‘ಸ್ಯಾಂಡ್‌ವಿಚ್‌ ಆಗಲು ಬಯಸುವುದಿಲ್ಲ’; ಭಾರತ-ಚೀನಾ ವಿಚಾರದಲ್ಲಿ ಲಂಕಾ ನಿಲುವು

Date:

Advertisements

ಭಾರತ ಮತ್ತು ಚೀನಾ ನಡುವೆ ‘ಸ್ಯಾಂಡ್‌ವಿಚ್‌’ ಆಗಲು ನಾನು ಬಯಸುವುದಿಲ್ಲ. ಆದರೆ, 2019ರಿಂದ ಶ್ರೀಲಂಕಾದಲ್ಲಿ ಎದುರಾಗಿರುವ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಪ್ರತಿಯೊಬ್ಬರೊಂದಿಗೆ ‘ಮೌಲ್ಯಯುತ ಪಾಲುದಾರಿಕೆ’ಯೊಂದಿಗೆ ಮುನ್ನಡೆಯುತ್ತೇವೆ ಎಂದು ಶ್ರೀಲಂಕಾದ ನೂತಕ ಅಧ್ಯಕ್ಷ ಅನುರ ಕುಮಾರ ಡಿಸ್ಸಾನಾಯಕೆ ಹೇಳಿದ್ದಾರೆ.

ಮಾರ್ಕ್ಸ್‌ವಾದಿ ಚಿಂತನೆಯನ್ನು ಅಳವಡಿಸಿಕೊಂಡಿರುವ ಡಿಸ್ಸಾನಾಯಕೆ, ದಕ್ಷಿಣ ಏಷ್ಯಾ ಅಥವಾ ಹಿಂದು ಮಹಾಸಾಗರ ಪ್ರದೇಶದಲ್ಲಿನ ಭೌಗೋಳಿಕ ರಾಜಕೀಯ ರಂಪಾಟಗಳಿಂದ ದೂರವಿರಲು ನಿರ್ಧರಿಸಿದ್ದಾರೆ. ಅದು ಅವರ ಮಾತುಗಳಲ್ಲಿ ವ್ಯಕ್ತವಾಗುತ್ತಿದೆ. ಯಾವುದೇ ರಾಷ್ಟ್ರಗಳ ನಡುವಿನ ತಿಕ್ಕಾಟದಲ್ಲಿ ತಾವು ಸಿಕ್ಕಿಕೊಳ್ಳಲು ಬಯಸುವುದಿಲ್ಲ ಎಂದಿದ್ದಾರೆ. ಪ್ರತಿಯೊಬ್ಬರೂ ಶ್ರೀಲಂಕಾಗೆ ಅಗತ್ಯವಿರುವ ಹಣಕಾಸಿನ ನೆರವು ನೀಡಬಹುದು ಎಂದು ಹೇಳಿದ್ದಾರೆ. ಜೊತೆಗೆ, ಪಶ್ಚಿಮ, ಮಧ್ಯಪ್ರಾಚ್ಯ ಮತ್ತು ಆಫ್ರಿಕಾದೊಂದಿಗೆ ನಿಕಟ ಸಂಬಂಧಗಳನ್ನು ಬೆಳೆಸುವುದಾಗಿಯೂ ಹೇಳಿಕೊಂಡಿದ್ದಾರೆ.

“ಅಂತಾರಾಷ್ಟ್ರೀಯ ವ್ಯವಸ್ಥೆಯೊಳಗೆ ಹಲವಾರು ಗುಂಪುಗಳಿವೆ. ಆದರೆ, ನಾವು ಈ ಭೌಗೋಳಿಕ ರಾಜಕೀಯ ಹೋರಾಟದ ಭಾಗವಾಗುವುದಿಲ್ಲ. ನಾವು ಯಾವುದೇ ಗುಂಪಿನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ವಿಶೇಷವಾಗಿ ಚೀನಾ ಮತ್ತು ಭಾರತದ ನಡುವೆ ‘ಸ್ಯಾಂಡ್‌ವಿಚ್‌’ ಆಗಲು ಬಯಸುವುದಿಲ್ಲ. ನಮಗೆ ಎರಡೂ ರಾಷ್ಟ್ರಗಳೂ ಮೌಲ್ಯಯುತ ಸ್ನೇಹಿತ ರಾಷ್ಟ್ರಗಳಾಗಿವೆ. ಉಭಯ ರಾಷ್ಟ್ರಗಳೊಂದಿಗೆ ನಿಕಟ ಪಾಲುದಾರಕೆ ಪಡೆಯಲು ನಾವು ನಿರೀಕ್ಷಿಸುತ್ತೇವೆ” ಎಂದಿದ್ದಾರೆ.

Advertisements

“ನಾವು ನಮ್ಮ ಸಾರ್ವಭೌಮತ್ವವನ್ನು ಕಾಪಾಡಿಕೊಳ್ಳಲು ಬದ್ಧರಾಗಿದ್ದೇವೆ. ಈ ಭೌಗೋಳಿಕ ರಾಜಕೀಯ ಓಟದಲ್ಲಿ ಯಾವುದೇ ಶಕ್ತಿಗೆ ಅಧೀನರಾಗುವುದಿಲ್ಲ…” ಎಂದು ಅವರು ಈ ಹಿಂದೆಯೂ ಹೇಳಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ...

Download Eedina App Android / iOS

X