ಒಸಾಮಾ ಬಿನ್ ಲಾಡೆನ್‌ ಕೊಂದಿದ್ದಾಗಿ ಹೇಳಿಕೊಂಡಿದ್ದ ಅಮೆರಿಕ ನೌಕಾಪಡೆಯ ಮಾಜಿ ಅಧಿಕಾರಿ ಬಂಧನ

Date:

Advertisements

2011ರಲ್ಲಿ ಅಲ್ ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್‌ನನ್ನು ಕೊಂದಿರುವುದಾಗಿ ಹೇಳಿಕೊಂಡಿದ್ದ ಅಮೆರಿಕದ ನೌಕಾಪಡೆಯ ಮಾಜಿ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ವಾರದ ಆರಂಭದಲ್ಲಿ ಟೆಕ್ಸಾಸ್‌ನಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ ಆರೋಪದ ಮೇಲೆ ನೌಕಾಪಡೆಯ ಮಾಜಿ ಅಧಿಕಾರಿ ರಾಬರ್ಟ್ ಓ’ನೀಲ್ ಅವರನ್ನು ಬಂಧಿಸಲಾಗಿತ್ತು ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ರಾಬರ್ಟ್ ಓ’ನೀಲ್ ಅವರನ್ನು ಫ್ರಿಸ್ಕೊದಲ್ಲಿ ಬಂಧಿಸಲಾಗಿದ್ದು, ಅದೇ ದಿನ 3,500 ಡಾಲರ್‌ ಬಾಂಡ್‌ ಜಾಮೀನಿನ ಆಧಾರದ ಮೇಲೆ ಬಿಡುಗಡೆ ಮಾಡಲಾಯಿತು ಎಂದು ವರದಿ ಹೇಳಿದೆ.

Advertisements

ಈ ಸುದ್ದಿ ಓದಿದ್ದೀರಾ? ಅಸ್ಸಾಂ: ಬಿಜೆಪಿ ಸಂಸದನ ನಿವಾಸದಲ್ಲಿ 10 ವರ್ಷದ ಬಾಲಕನ ಶವ ಪತ್ತೆ

2011 ರಲ್ಲಿ ಪಾಕಿಸ್ತಾನದಲ್ಲಿ ಅಮೆರಿಕ ರಹಸ್ಯ ದಾಳಿಯ ಸಂದರ್ಭದಲ್ಲಿ 9/11ರ ದಾಳಿಯ ರೂವಾರಿ ಅಲ್ ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ ಅನ್ನು ಕೊಂದು ಗುಂಡು ಹಾರಿಸಿದ್ದು ತಾವೇ ಎಂದು ಓ’ನೀಲ್ ಹೇಳಿಕೊಂಡಿದ್ದರು. ಅವರು ತಮ್ಮ 2017 ರ ಆತ್ಮಚರಿತ್ರೆ “ದಿ ಆಪರೇಟರ್” ನಲ್ಲಿ ಈ ಕಥೆಯನ್ನು ವಿವರಿಸಿದ್ದಾರೆ. ಆದರೆ ಅವರ ಈ ಹೇಳಿಕೆಯನ್ನು ಅಮೆರಿಕ ಸರ್ಕಾರವು ಎಂದಿಗೂ ಖಚಿತಪಡಿಸಿಲ್ಲ ಅಥವಾ ನಿರಾಕರಿಸಿಯೂ ಇಲ್ಲ.

ರಾಬರ್ಟ್ ಓ’ನೀಲ್ ಅವರನ್ನು ಈ ಹಿಂದೆ ಅಂದರೆ 2016 ರಲ್ಲಿ, ಮೊಂಟಾನಾದಲ್ಲಿ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಬಂಧಿಸಲಾಗಿತ್ತು. ಆದರೆ ಪ್ರಾಸಿಕ್ಯೂಟರ್‌ಗಳು ಈತನ ಅಪರಾಧವನ್ನು ಸಾಬೀತುಪಡಿಸುವಲ್ಲಿ ವಿಫಲರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

Download Eedina App Android / iOS

X