ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ

Date:

ಅಮೆರಿಕ ಅಧ್ಯಕ್ಷೀಯ ಚುನಾವಣೆ ಸಂದರ್ಭದಲ್ಲಿ ನೀಲಿಚಿತ್ರ ತಾರೆಗೆ ಹಣ ಸಂದಾಯ ಮಾಡಿದ ಕ್ರಿಮಿನಲ್ ಆರೋಪದ ಮೇಲೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬಂಧಿಸಲಾಗಿದೆ.

ಮ್ಯಾನ್‌ಹಟನ್ ನ್ಯಾಯಾಲಯದಲ್ಲಿ ವಿಚಾರಣೆ ಒಳಗಾಗುವ ಮುಂಚಿತವಾಗಿ ಪೊಲೀಸರಿಗೆ ಟ್ರಂಪ್ ಶರಣಾಗಿದ್ದಾರೆ.

ಡೊನಾಲ್ಡ್ ಟ್ರಂಪ್ ಕ್ರಿಮಿನಲ್ ಆರೋಪದ ಮೇಲೆ ಬಂಧಿಸಲ್ಪಟ್ಟ ಅಮೆರಿಕದ ಮೊದಲ ಮಾಜಿ ಅಧ್ಯಕ್ಷ ಎಂಬ ಕುಖ್ಯಾತಿ ಪಡೆದಿದ್ದಾರೆ.

“ನ್ಯಾಯಾಲಯಕ್ಕೆ ಹೋಗುತ್ತಿದ್ದೇನೆ. ತುಂಬಾ ಅತಿವಾಸ್ತವಿಕವಾಗಿ ತೋರುತ್ತಿದೆ. ಅವರು ನನ್ನನ್ನು ಬಂಧಿಸಲು ಹೋಗುತ್ತಿದ್ದಾರೆ. ಇದು ಅಮೆರಿಕದಲ್ಲಿ ನಡೆಯುತ್ತಿದೆ ಎಂದು ನನಗೆ ನಂಬಲು ಸಾಧ್ಯವಾಗುತ್ತಿಲ್ಲ” ಎಂದು ಟ್ರಂಪ್ ವಿಚಾರಣೆಗೊಳಗಾಗುವ ಮುಂಚಿತವಾಗಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ನೀಲಿ ಚಿತ್ರತಾರೆ ಸ್ಟಾರ್ಮಿ ಡೇನಿಯಲ್ಸ್‌ ಬಾಯಿ ಮುಚ್ಚಿಸಲು 1 ಲಕ್ಷ 30 ಸಾವಿರ ಡಾಲರ್ ಹಣವನ್ನು ಅಕ್ರಮವಾಗಿ ನೀಡಿದ್ದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಟ್ರಂಪ್ ವಿರುದ್ಧ ವಿಚಾರಣೆ ನಡೆಯುತ್ತಿದೆ. 2016ರಲ್ಲಿ ಹಣ ಪಾವತಿಸಿದ ಈ ಪ್ರಕರಣದಲ್ಲಿ ಮ್ಯಾನ್‌ಹ್ಯಾಟನ್ ಗ್ರ್ಯಾಂಡ್ ಜ್ಯೂರಿ ಅವರು ಕಳೆದ ವಾರ ದೋಷಾರೋಪಣೆ ಮಾಡಿದ್ದರು.

ಟ್ರಂಪ್ ಬಂಧನದ ಬಳಿಕ ಅಮೆರಿಕದಲ್ಲಿ ಹಿಂಸಾಚಾರ ಭುಗಿಲೇಳುವ ಸಾಧ್ಯತೆ ದಟ್ಟವಾಗಿದ್ದು, ಈಗಾಗಲೇ ಪರಿಸ್ಥಿತಿ ನಿಭಾಯಿಸಲು ನ್ಯೂಯಾರ್ಕ್ ನಗರ ಸೇರಿದಂತೆ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಹೆಚ್ಚಾಗಿರುವ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೆಣ್ಣು ಭ್ರೂಣ ಹತ್ಯೆ ಪ್ರಕರಣ | ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಚಲುವರಾಯಸ್ವಾಮಿ

ಒಂದು ಜಿಲ್ಲೆಗೆ ಸೀಮಿತವಾಗಿಲ್ಲ, ಎರಡು ಮೂರು ಜಿಲ್ಲೆಗೆ ಸೇರಿದೆ ಸಿ.ಐ.ಡಿಗೆ...

ಶಾಸಕರ ಮತ್ತು ಸಚಿವರ ಸಮಸ್ಯೆಗಳಿಗೆ ಕೊನೆ ಇಲ್ಲ: ಸತೀಶ ಜಾರಕಿಹೊಳಿ

ಸಮಸ್ಯೆಗಳು ಒಮ್ಮೆಗೆ ಬಗೆಹರಿಯಲೂ ಸಾಧ್ಯವಿಲ್ಲ ಬಿ ಆರ್ ಪಾಟೀಲ್‌ಗೆ ಏನೋ...

ಟೆಕ್‌ ಸಮ್ಮಿಟ್‌ | ಕೌಶಲ್ಯಾಧಾರಿತ ಪಠ್ಯಕ್ರಮ ಇಂದಿನ ಅಗತ್ಯ: ಸಚಿವ ಎಂ.ಸಿ. ಸುಧಾಕರ್

ಬೋಧನಾಧಾರಿತ ಕಲಿಕೆಗಿಂತ ಕೌಶಲ್ಯಾಧಾರಿತ ಪಠ್ಯಕ್ರಮ ಇಂದಿನ ಅಗತ್ಯ. ಹಾಗಾಗಿ, ಅದಕ್ಕೆ ಪೂರಕವಾದ...