ಹಿಂದೂ ಸಂಘಟನೆ ಐಫೆಲ್ ಟವರ್ ಭೇಟಿ ವೇಳೆ ಮಹಿಳಾ ಸಿಬ್ಬಂದಿ ನಿರ್ಬಂಧ: ಫ್ರಾನ್ಸ್ ಕೆಂಗಣ್ಣು

Date:

ಹಿಂದೂ ಧಾರ್ಮಿಕ ಸಂಘಟನೆಯೊಂದರ ನಿಯೋಗವು ಖಾಸಗಿ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಹಿಳಾ ಸಿಬ್ಬಂದಿಯನ್ನು ಕರ್ತವ್ಯದ ಸ್ಥಳದಿಂದ ದೂರವಿಟ್ಟ ಆರೋಪದ ಮೇಲೆ ನೌಕರರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಈ ಬಿಗುವಿನ ವಾತಾವರಣದ ಹಿನ್ನೆಲೆಯಲ್ಲಿ, ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾದ ಪ್ಯಾರಿಸ್‌ನ ಐಫೆಲ್ ಟವರ್ ಅನ್ನು ಸೋಮವಾರ ತಾತ್ಕಾಲಿಕವಾಗಿ ಮುಚ್ಚಲಾಗಿತ್ತು. ಫ್ರಾನ್ಸ್‌ನ ಹಿರಿಯ ರಾಜಕಾರಣಿಗಳೂ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

- Advertisement -

​ಬಿಎಪಿಎಸ್ (ಬೋಚಾಸನ್‌ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ) ಸಂಘಟನೆಗೆ ಸೇರಿದ ಸುಮಾರು 100 ಜನರ ನಿಯೋಗವು ಶನಿವಾರ ಸ್ಮಾರಕಕ್ಕೆ ಭೇಟಿ ನೀಡಿತ್ತು. ಈ ನಿಯೋಗವು ಹಾದುಹೋಗುವಾಗ, ಮಹಿಳಾ ನೌಕರರನ್ನು ತಮ್ಮ ಕೆಲಸದ ಸ್ಥಳದಿಂದ ತೆರಳುವಂತೆ ಆಡಳಿತ ಮಂಡಳಿ ಸೂಚಿಸಿತ್ತು. ಅಲ್ಲದೆ, ಆ ಸ್ಥಳಗಳಲ್ಲಿ ಮಹಿಳೆಯರ ಬದಲಿಗೆ ಪುರುಷ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು ಎಂದು ಕಾರ್ಮಿಕ ಸಂಘಟನೆಯ ಪ್ರತಿನಿಧಿಗಳು ಗಂಭೀರ ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

​ಈ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಬಿಎಪಿಎಸ್ ಸಂಸ್ಥೆ, “ಸಾರ್ವಜನಿಕರಿಗೆ ಅನನುಕೂಲವಾಗುವುದನ್ನು ತಪ್ಪಿಸಲು ಐಫೆಲ್ ಟವರ್ ಆಡಳಿತ ಮಂಡಳಿಯೊಂದಿಗೆ ಮೊದಲೇ ಚರ್ಚಿಸಿ ಭೇಟಿಯನ್ನು ಆಯೋಜಿಸಲಾಗಿತ್ತು. ಆದರೆ, ಮಹಿಳಾ ಸಿಬ್ಬಂದಿಯನ್ನು ಹೊರಹೋಗುವಂತೆ ಸೂಚಿಸಿದ ಬಗ್ಗೆ ನಮಗೆ ಯಾವುದೇ ಅರಿವಿಲ್ಲ. ಆದರೂ, ಈ ಪರಿಸ್ಥಿತಿಯಿಂದ ಯಾರಿಗಾದರೂ ನೋವಾಗಿದ್ದರೆ ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ” ಎಂದು ಸ್ಪಷ್ಟನೆ ನೀಡಿದೆ.

​ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪ್ಯಾರಿಸ್ ಮೇಯರ್ ಎಮ್ಯಾನುಯೆಲ್ ಗ್ರೆಗೊಯಿರ್ ತ್ವರಿತ ತನಿಖೆಗೆ ಆದೇಶಿಸಿದ್ದಾರೆ. “ಇಂತಹ ತಾರತಮ್ಯದ ಷರತ್ತುಗಳನ್ನು ಸಹಿಸುವುದು ಅಸಾಧ್ಯ. ಇದು ಲಿಂಗ ಸಮಾನತೆಯ ತತ್ವಕ್ಕೆ ಸಂಪೂರ್ಣ ವಿರುದ್ಧವಾಗಿದೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ, ಮಹಿಳೆಯರೊಂದಿಗಿನ ಸಂಪರ್ಕವನ್ನು ಸೀಮಿತಗೊಳಿಸುವ ನಿಯೋಗದ ಬೇಡಿಕೆಯನ್ನು ಒಪ್ಪಿಕೊಳ್ಳಬಾರದಾಗಿತ್ತು ಎಂದು ಟವರ್ ನಿರ್ವಹಣಾ ಸಂಸ್ಥೆ (SETE) ತನ್ನ ತಪ್ಪನ್ನು ಒಪ್ಪಿಕೊಂಡಿದೆ.

​ಫ್ರಾನ್ಸ್‌ನ ರಾಷ್ಟ್ರೀಯ ಅಸೆಂಬ್ಲಿ ಅಧ್ಯಕ್ಷೆ ಯೇಲ್ ಬ್ರಾನ್-ಪಿವೆಟ್ ಅವರೂ ಈ ಬೆಳವಣಿಗೆಯನ್ನು ಖಂಡಿಸಿದ್ದಾರೆ. “ವಿದೇಶಿ ಸಂದರ್ಶಕರ ಬೇಡಿಕೆಗಳನ್ನು ಈಡೇರಿಸಲು ಫ್ರಾನ್ಸ್‌ನಲ್ಲಿ ಮಹಿಳೆಯರು ಕಣ್ಮರೆಯಾಗಲು ಅಥವಾ ಹಿಂದೆ ಸರಿಯಲು ಸಾಧ್ಯವಿಲ್ಲ, ಇದು ನಮ್ಮ ಸಾಂಸ್ಕೃತಿಕ ಮೌಲ್ಯಗಳಿಗೆ ವಿರುದ್ಧವಾಗಿದೆ” ಎಂದು ಅವರು ಕಿಡಿಕಾರಿದ್ದಾರೆ. ಮುಂದೆಂದೂ ಮಹಿಳೆಯರನ್ನು ಕೆಲಸದ ಸ್ಥಳದಲ್ಲಿ ಈ ರೀತಿ ಕಡೆಗಣಿಸಬಾರದು ಎಂದು ಪ್ರತಿಭಟನಾನಿರತ ಸಿಬ್ಬಂದಿ ಪಟ್ಟು ಹಿಡಿದಿದ್ದಾರೆ.

​ಫ್ರಾನ್ಸ್‌ನ ರಾಜಧಾನಿ ಪ್ಯಾರಿಸ್‌ನ ಸಮೀಪ ಭಾನುವಾರ ನಡೆದ ಬಿಎಪಿಎಸ್ ಸಂಸ್ಥೆಯ ಮೊಟ್ಟಮೊದಲ ಬೃಹತ್ ಹಿಂದೂ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಈ ನಿಯೋಗವು ಫ್ರಾನ್ಸ್‌ಗೆ ತೆರಳಿತ್ತು. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಭಾನುವಾರ ಈ ದೇವಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಉಭಯ ದೇಶಗಳ ನಡುವಿನ ಸಾಂಸ್ಕೃತಿಕ ಬಾಂಧವ್ಯದ ಬಗ್ಗೆ ಮಾತನಾಡಿದ್ದರು ಎಂಬುದು ಗಮನಾರ್ಹ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಬಸವರಾಜ ಬಲ್ಲೂರ ಆಯ್ಕೆ

ಅಧ್ಯಯನ, ಅಧ್ಯಾಪನದ ಜೊತೆಗೆ ಸಾಹಿತ್ಯಿಕ ಹಾಗೂ ಸಮಾಜೋಧಾರ್ಮಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ...

ಬೀದರ್ ಜಿಲ್ಲಾ ಪ್ರಥಮ ದಲಿತ-ಬಂಡಾಯ ಸಮ್ಮೇಳನ : ಸರ್ವಾಧ್ಯಕ್ಷರಾಗಿ ಮಾರುತಿ ಬೌದ್ಧೆ ಆಯ್ಕೆ

ಬೀದರ್ ಜಿಲ್ಲಾ ಪ್ರಥಮ ದಲಿತ-ಬಂಡಾಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರಗತಿಪರ ಚಿಂತಕ ಹಾಗೂ...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಶೇ.86.97ರಷ್ಟು ದಾಖಲೆ ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ ಶಾಂತಿಯುತವಾಗಿ...

ಯುಎಇ | ಅನಿವಾಸಿಗಳ ಕುಟುಂಬಗಳಿಗೆ ಆರ್ಥಿಕ ಭದ್ರತೆ: ಮಹತ್ವಾಕಾಂಕ್ಷಿ ವಿನೂತನ ಯೋಜನೆ ಘೋಷಿಸಲಿದೆ ‘ದುಬೈ ಬ್ಯಾರೀಸ್ 24/7’

ಯುಎಇಯಲ್ಲಿ ನೆಲೆಸಿರುವ ಕರ್ನಾಟಕ ಮೂಲದ ಮುಸ್ಲಿಂ ಸಮುದಾಯದ ಅನಿವಾಸಿಗಳ ಕುಟುಂಬಗಳಿಗೆ ಆರ್ಥಿಕ...