ಎರ್ಬಿಲ್‌ನಲ್ಲಿ ಅಮೆರಿಕ ಸೈನಿಕರಿದ್ದ ಹೋಟೆಲ್‌ ಮೇಲೆ ಡ್ರೋನ್ ದಾಳಿ: ನಮ್ಮದೇ ಕೃತ್ಯ ಎಂದ ಇರಾಕ್

Date:

ಇರಾಕ್‌ನ ಎರ್ಬಿಲ್‌ನಲ್ಲಿ ಅಮೆರಿಕ ಸೈನಿಕರು ತಂಗಿದ್ದ ಹೋಟೆಲ್‌ ಮೇಲೆ ಡ್ರೋನ್ ದಾಳಿ ನಡೆದಿದೆ. ದಾಳಿಯನ್ನು ತಾವೇ ನಡೆಸಿರುವುದಾಗಿ ‘ಇಸ್ಲಾಮಿಕ್ ರೆಸಿಸ್ಟೆನ್ಸ್ ಇನ್ ಇರಾಕ್’ ಎಂಬ ಶಸ್ತ್ರಸಜ್ಜಿತ ಗುಂಪು ಹೇಳಿಕೊಂಡಿದೆ.

- Advertisement -

ದಾಳಿ ಕುರಿತು ಶಸ್ತ್ರಸಜ್ಜಿತ ಗುಂಪು ಹೇಳಿಕೆ ಬಿಡುಗಡೆ ಮಾಡಿದೆ. ”ಆಕ್ರಮಣ ನೆಲೆಗಳ ವಿರುದ್ಧ ಡ್ರೋನ್‌ಗಳನ್ನು ಹಾರಿಸಲಾಗಿದೆ. ಅಮೆರಿಕ ಪಡೆಗಳು ತಂಗಿದ್ದ ಸ್ಥಳವೇ ನಮ್ಮ ಗುರಿಯಾಗಿತ್ತು” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಘಟನೆಯ ದೃಶ್ಯಗಳನ್ನು ಇರಾಕ್‌ನ ನಯಾ ಸುದ್ದಿ ಸಂಸ್ಥೆ ಪ್ರಕಟಿಸಿದೆ. ಅದರಲ್ಲಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಗೋಚರಿಸಿದೆ. ದಾಳಿಯಿಂದ ಹೋಟೆಲ್‌ಗೆ ಹಾನಿಯಾಗಿರುವ ಸಾಧ್ಯತೆ ಇದೆ. ಹಾನಿಯ ಪ್ರಮಾಣ ಮತ್ತು ಗಾಯಾಳುಗಳ ಬಗ್ಗೆ ಮಾಹಿತಿ ದೊರೆತಿಲ್ಲ.

ದಾಳಿಯ ಹಿನ್ನೆಲೆ ಭದ್ರತಾ ಪರಿಸ್ಥಿತಿ ತೀವ್ರಗೊಂಡಿದೆ. ಎರ್ಬಿಲ್‌ನಲ್ಲಿ ಹೆಚ್ಚುವರಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇನ್ನು, ಇದೇ ಸಮಯದಲ್ಲಿ, ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಮೇಲಿನ ದಾಳಿ ನಡೆದಿದೆ. ಈ ದಾಳಿಯನ್ನು ಇರಾನ್‌ ನಡೆಸಿದೆ ಎಂದು ವರದಿಯಾಗಿದೆ. ದಾಳಿ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕ ಅಧ್ಯಕ್ಷ ಟ್ರಂಪ್, ಶೀಘ್ರವೇ ಅಮೆರಿಕದ ಪ್ರತಿಕ್ರಿಯೆ ಬರಲಿದೆ ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಮೆನ್ ರಾಷ್ಟ್ರಪತಿ ಭವನದ ಮೇಲೆ ಹೂತಿಗಳ ಕ್ಷಿಪಣಿ ದಾಳಿ: ಐವರ ಸಾವು

ಯಮೆನ್‌ನ ದಕ್ಷಿಣ ಭಾಗದ ಪ್ರಮುಖ ನಗರವಾದ ಅದನ್‌ನಲ್ಲಿರುವ ಅಲ್-ಮಾಶಿಕ್ ರಾಷ್ಟ್ರಪತಿ ಭವನದ...

ಭಾರತದ ಮೇಲೆ ಶೇ.100 ಸುಂಕ: 10 ದಿನಗಳಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅಂತಿಮ ತೀರ್ಮಾನ!

ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಶೇ. 100ರಷ್ಟು ಭಾರಿ ಆಮದು...

ರಾತ್ರಿ ವೇಳೆಯಲ್ಲೂ ರವಿ; ಸೂರ್ಯನ ಬೆಳಕು ಮಾರಾಟ ಮಾಡಲು ಅಮೆರಿಕ-ಭಾರತ ಸಹಭಾಗಿತ್ವ: ಏನಿದು ಯೋಜನೆ?

ವಿಜ್ಞಾನ ಕಲ್ಪನೆಗಳಿಗಿಂತಲೂ ಮಿಗಿಲಾದ ಅಪರೂಪದ ಯೋಜನೆಯೊಂದು ಈಗ ಜಾಗತಿಕ ಇಂಧನ ಕ್ಷೇತ್ರದಲ್ಲಿ...

ಸೌದಿ ಅರಾಮ್ಕೊ ಪ್ರಧಾನ ಕಚೇರಿ ಮೇಲೆ ದಾಳಿ: ಮತ್ತೆ ಪುಟಿದೆದ್ದರೇ ಹೂತಿ ಬಂಡುಕೋರರು?

ಯೆಮನ್‌ನ ಹೂತಿ ಬಂಡುಕೋರರು ಸೌದಿ ಅರೇಬಿಯಾದ ಧಹ್ರಾನ್‌ನಲ್ಲಿರುವ ತೈಲ ದೈತ್ಯ ಕಂಪನಿ...