14 ದಿನಗಳಲ್ಲಿ ಎವರೆಸ್ಟ್ ಬೇಸ್ ಕ್ಯಾಂಪ್‌ಗೆ ಸೈಕಲ್‌ನಲ್ಲಿ ತಲುಪಿದ ಮೊದಲ ಭಾರತೀಯ ಮಹಿಳೆ ದಿವ್ಯಾ ಸಿಂಗ್

Date:

ಉತ್ತರ ಪ್ರದೇಶದ ಗೋರಖ್‌ಪುರದ 28 ವರ್ಷದ ಶಿಕ್ಷಕಿ ದಿವ್ಯಾ ಸಿಂಗ್, ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್ (ಇಬಿಸಿ) ಅನ್ನು ಸೈಕಲ್‌ನಲ್ಲಿ ತಲುಪಿದ ಮೊದಲ ಭಾರತೀಯ ಮಹಿಳೆ ಮತ್ತು ಜಾಗತಿಕವಾಗಿ ಎರಡನೇ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

- Advertisement -

ಕಠ್ಮಂಡುವಿನಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸಿ ದಿವ್ಯಾ ಅವರು 14 ದಿನಗಳ ಕಾಲ ಸೈಕಲ್‌ನಲ್ಲೇ ಪ್ರಯಾಣಿಸಿ 17,560 ಅಡಿ ಎತ್ತರದಲ್ಲಿರುವ ಬೇಸ್ ಕ್ಯಾಂಪ್ ಅನ್ನು ಯಶಸ್ವಿಯಾಗಿ ತಲುಪಿದ್ದಾರೆ. ಈ ಮೂಲಕ ಇತಿಹಾಸ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಇದನ್ನು ಓದಿದ್ದೀರಾ? ಸುತ್ತಾಟ | ಎವರೆಸ್ಟ್ ಬೇಸ್ ಕ್ಯಾಂಪ್ – ಜೀವನದ ಅತ್ಯುನ್ನತ ಪಾಠ

ಈ ಪ್ರಯಾಣದ ವೇಳೆಯಲ್ಲಿ -12 ° C ವರೆಗಿನ ಕಡಿಮೆ ತಾಪಮಾನ, ಆಮ್ಲಜನಕ ಕೊರತೆ ಮೊದಲಾದ, ವೇಗವಾದ ಗಾಳಿ ಮೊದಲಾದ ಸವಾಲುಗಳನ್ನು ಎದುರಿಸಿದ್ದಾರೆ. ದಿವ್ಯಾ ಸಿಂಗ್ ಪ್ರತಿದಿನ 10 ರಿಂದ 12 ಗಂಟೆಗಳ ಕಾಲ ಸೈಕಲ್ ತುಳಿದಿದ್ದಾರೆ.

ಇನ್ನು ಪರ್ವತ ದಾರಿಯಲ್ಲಿ ಹಲವೆಡೆ ಸೈಕಲ್ ತುಳಿಯಲೂ ಸಾಧ್ಯವಾಗದ ಕಾರಣ ತಮ್ಮ ಸೈಕಲ್ ಅನ್ನು ಹೆಗಲ ಮೇಲೆ ಹೊತ್ತು ಸಾಗಿದ್ದಾರೆ. ಕಠ್ಮಂಡುವಿನಿಂದ ಸಲೇರಿ, ಸುರ್ಕೆ, ಫಾಕ್ಡಿಂಗ್, ನಾಮ್ಚೆ ಬಜಾರ್, ಲೋಬುಚೆ ಮತ್ತು ಗೋರಕ್ಷೆಪ್ ಎಂಬ ಸವಾಲಿನ ಪ್ರದೇಶಗಳನ್ನು ಸಾಗಿ ದಿವ್ಯಾ ಬಂದಿದ್ದಾರೆ ಎಂದು ವರದಿಯಾಗಿದೆ.

ದಿವ್ಯಾ ಸಿಂಗ್ ಬೇಸ್‌ ಕ್ಯಾಂಪ್‌ಗೆ ಆಗಮಿಸುವ ವಿಡಿಯೋವನ್ನು ಉಮಾ ಸಿಂಗ್ ಎಂಬವರು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ದಿವ್ಯಾ ತನ್ನ ಸೈಕಲ್ ಪಕ್ಕದಲ್ಲಿ ನಿಂತು, ತ್ರಿವರ್ಣ ಧ್ವಜವನ್ನು ಹಿಡಿದಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ದಿವ್ಯಾ ಅವರ ಈ ವಿಡಿಯೋ ಹರಿದಾಡುತ್ತಿದೆ, ಪ್ರಶಂಸೆ ವ್ಯಕ್ತವಾಗುತ್ತಿದೆ.

ಎವರೆಸ್ಟ್ ಬೇಸ್ ಕ್ಯಾಂಪ್ ಎಂಬುದು ವಿಶ್ವದ ಅತಿ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್‌ನ ಬುಡದಲ್ಲಿರುವ ಎರಡು ಶಿಬಿರಗಳಾಗಿವೆ. ಇಲ್ಲಿ ಹೆಚ್ಚಾಗಿ ಪರ್ವತಾರೋಹಿಗಳು ವಿಶ್ರಾಂತಿ ಪಡೆಯುತ್ತಾರೆ. ಸಾಮಾನ್ಯವಾಗಿ ಎತ್ತರದ ವಾತಾವರಣಕ್ಕೆ ಹೊಂದಿಕೊಳ್ಳಲು ಇಲ್ಲಿ ತಂಗುತ್ತಾರೆ. ದಕ್ಷಿಣ ಬೇಸ್‌ ಕ್ಯಾಂಪ್ ನೇಪಾಳದಲ್ಲಿದ್ದು ಅತ್ಯಂತ ಜನಪ್ರಿಯ ಚಾರಣ ಮಾರ್ಗವಾಗಿದೆ. ಉತ್ತರ ಬೇಸ್ ಕ್ಯಾಂಪ್ ಟಿಬೆಟ್‌ನಲ್ಲಿದೆ. ಇಲ್ಲಿಗೆ ಚಾರಣ ಹೋಗಲು ಸಾಮಾನ್ಯವಾಗಿ 12 ರಿಂದ 15 ದಿನಗಳ ಕಾಲ ತೆಗೆದುಕೊಳ್ಳುತ್ತದೆ. ಇದು ಸವಾಲಿನ ಚಾರಣವಾಗಿದ್ದು, ಉತ್ತಮ ದೈಹಿಕ ಸಾಮರ್ಥ್ಯದ ಅವಶ್ಯಕತೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೈಬೀರಿಯಾ ಗುಹೆಯಲ್ಲಿ ಹಿಮಯುಗದ ರಹಸ್ಯ ಬಯಲು: 4 ಲಕ್ಷ ವರ್ಷಗಳ ಹಿಂದಿನ ಅಜ್ಞಾತ ಜೀವಿ ಪತ್ತೆ!

ದಕ್ಷಿಣ ಸೈಬೀರಿಯಾದ ಗುಹೆಗಳಲ್ಲಿ ದೊರೆತ ಸಾಮಾನ್ಯ ಮೂಳೆಯ ತುಣುಕುಗಳು ಇದೀಗ ವಿಕಾಸನದ...

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...