ಅಮೆರಿಕದಲ್ಲಿ ಹೊಸ ರಾಜಕೀಯ ಪಕ್ಷ ಘೋಷಿಸಿದ ಎಲಾನ್ ಮಸ್ಕ್

Date:

Advertisements

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾಜಿ ಬೆಂಬಲಿಗ ಉದ್ಯಮಿ ಎಲಾನ್ ಮಸ್ಕ್ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ. ಅಮೆರಿಕದ ಏಕಪಕ್ಷ ವ್ಯವಸ್ಥೆಗೆ ಸವಾಲಾಗಿ ಈ ಪಕ್ಷ ಘೋಷಿಸಲಾಗಿದೆ ಎಂದು ಮಸ್ಕ್ ಶನಿವಾರ ಪ್ರಕಟಿಸಿದ್ದಾರೆ.

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಮತ್ತು 2024ರಲ್ಲಿ ಟ್ರಂಪ್ ಪ್ರಚಾರಕ್ಕೆ ಅತ್ಯಧಿಕ ದೇಣಿಗೆ ನೀಡಿದ್ದ ಮಸ್ಕ್, ಫೆಡರಲ್ ವೆಚ್ಚವನ್ನು ಕಡಿತಗೊಳಿಸುವ ಮತ್ತು ಸರ್ಕಾರಿ ಉದ್ಯೋಗಗಳನ್ನು ಕಡಿತಗೊಳಿಸುವ ಉದ್ದೇಶದ ಸರ್ಕಾರಿ ಕ್ಷಮತಾ ಇಲಾಖೆ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದರು. ಬಳಿಕ ಟ್ರಂಪ್ ಜತೆಗಿನ ವಿರಸದಿಂದ ಬೇರ್ಪಟ್ಟಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ‘ಅಚ್ಛೇ ದಿನ’ದಲ್ಲಿ ಸಾಮಾನ್ಯರಿಗೆ ಸಾಲದ ಹೊರೆ

Advertisements

“ನಿಮ್ಮ ಸ್ವಾತಂತ್ರ್ಯವನ್ನು ಮರಳಿ ನಿಮಗೆ ನೀಡುವ ಉದ್ದೇಶದಿಂದ ಅಮೆರಿಕ ಪಾರ್ಟಿಯನ್ನು ಇಂದು ರಚಿಸಲಾಗಿದೆ” ಎಂದು ಎಕ್ಸ್ ಪೋಸ್ಟ್‌ನಲ್ಲಿ ಮಸ್ಕ್ ಪ್ರಕಟಿಸಿದ್ದಾರೆ. “ಒಂದರಿಂದ ಎರಡು ಅಂಶಗಳಿಗೆ ನಿಮಗೆ ಹೊಸ ರಾಜಕೀಯ ಪಕ್ಷ ಅಗತ್ಯವಿದೆ; ನೀವು ಅದನ್ನು ಪಡೆದುಕೊಳ್ಳಿ. ನಾವು ದೇಶದಲ್ಲಿ ಹೊಂದಿರುವ ವ್ಯರ್ಥ ಮತ್ತು ಲಂಚದಿಂದ ದೇಶವನ್ನು ದಿವಾಳಿ ಮಾಡುವ ಏಕ ಪಕ್ಷ ವ್ಯವಸ್ಥೆಗೆ ಬಂದರೆ, ಅದು ಪ್ರಜಾಪ್ರಭುತ್ವ ಎನಿಸುವುದಿಲ್ಲ”ಎಂದು ಸ್ಪಷ್ಟಪಡಿಸಿದ್ದಾರೆ.

ಇದಕ್ಕೂ ಮುನ್ನ ಜುಲೈ 4ರಂದು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಮಸ್ಕ್ ಜಾಲತಾಣದಲ್ಲಿ ಅಭಿಪ್ರಾಯ ಸಂಗ್ರಹಿಸಿ, “ದ್ವಿಪಕ್ಷೀಯ ವ್ಯವಸ್ಥೆ (ಕೆಲವರು ಏಕಪಕ್ಷ ಎಂದೂ ಕರೆಯುತ್ತಾರೆ)ಯಿಂದ ನಿಮಗೆ ಸ್ವಾತಂತ್ರ್ಯ ಬೇಕೇ ಎಂದು ಕೇಳಲು ಸ್ವಾತಂತ್ರ್ಯ ದಿನ ಸರಿಯಾದ ಸಂದರ್ಭ! ನಾವು ಅಮೆರಿಕ ಪಾರ್ಟಿ ರಚಿಸಬಹುದೇ? ಎಂದು ಕೇಳಿದ್ದಕ್ಕೆ ಶೇಕಡ 65.4 ಮಂದಿ ಸಹಮತ ಸೂಚಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ...

Download Eedina App Android / iOS

X