ವೆನೆಜುವೆಲಾದಲ್ಲಿ ಮತ್ತೆ ಕಂಪಿಸಿದ ಭೂಮಿ: ಸರಣಿ ಭೂಕಂಪಕ್ಕೆ 920 ಬಲಿ, 50 ಸಾವಿರ ಮಂದಿ ನಾಪತ್ತೆ!

Date:

ದಕ್ಷಿಣ ಅಮೆರಿಕದ ವೆನೆಜುವೆಲಾ ದೇಶ ಇತಿಹಾಸದಲ್ಲೇ ಅತ್ಯಂತ ಭೀಕರ ನೈಸರ್ಗಿಕ ವಿಕೋಪಕ್ಕೆ ತುತ್ತಾಗಿದೆ. ಕಳೆದ ಬುಧವಾರ ಸಂಭವಿಸಿದ ಅವಳಿ ಭೂಕಂಪಗಳ ಬಳಿಕ, ಶುಕ್ರವಾರ ಮತ್ತೊಂದು ಪ್ರಬಲ ಕಂಪನ ಉಂಟಾಗಿದ್ದು, ಸಾವಿನ ಸಂಖ್ಯೆ 920 ಕ್ಕೆ ಏರಿದೆ. ಸುಮಾರು 50 ಸಾವಿರ ಮಂದಿ ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.

- Advertisement -

ಬುಧವಾರ ಸಂಜೆ 7.2 ಮತ್ತು 7.5 ತೀವ್ರತೆಯ ಎರಡು ಭೀಕರ ಭೂಕಂಪಗಳು ದೇಶವನ್ನೇ ಅಲುಗಾಡಿಸಿದ್ದವು. ನಿನ್ನೆ (ಜೂ.26) ಶುಕ್ರವಾರ ಮಧ್ಯಾಹ್ನ 4.9 ತೀವ್ರತೆಯ ಮತ್ತೊಂದು ಭೂಕಂಪ ಸಂಭವಿಸಿದ್ದು, ರಕ್ಷಾಣಾ ಕಾರ್ಯಕ್ಕೆ ಭಾರೀ ಅಡಚಣೆ ಉಂಟಾಗಿದೆ. ಉತ್ತರ ಕರಾವಳಿ ಭಾಗಗಳಾದ ಕಾರಕಾಸ್ ಮತ್ತು ಲಾ ಗುಯಿರಾ ಸಂಪೂರ್ಣ ಅವಶೇಷಗಳ ರಾಶಿಯಾಗಿ ಬದಲಾಗಿವೆ. ನೂರಾರು ಕಟ್ಟಡಗಳು, ಸೇತುವೆಗಳು ಮತ್ತು ಆಸ್ಪತ್ರೆಗಳು ನೆಲಸಮವಾಗಿದ್ದು, ಕಳೆದ ನೂರು ವರ್ಷಗಳಲ್ಲಿ ವೆನೆಜುವೆಲಾ ಇಂತಹ ದುರಂತವನ್ನು ಕಂಡಿರಲಿಲ್ಲ ಎಂದು ಭೂವಿಜ್ಞಾನಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...
image 20 3

ರಾಷ್ಟ್ರೀಯ ಅಸೆಂಬ್ಲಿ ಅಧ್ಯಕ್ಷ ಜಾರ್ಜ್ ರೋಡ್ರಿಗಸ್ ನೀಡಿರುವ ಇತ್ತೀಚಿನ ಮಾಹಿತಿಯಂತೆ, ಸಾವಿನ ಸಂಖ್ಯೆ 920ಕ್ಕೆ ಏರಿಕೆಯಾಗಿದೆ. ಇನ್ನು 50,000ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದು, ಅವಶೇಷಗಳಡಿ ಸಿಲುಕಿರುವವರ ಸಂಖ್ಯೆ ಇನ್ನೂ ಹೆಚ್ಚಿರಬಹುದು ಎಂದು ಅಂದಾಜಿಸಲಾಗಿದೆ. ಅಂತಾರಾಷ್ಟ್ರೀಯ ವಲಸೆ ಸಂಸ್ಥೆಯ ಪ್ರಕಾರ, ಒಟ್ಟು 67.6 ಲಕ್ಷ ಜನರು ಈ ಭೂಕಂಪದಿಂದ ಸಂತ್ರಸ್ತರಾಗಿದ್ದಾರೆ.

ಇದನ್ನೂ ಓದಿ: ʼಡಬ್ಲೆಟ್‌ʼಗಳಿಂದ ನಡುಗಿದ ವೆನೆಜುವೆಲಾ; ಏನಿದು ಅವಳಿ ಭೂಕಂಪ? ಯಾಕಿಷ್ಟು ಅಪಾಯಕಾರಿ?

ಮಾನವೀಯತೆಯ ದೃಷ್ಟಿಯಿಂದ ಹಲವು ದೇಶಗಳು ವೆನೆಜುವೆಲಾ ನೆರವಿಗೆ ಮುಂದೆ ಬಂದಿವೆ. ಅಮೆರಿಕವು ತನ್ನ ವಿಶೇಷ ರಕ್ಷಣಾ ತಂಡಗಳು, ವೈದ್ಯರು ಮತ್ತು ಶೋಧನಾ ಶ್ವಾನಗಳನ್ನು ವೆನೆಜುವೆಲಾಗೆ ರವಾನಿಸಿದೆ. ‘ಆಪರೇಷನ್ ಅಮಿಸ್ತಾದ್’ ಅಡಿಯಲ್ಲಿ ಭಾರತೀಯ ವಾಯುಪಡೆಯ ಎರಡು ಸಿ-17 ಗ್ಲೋಬ್‌ಮಾಸ್ಟರ್ ವಿಮಾನಗಳನ್ನು ಕಳುಹಿಸಲಾಗಿದೆ. ಇದರಲ್ಲಿ ಭಾರತೀಯ ಸೇನೆಯ ಫೀಲ್ಡ್ ಆಸ್ಪತ್ರೆ, 35 ಟನ್‌ಗೂ ಅಧಿಕ ವೈದ್ಯಕೀಯ ಸಾಮಗ್ರಿಗಳು ಮತ್ತು ತುರ್ತು ಚಿಕಿತ್ಸೆಗಾಗಿ ಎರಡು ‘ಭೀಷ್ಮ ಕ್ಯೂಬ್‌’ಗಳನ್ನು (BHISHM Cubes) ಕಳುಹಿಸಿ ಕೊಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...