾಳ ದಿನ: ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಯ ಸಂಕಲ್ಪದೊಂದಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ ಗ್ರಾಮಸ್ಥರು

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ...