ವೆನೆಜುವೆಲಾ | ಅಧ್ಯಕ್ಷೀಯ ಭವನದ ಮೇಲೆ ಡ್ರೋನ್ ಹಾರಾಟ, ಗುಂಡಿನ ಚಕಮಕಿ; ಕಾರಕಾಸ್‌ನಲ್ಲಿ ಆತಂಕ

Date:

ಅಮೆರಿಕದ ಸೇನಾ ಪಡೆಗಳಿಂದ ಪದಚ್ಯುತ ಅಧ್ಯಕ್ಷ ನಿಕೋಲಸ್ ಮಡುರೊ ಅವರ ಬಂಧನದ ಬೆನ್ನಲ್ಲೇ, ತೈಲ ಸಂಪದ್ಭರಿತ ರಾಷ್ಟ್ರ ವೆನೆಜುವೆಲಾದಲ್ಲಿ ಉದ್ವಿಗ್ನತೆ ಹೆಚ್ಚಿದೆ. ರಾಜಧಾನಿ ಕಾರಕಾಸ್‌ನಲ್ಲಿರುವ ಮಿರಾಫ್ಲೋರ್ಸ್‌ ಅಧ್ಯಕ್ಷೀಯ ಭವನದ ಬಳಿ ಡ್ರೋನ್‌ಗಳು ಹಾರಾಟ ನಡೆಸಿವೆ ಹಾಗೂ ತೀವ್ರ ಸ್ವರೂಪದ ಗುಂಡಿನ ಚಕಮಕಿ ನಡೆದಿದೆ ಎಂದು ವರದಿಯಾಗಿದೆ.

- Advertisement -

​ಸೋಮವಾರ ಸಂಜೆ ಅಧ್ಯಕ್ಷೀಯ ಭವನದ ಮೇಲೆ ಗುರುತು ಸಿಗದ ಡ್ರೋನ್‌ಗಳು ಹಾರಾಟ ನಡೆಸಿದವು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿವೆ ಎಂದು ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದರೂ, ಅಮೆರಿಕದ ಕಾರ್ಯಾಚರಣೆಯ ನಂತರ ದೇಶದಲ್ಲಿ ರಾಜಕೀಯ ಅಸ್ಥಿರತೆ ಮತ್ತು ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಅಮೆರಿಕದ ಶ್ವೇತಭವನದ ಅಧಿಕಾರಿಗಳು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು, “ನಾವು ಈ ಘಟನೆಯಲ್ಲಿ ಭಾಗಿಯಾಗಿಲ್ಲ. ಆದರೆ ಗುಂಡಿನ ಚಕಮಕಿಯ ವರದಿಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ,” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವೆನೆಜುವೆಲಾ ಮೇಲೆ ‘ಅಮೆರಿಕ’ ಹಿಡಿತ: ಮೂರನೇ ವಿಶ್ವಯುದ್ಧದ ಕಾರ್ಮೋಡ

​ಮಿರಾಫ್ಲೋರ್ಸ್‌ ಅರಮನೆಯ ಬಳಿ ಭದ್ರತಾ ಗುಂಪುಗಳ ನಡುವಿನ ‘ತಪ್ಪು ತಿಳುವಳಿಕೆ’ಯಿಂದಾಗಿ ಈ ಗುಂಡಿನ ಚಕಮಕಿ ನಡೆದಿರಬಹುದು ಎಂದು ವರದಿಯಾಗಿದೆ. ಆದರೆ, ಈ ಬಗ್ಗೆ ಅಧಿಕೃತ ದೃಢೀಕರಣ ದೊರೆತಿಲ್ಲ.

​ನ್ಯೂಯಾರ್ಕ್‌ ಕೋರ್ಟ್‌ನಲ್ಲಿ ಮಡುರೊ ಹಾಜರು

ಶನಿವಾರ ರಾತ್ರಿ ಅಮೆರಿಕದ ಪಡೆಗಳು ನಡೆಸಿದ ನಾಟಕೀಯ ಮತ್ತು ಅನಿರೀಕ್ಷಿತ ಕಾರ್ಯಾಚರಣೆಯಲ್ಲಿ ವೆನೆಜುವೆಲಾದ ಪದಚ್ಯುತ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್‌ ಅವರನ್ನು ಬಂಧಿಸಿ ಅಮೆರಿಕಕ್ಕೆ ಕರೆತರಲಾಗಿದೆ. ಈ ಕಾರ್ಯಾಚರಣೆಯನ್ನು ಮಡುರೊ ಸರ್ಕಾರ ‘ಸಾಮ್ರಾಜ್ಯಶಾಹಿ ಕೃತ್ಯ’ ಎಂದು ಟೀಕಿಸಿದೆ. 2003ರ ಇರಾಕ್ ಆಕ್ರಮಣದ ಬಳಿಕ ಆಡಳಿತ ಬದಲಾವಣೆಗಾಗಿ ಅಮೆರಿಕ ನಡೆಸಿದ ಅತ್ಯಂತ ದೊಡ್ಡ ಹಸ್ತಕ್ಷೇಪ ಇದಾಗಿದೆ.

​ಮಾದಕವಸ್ತು ಕಳ್ಳಸಾಗಣೆ ಮತ್ತು ನಾರ್ಕೋ-ಬಯೋತ್ಪಾದನೆ ಸಂಚಿನ ಆರೋಪದ ಮೇಲೆ ಬಂಧಿತರಾಗಿರುವ ಮಡುರೊ ದಂಪತಿಯನ್ನು ಸೋಮವಾರ ನ್ಯೂಯಾರ್ಕ್‌ನ ಫೆಡರಲ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ವೇಳೆ ಮಡುರೊ ದಂಪತಿ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದು, ‘ತಪ್ಪಿತಸ್ಥರಲ್ಲ’ ಎಂದು ಹೇಳಿಕೆ ನೀಡಿದ್ದಾರೆ.

“ನಾನು ಮುಗ್ಧ. ನಾನು ಯಾವುದೇ ತಪ್ಪು ಮಾಡಿಲ್ಲ. ನಾನೊಬ್ಬ ಸಭ್ಯ ಮನುಷ್ಯ. ಇಂದಿಗೂ ನಾನೇ ನನ್ನ ದೇಶದ ಅಧ್ಯಕ್ಷ,” ಎಂದು ಹೇಳಿದ್ದಾರೆ. ಮುಂದಿನ ವಿಚಾರಣೆಯನ್ನು ಮಾರ್ಚ್ 17ಕ್ಕೆ ನಿಗದಿಪಡಿಸಲಾಗಿದೆ. ನ್ಯಾಯಾಲಯದ ಹೊರಗೆ ಮಡುರೊ ಪರ ಮತ್ತು ವಿರೋಧಿ ಗುಂಪುಗಳು ಪ್ರತಿಭಟನೆ ನಡೆಸಿವೆ.

​ವೆನೆಜುವೆಲಾಕ್ಕೆ ಮಧ್ಯಂತರ ಅಧ್ಯಕ್ಷರ ನೇಮಕ

ಇತ್ತ ಕಾರಕಾಸ್‌ನಲ್ಲಿ, ಮಡುರೊ ಬಂಧನದ ನಂತರದ ಬೆಳವಣಿಗೆಯಲ್ಲಿ ಉಪಾಧ್ಯಕ್ಷೆ ಡೆಲ್ಸಿ ರಾಡ್ರಿಗಸ್ ಅವರು ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರು ಮಡುರೊ ಅವರಿಗೆ ಬೆಂಬಲ ಸೂಚಿಸಿದ್ದಾರೆಯಾದರೂ, ಅಮೆರಿಕದ ನಡೆ ವಿರುದ್ಧ ಹೋರಾಡುವ ಯಾವುದೇ ಸ್ಪಷ್ಟ ಸೂಚನೆ ನೀಡಿಲ್ಲ.

​ಇದೇ ವೇಳೆ, ಡೆಲ್ಸಿ ಅವರ ಸಹೋದರ ಹಾಗೂ ರಾಷ್ಟ್ರೀಯ ಅಸೆಂಬ್ಲಿಯ ಅಧ್ಯಕ್ಷರಾಗಿ ಮರುನೇಮಕಗೊಂಡಿರುವ ಜಾರ್ಜ್ ರಾಡ್ರಿಗಸ್, “ಮಡುರೊ ಅವರನ್ನು ಮರಳಿ ಕರೆತರಲು ಎಲ್ಲ ರೀತಿಯ ಪ್ರಕ್ರಿಯೆಗಳು ಮತ್ತು ವೇದಿಕೆಗಳನ್ನು ಬಳಸಿಕೊಳ್ಳಲಾಗುವುದು,” ಎಂದು ಪ್ರತಿಜ್ಞೆ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಖಿಲೇಶ್ ಅಯೋಧ್ಯೆಯಿಂದ ಸ್ಪರ್ಧಿಸಿದರೆ, ಅಲ್ಲಿಂದಲೇ ನಾಮಪತ್ರ ಸಲ್ಲಿಸುವೆ: ಯೋಗಿ ಆದಿತ್ಯನಾಥ್

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅಯೋಧ್ಯೆ ಕ್ಷೇತ್ರದಿಂದ ಸ್ಪರ್ಧಿಸುವಂತೆ...

ವಿಶ್ವದ ‘ದಿ ಮುಸ್ಲಿಮ್-500’ ಪಟ್ಟಿಯಲ್ಲಿ ಮೊದಲಿಗರು ಯಾರು? ಭಾರತೀಯರು ಇದ್ದಾರಾ?

ವಿಶ್ವದ 500 ಅತ್ಯಂತ ಪ್ರಭಾವಿ ಮುಸ್ಲಿಮರ ಈ ಪಟ್ಟಿಯನ್ನು ‘ದಿ ಮುಸ್ಲಿಮ್...

ರೋಹಿಂಗ್ಯಾ ನರಮೇಧಕ್ಕೆ ಮ್ಯಾನ್ಮಾರ್ ಹೊಣೆ ಎಂದ ಐಸಿಜೆ ತೀರ್ಪಿನ ಅರ್ಥವೇನು?

ರೋಹಿಂಗ್ಯಾ ಅಲ್ಪಸಂಖ್ಯಾತ ಸಮುದಾಯದ ನರಮೇಧಕ್ಕೆ ಮ್ಯಾನ್ಮಾರ್ ಹೊಣೆ ಎಂದು ಅಂತಾರಾಷ್ಟ್ರೀಯ ನ್ಯಾಯಾಲಯ...