ಪ್ರಪಂಚವನ್ನು 150 ಬಾರಿ ಸ್ಫೋಟಿಸುವಷ್ಟು ಅಣ್ವಸ್ತ್ರಗಳು ನಮ್ಮಲ್ಲಿವೆ: ಡೊನಾಲ್ಡ್ ಟ್ರಂಪ್‌

Date:

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾ–ಅಮೆರಿಕಾ ಸಂಬಂಧದ ಕುರಿತು ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಿಬಿಎಸ್‌ ನ್ಯೂಸ್‌ ಚಾನಲ್‌ಗೆ ನೀಡಿದ ಸಂದರ್ಶನದಲ್ಲಿ ಟ್ರಂಪ್ ಅವರು, “ಚೀನಾ ನಮ್ಮನ್ನು ಸದಾ ಗಮನಿಸುತ್ತಿದೆ, ಆದರೆ ನಾವೂ ಅವರ ಮೇಲೆ ಕಣ್ಣಿಟ್ಟಿದ್ದೇವೆ,” ಎಂದು ಹೇಳಿದ್ದಾರೆ.

- Advertisement -

ಪಾಕಿಸ್ತಾನ , ಚೀನಾ, ರಷ್ಯಾ, ಉತ್ತರ ಕೊರಿಯಾ ದೇಶಗಳು ಪರಮಾಣು ಪರೀಕ್ಷೆಗಳನ್ನು ನಡೆಸುತ್ತಿವೆ. ಹೀಗಿರುವಾಗ ಅಮೆರಿಕ ಮಾತ್ರ ಸಂಯಮ ತೋರಿಸುವ ದೇಶವಾಗಿ ಉಳಿಯಲು ಸಾಧ್ಯವಿಲ್ಲ. ನಾವೂ ಪರಮಾಣು ಪರೀಕ್ಷೆಗಳನ್ನು ನಡೆಸುತ್ತೇವೆ ಎಂದು ಡೊನಾಲ್ಡ್‌ ಟ್ರಂಪ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ವಿಶ್ವದಾದ್ಯಂತ ಅನೇಕ ದೇಶಗಳು ಪರಮಾಣು ಬಾಂಬ್‌ಗಳನ್ನ ಪರೀಕ್ಷಿಸುತ್ತಿವೆ. ರಷ್ಯಾ, ಚೀನಾ, ಉತ್ತರ ಕೊರಿಯಾ, ಪಾಕಿಸ್ತಾನ ಕೂಡ ಈ ಕೆಲಸದಲ್ಲಿ ನಿರತವಾಗಿವೆ. ಆದರೆ ಯಾರೂ ಅದರ ಬಗ್ಗೆ ಮಾತನಾಡುತ್ತಿಲ್ಲ. ಆದರೆ ನಮ್ಮದು ಮುಕ್ತ ಸಮಾಜ, ಎಲ್ಲವನ್ನೂ ಮಾತನಾಡ್ತೀವಿ. ಇಲ್ಲದಿದ್ದರೆ ನೀವು ನಾಳೆ ಹೇಳಿದ್ದನ್ನೂ ಮೀರಿ ವರದಿ ಮಾಡುತ್ತಿರಿ ಎಂದು ಪತ್ರಕರ್ತರಿಗೆ ಹೇಳಿದ್ದಾರೆ.

ಅವರೆಲ್ಲರೂ ಪರಮಾಣು ಪರೀಕ್ಷೆ ನಡೆಸುತ್ತಿವೆ. ಆದರೆ ಇತರ ಎಲ್ಲ ದೇಶಗಳಿಗಿಂತ ಅಮೆರಿಕ ಹೆಚ್ಚು ಪರಮಾಣು ಶಸ್ತ್ರಾಸ್ತ್ರಗಳನ್ನ ಹೊಂದಿದೆ. ಇಡೀ ಜಗತ್ತನ್ನು 150 ಬಾರಿ ಸ್ಫೋಟಿಸುವಷ್ಟು ಪರಮಾಣು ಶಸ್ತ್ರಾಸ್ತ್ರಗಳನ್ನು ನಾವು ಹೊಂದಿದ್ದೇವೆ. ಪುಟಿನ್ ಮತ್ತು ಕ್ಸಿ ಜಿನ್‌ಪಿಂಗ್‌ ಇಬ್ಬರೊಂದಿಗೂ ಈ ವಿಷಯ ಚರ್ಚಿಸಿದ್ದೇನೆ. ಆದಾಗ್ಯೂ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ. ಪರಿಸ್ಥಿತಿ ಅನುಗುಣವಾಗಿ ನಾವು ನಿರ್ಧಾರ ಕೈಗೊಳ್ಳಲಿದ್ದೇವೆ ಎಂದಿದ್ದಾರೆ.

ಇದನ್ನು ಓದಿದ್ದೀರಾ? 2 Grand Slam ಗೆದ್ದಿದ್ದ ಕನ್ನಡಿಗ ರೋಹನ್ ಬೋಪಣ್ಣ ಟೆನಿಸ್‌ಗೆ ವಿದಾಯ

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗಿನ ತಮ್ಮ ನಿಗದಿತ ಸಭೆಗೂ ಮುಂಚೆಯೇ ಟ್ರಂಪ್ ಟ್ರುತ್ ಸೋಷಿಯಲ್‌ನಲ್ಲಿ ಪೋಸ್ಟ್ ಮಾಡಿ, ರಕ್ಷಣಾ ಇಲಾಖೆಗೆ ತಕ್ಷಣ ಪರಮಾಣು ಪರೀಕ್ಷೆ ಪ್ರಾರಂಭಿಸಲು ನಿರ್ದೇಶಿಸಿದ್ದರು. ಬಳಿಕ ಸಂದರ್ಶನದಲ್ಲಿ ತಮ್ಮ ನಿಲುವನ್ನು ಸಮರ್ಥಿಸಿಕೊಂಡರು.

ನಾವು ಅವರನ್ನು ಬೀಳಿಸುವುದರ ಬದಲು ಸಹಕರಿಸುವುದರಿಂದ ದೊಡ್ಡವರಾಗುತ್ತೇವೆ, ಉತ್ತಮ ಮತ್ತು ಬಲಿಷ್ಠರಾಗಬಹುದು ಎಂದು ಟ್ರಂಪ್ ಹೇಳಿದ್ದಾರೆ.

ದಕ್ಷಿಣ ಕೊರಿಯಾದಲ್ಲಿ ಅಕ್ಟೋಬರ್ 30ರಂದು ನಡೆದ 32ನೇ ಏಪೆಕ್‌ ಆರ್ಥಿಕ ಸಚಿವರ ಸಭೆಯಲ್ಲಿ ಟ್ರಂಪ್ ಹಾಗೂ ಕ್ಸಿ ಜಿನ್‌ಪಿಂಗ್ ಅವರಿಬ್ಬರೂ ಆರು ವರ್ಷಗಳ ನಂತರ ಮುಖಾಮುಖಿಯಾಗಿ ಭೇಟಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...