ಫಿಲಿಪೈನ್ಸ್‌ನಲ್ಲಿ ಭೀಕರ ಭೂಕಂಪ: 15 ಮಂದಿ ಸಾವು; ಸುನಾಮಿಯೂ ಅಪ್ಪಳಿಸುವ ಆತಂಕ

Date:

ದಕ್ಷಿಣ ಫಿಲಿಪೈನ್ಸ್‌ನ ಮಿಂಡನಾವೊ ಕರಾವಳಿ ಪ್ರದೇಶದಲ್ಲಿ 7.8 ತೀವ್ರತೆಯ ಭೀಕರ ಭೂಕಂಪ ಸಂಭವಿಸಿದೆ. ಭೂಕಂಪದಿಂದಾಗಿ ಸಂಭವಿಸಿದ ಅವಘಡಗಳಲ್ಲಿ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಭೂಕಂಪದ ಪರಿಣಾಮವಾಗಿ, ಫಿಲಿಪೈನ್ಸ್‌ ಮತ್ತು ನೆರೆಯ ಇಂಡೋನೇಷ್ಯಾಗೆ ಸಮುದ್ರದಿಂದ ಸುನಾಮಿಯೂ ಅಪ್ಪಳಿಸಬಹುದು ಎಂದು ಭೂಭೌತಶಾಸ್ತ್ರ ಸಂಸ್ಥೆಗಳು ಎಚ್ಚರಿಕೆ ನೀಡಿವೆ.

- Advertisement -

ಭೂಕಂಪದ ತೀವ್ರತೆಯು ಫಿಲಿಪೈನ್ಸ್‌ನ ದಕ್ಷಿಣ ನಗರವಾದ ಜನರಲ್ ಸ್ಯಾಂಟೋಸ್‌ವನ್ನು ಬಾಧಿಸಿದೆ. ಈ ನಗರವೊಂದರಲ್ಲೇ, ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಭೂಕಂಪನದ ವೇಳೆ ಸ್ಥಳೀಯ ಪೊಲೀಸ್ ಠಾಣೆಯ ಕಟ್ಟಡದಲ್ಲಿ ಸಣ್ಣ ಬಿರುಕುಗಳು ಮೂಡಿವೆ ಎಂದು ಸರಂಗಾನಿ ಪ್ರಾಂತ್ಯದ ಅಲಾಬೆಲ್ ಪಟ್ಟಣದ ಪೊಲೀಸ್ ಮುಖ್ಯಸ್ಥ ಬೆಂಜಿ ಅಂಚೆಟಾ ತಿಳಿಸಿದ್ದಾರೆ.

“ನಾವು ಅನುಭವಿಸಿದ ಅತ್ಯಂತ ಪ್ರಬಲವಾದ ಭೂಕಂಪ ಇದಾಗಿದೆ. ಭೂಕಂಪನದ ವೇಳೆ ಕೆಲವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರಾದರೂ, ತಕ್ಷಣಕ್ಕೆ ಯಾವುದೇ ಸಾವು-ನೋವುಗಳಾಗಿಲ್ಲ” ಎಂದು ಅವರು ಹೇಳಿದ್ದಾರೆ.

ಉತ್ತರ ಇಂಡೋನೇಷ್ಯಾದ ಮನಾಡೋ ನಗರದ ನಿವಾಸಿಗಳು ಕೂಡ ಭೂಕಂಪದ ತೀವ್ರತೆ ಜೋರಾಗಿ ಅನುಭವಕ್ಕೆ ಬಂದಿದೆ ಎಂದು ಹೇಳಿದ್ದಾರೆ.

ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ (GFZ) ಪ್ರಕಾರ, ಈ ಭೂಕಂಪವು 7.8 ತೀವ್ರತೆಯನ್ನು ಹೊಂದಿದೆ. ಭೂಮಿಯ ಸುಮಾರು 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪನದ ಬೆನ್ನಲ್ಲೇ ಅಮೆರಿಕದ ಸುನಾಮಿ ಮುನ್ನೆಚ್ಚರಿಕೆ ವ್ಯವಸ್ಥೆಯು ಸಂಭಾವ್ಯ ಸುನಾಮಿ ಭೀತಿಯನ್ನು ವಿವರಿಸಿದೆ. ಭೂಕಂಪ ಸಂಭವಿಸಿದ ಕೆಲವೇ ಕ್ಷಣಗಳಲ್ಲಿ ಫಿಲಿಪೈನ್ಸ್ ಮತ್ತು ಇಂಡೋನೇಷ್ಯಾ ಜನರು ಜಾಗರೂಕರಾಗಿರುವಂತೆ ಎಚ್ಚರಿಕೆ ನೀಡಿದೆ.

ಕರಾವಳಿ ಪ್ರದೇಶಗಳಿಗೆ ಒಂದು ಮೀಟರ್‌ಗಿಂತ ಹೆಚ್ಚಿನ ಎತ್ತರದ ಸುನಾಮಿ ಅಲೆಗಳು ಅಪ್ಪಳಿಸಬಹುದು. ಸುನಾಮಿಯು ಕೆಲವು ಗಂಟೆಗಳ ಕಾಲ ಮುಂದುವರಿಯಬಹುದು ಎಂದು ಫಿಲಿಪೈನ್ಸ್ ಇನ್‌ಸ್ಟಿಟ್ಯೂಟ್ ಆಫ್ ವೋಲ್ಕನಾಲಜಿ ಅಂಡ್ ಸೀಸ್ಮಾಲಜಿ (Phivolcs) ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಯದ ಗುರುತುಗಳಿಲ್ಲವೆಂದು ಪೋಕ್ಸೋ ಸಂತ್ರಸ್ತೆಗೆ ಪರಿಹಾರ ನಿರಾಕರಿಸುವಂತಿಲ್ಲ: ಅಲಹಾಬಾದ್‌ ಹೈಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದ ವೈದ್ಯಕೀಯ ವರದಿಯಲ್ಲಿ ದೈಹಿಕ ಗಾಯಗಳ ಗುರುತುಗಳು ದಾಖಲಾಗಿಲ್ಲ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...