ದೇಶದ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿಯಿಂದ ದಾಳಿ: ರಾಹುಲ್ ಗಾಂಧಿ

Date:

ಜರ್ಮನಿ ಪ್ರವಾಸದಲ್ಲಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಭಾರತದಲ್ಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿ ದಾಳಿ ನಡೆಸುತ್ತಿದೆ ಎಂದು ದೂರಿದ್ದಾರೆ.

- Advertisement -

ಬರ್ಲಿನ್‌ನಲ್ಲಿರುವ ಹರ್ಟೀ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳಾದ ಇ.ಡಿ, ಸಿಬಿಐಗಳನ್ನು ಪ್ರತಿಪಕ್ಷಗಳನ್ನು ಹಳಿಯುವ ರಾಜಕೀಯ ಸಾಧನವಾಗಿ ಪರಿವರ್ತಿಸಿದೆ. ಇದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ದಾಳಿ ಎಂದು ಕರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ವಾಸ್ತವಿಕವಾಗಿ ಬಿಜೆಪಿ ವಿರುದ್ಧ ಯಾವುದೇ ಪ್ರಕರಣಗಳಿಲ್ಲ. ಆದರೆ ಹೆಚ್ಚಿನ ರಾಜಕೀಯ ಪ್ರಕರಣಗಳು ಆಡಳಿತ ಪಕ್ಷವನ್ನು ವಿರೋಧಿಸುವವರನ್ನು ಗುರಿಯಾಗಿಸಿಕೊಂಡಿವೆ. ಕಾಂಗ್ರೆಸ್ ಅನ್ನು ಬೆಂಬಲಿಸುವ ಉದ್ಯಮಿಗಳು ಬೆದರಿಕೆಯನ್ನು ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇಂಡಿಯಾ ಒಕ್ಕೂಟದ ಪಕ್ಷಗಳು ರಾಜ್ಯ ಮತ್ತು ಸ್ಥಳೀಯ ಚುನಾವಣೆಯಲ್ಲಿ ಪರಸ್ಪರ ಸ್ಪರ್ಧಿಸುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ, ಇದು ಯುದ್ಧತಂತ್ರದ ಸ್ಪರ್ಧೆಗಳು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಿದ್ಧಾಂತಕ್ಕೆ ವಿರೋಧವಾಗಿ ಮೈತ್ರಿಕೂಟವು ಒಗ್ಗಟ್ಟಾಗಿ ಉಳಿದಿದೆ ಎಂದು ಅವರು ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೇರಳಕ್ಕೂ ಕಾಲಿಟ್ಟಿತು, ಕೋಮುದ್ವೇಷಿ ಗುಂಪುಹತ್ಯೆಯ ಪಿಡುಗು!

ಒಬ್ಬ ವ್ಯಕ್ತಿಯ ಇಚ್ಛೆಗೆ ಅನುಗುಣವಾಗಿ ಭಾರತವನ್ನು ಮುನ್ನಡೆಸಲು ಸಾಧ್ಯವಿಲ್ಲ ಎಂದು ನಂಬುವ ಲಕ್ಷಾಂತರ ಜನರಿದ್ದಾರೆ. ರಾಜ್ಯ ರಾಜ್ಯಗಳ ನಡುವಿನ ಸಂವಾದದ ಮೂಲಕ ದೇಶ ಕಾರ್ಯನಿರ್ವಹಿಸುವ ಮಾದರಿಯ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಪ್ರಧಾನಿ ಮೋದಿ ಅವರನ್ನು ಅನೇಕ ಜನರು ಬೆಂಬಲಿಸುತ್ತಾರೆ ಎಂದು ರಾಹುಲ್ ಗಾಂಧಿ ಇದೇ ಸಂದರ್ಭದಲ್ಲಿ ಒಪ್ಪಿಕೊಂಡರು. ಆದರೆ ದೇಶದ ದೊಡ್ಡ ವರ್ಗವು ಅವರ ಸಿದ್ಧಾಂತ ಮತ್ತು ದೇಶದ ದೃಷ್ಟಿಕೋನವನ್ನು ಒಪ್ಪುವುದಿಲ್ಲ. ಈ ದೃಷ್ಟಿಕೋನವು ದೋಷಪೂರಿತವಾಗಿದೆ ಮತ್ತು ಆಳವಾದ ಸಾಮಾಜಿಕ ಉದ್ವಿಗ್ನತೆಯನ್ನು ಸೃಷ್ಟಿಸುವ ಅಪಾಯವಿದೆ ಎಂದು ಹೇಳಿದರು.

ಭಾರತದಲ್ಲಿ ಉತ್ಪಾದನೆ ಹೆಚ್ಚಳ ಮಾಡಿದರೆ ಉದ್ಯೋಗ ಹೆಚ್ಚಿಸಬಹುದು. ಆದರೆ ಬಿಜೆಪಿ ಅದಾನಿ, ಅಂಬಾನಿಗಳ ಕೈಗೆ ಅಧಿಕಾರ ನೀಡಿದೆ. ಭಾರತದಲ್ಲಿ ಹೆಚ್ಚಿನವರು ಚೀನೀ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದಾರೆ.ಈಗ ಇರುವ ಜಿಎಸ್‌ಟಿ ಸಂಪೂರ್ಣ ಉತ್ಪಾದಕ ಮತ್ತು ಗ್ರಾಹಕ ವಿರೋಧಿಯಾಗಿದೆ ಎಂದು ಟೀಕಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್; ಭೇಟಿಯ ನಿರೀಕ್ಷೆ ಏನು?

ಚೀನಾದ ಅಧ್ಯಕ್ಷ ಕ್ಷಿ ಜಿನ್‌ಪಿಂಗ್ 11 ವರ್ಷಗಳ ಬಳಿಕ ಅಮೆರಿಕಕ್ಕೆ ಅಧಿಕೃತ...