ಇಂದು ಮುಂಜಾನೆ ನೇಪಾಳದಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಇದು ರಿಕ್ಟರ್ ಮಾಪಕದಲ್ಲಿ 7.1 ರಷ್ಟಿತ್ತು. ಭಾರತದ ಹಲವು ರಾಜ್ಯಗಳಲ್ಲೂ ಭೂಕಂಪನದ ಅನುಭವವಾಗಿದೆ. ಬಿಹಾರ, ದೆಹಲಿ-ಎನ್‌ಸಿಆರ್ ಪ್ರದೇಶಗಳಲ್ಲಿ ಕಂಪನವು ಹೆಚ್ಚು ಪರಿಣಾಮ ಬೀರಿದೆ.
ಭೂಕಂಪನದ ಪರಿಣಾಮ ನೇಪಾಳ ಹಾಗೂ ಪಶ್ಚಿಮ ಚೀನಾದಲ್ಲಿ 50 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಪ್ರಕಾರ ನೇಪಾಳ-ಟಿಬೆಟ್ ಗಡಿಯ ಬಳಿ ಲೋಬುಚೆಯಿಂದ ಈಶಾನ್ಯಕ್ಕೆ 93 ಕಿಮೀ ದೂರದಲ್ಲಿ ಬೆಳಗ್ಗೆ 6:35 ಕ್ಕೆ ಭೂಕಂಪನ ಸಂಭವಿಸಿದೆ.
ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ಇಂದು ಬೆಳಗ್ಗೆ 6:30ಕ್ಕೆ ಭೂಕಂಪನ ಸಂಭವಿಸಿದೆ. ಮಂಗಳವಾರ, ನೇಪಾಳದಲ್ಲಿ ಶುರುವಾದ ಭೂಕಂಪನದ ನಂತರ ದೆಹಲಿ-ಎನ್‌ಸಿಆರ್ ಮತ್ತು ಬಿಹಾರದ ಕೆಲವು ಭಾಗಗಳು ಸೇರಿದಂತೆ ಉತ್ತರ ಭಾರತದ ಹಲವಾರು ಪ್ರದೇಶಗಳಲ್ಲಿ ಬಲವಾದ ಕಂಪನದ ಅನುಭವವನ್ನುಂಟು ಮಾಡಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾದಾರ ಚೆನ್ನಯ್ಯ ಸ್ವಾಮೀಜಿ ಹೇಳಿಕೆ ಅಪಾಯಕಾರಿ
ಭೂಕಂಪದ ಕೇಂದ್ರ ಬಿಂದು ನೇಪಾಳದ ಗೋಕರ್ಣೇಶ್ವರದ ಬಳಿ ಇದೆ ಎಂದು ವರದಿಯಾಗಿದೆ. ನಿಖರವಾದ ಪ್ರಮಾಣವನ್ನು ಇನ್ನೂ ದೃಢೀಕರಿಸಬೇಕಾಗಿದ್ದರೂ, ಆರಂಭಿಕ ಅಂದಾಜುಗಳು ರಿಕ್ಟರ್ ಮಾಪಕದಲ್ಲಿ 6.0 ಮತ್ತು 7.0 ರ ನಡುವೆ ಇರಬಹುದೆಂದು ಸೂಚಿಸುತ್ತವೆ.
ಪಾಟ್ನಾ ಸೇರಿದಂತೆ ಬಿಹಾರದ ಹಲವಾರು ಪ್ರದೇಶಗಳಲ್ಲಿ ಮತ್ತು ರಾಜ್ಯದ ಉತ್ತರ ಭಾಗದ ಅನೇಕ ಸ್ಥಳಗಳಲ್ಲಿ ಬಲವಾದ ಕಂಪನಗಳು ಸಂಭವಿಸಿವೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲೂ ಭೂಕಂಪದ ಅನುಭವವಾಗಿದೆ.
ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಕಂಪನದ ನಂತರ ನಿವಾಸಿಗಳು ತಮ್ಮ ಮನೆಗಳಿಂದ ಹೊರಗೆ ಬಂದರು ಎಂದು ವರದಿಯಾಗಿದೆ.