‘ನಾವು ಸಿಲುಕಿದ್ದ ಸ್ಥಳದ ಬಳಿಯೇ ಸ್ಫೋಟ’: ದುಬೈನಲ್ಲಿ ಸಿಲುಕಿರುವ ಪಿ.ವಿ ಸಿಂಧು

Date:

ಇರಾನ್‌ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ನಡೆಸಿದ ಬಳಿಕ, ಮಧ್ಯಪ್ರಾಚ್ಯದಲ್ಲಿ ಉದ್ವಗ್ನತೆ ಉಂಟಾಗಿದೆ. ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಸರ್ವೋಚ್ಛ ನಾಯಕ ಖಮೇನಿ ಹತ್ಯೆಯಾಗಿದೆ. ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿದಾಳಿ ಆರಂಭಿಸಿದೆ. ಪರಿಣಾಮ, ಮಧ್ಯಪ್ರಾಚ್ಯದ ಬಹುತೇಕ ಎಲ್ಲ ರಾಷ್ಟ್ರಗಳು ವಿಮಾನ ಕಾರ್ಯಚಾರಣೆಯನ್ನು ಸ್ಥಗಿತಗೊಳಿಸಿವೆ. ಇದರಿಂದಾಗಿ, ಹಲವಾರು ಭಾರತೀಯರು ಅರೇಬಿಯನ್ ರಾಷ್ಟ್ರಗಳಲ್ಲಿ ಸಿಲುಕೊಂಡಿದ್ದಾರೆ. ಭಾರತದ ಸ್ಟಾರ್‌ ಬ್ಯಾಡ್ಮಂಟನ್ ಆಟಗಾರ್ತಿ ಪಿ.ವಿ ಸಿಂಧು ಕೂಡ ದುಬೈನಲ್ಲಿ ಸಿಲುಕಿಕೊಂಡಿದ್ದಾರೆ. ಅವರು ತಾವು ಎದುರಿಸಿದ ಭಯಾನಕ ಘಟನೆಯನ್ನು ಹಂಚಿಕೊಂಡಿದ್ದಾರೆ.

- Advertisement -

‘ಆಲ್ ಇಂಗ್ಲೆಂಡ್ ಓಪನ್ ಬ್ಯಾಡ್ಮಿಂಟನ್’ ಪಂದ್ಯಾವಳಿಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಸಿಂಧು, ಮಾರ್ಗಮಧ್ಯೆ ದುಬೈ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದಾರೆ. ಭಾನುವಾರ ಬೆಳಿಗ್ಗೆ, ಅವರು ಮತ್ತು ಅವರ ತಂಡವು ವಿಮಾನ ನಿಲ್ದಾಣದಲ್ಲಿ ಬೀಡುಬಿಟ್ಟಿದೆ. ತಾವಿದ್ದ ಪ್ರದೇಶದ ಬಳಿಯೇ ಭೀಕರ ಸ್ಫೋಟ ಸಂಭವಿಸಿದೆ. ಇದು ‘ಅತ್ಯಂತ ಉದ್ವಿಗ್ನ’ ಮತ್ತು ‘ಭಯಾನಕ ಕ್ಷಣ’ ಎಂದು ಸಿಂಧು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಈ ಅಗ್ನಿಪರೀಕ್ಷೆ ಮುಂದುವರಿಯುತ್ತಲೇ ಇದೆ. ಪರಿಸ್ಥಿತಿ ಗಂಟೆಗಟ್ಟಲೆ ಭಯಾನಕವಾಗುತ್ತಿದೆ. ಕೆಲವು ಗಂಟೆಗಳ ಹಿಂದೆ, ನಾವು ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದ ಸ್ಥಳದ ಬಳಿ ಸ್ಫೋಟ ಸಂಭವಿಸಿದೆ. ನನ್ನ ತರಬೇತುದಾರ ಹೊಗೆ ಮತ್ತು ಅವಶೇಷಗಳಿಗೆ ಹತ್ತಿರವಾಗಿದ್ದರಿಂದ ಅವರು ಆ ಪ್ರದೇಶದಿಂದ ಬೇಗನೆ ಓಡಿಹೋಗಬೇಕಾಯಿತು. ಇದು ನಮಗೆಲ್ಲರಿಗೂ ಅತ್ಯಂತ ಉದ್ವಿಗ್ನ ಮತ್ತು ಭಯಾನಕ ಕ್ಷಣವಾಗಿತ್ತು. ಈಗ ನನನ್ನು ಮತ್ತು ತಂಡವನ್ನು ಹೆಚ್ಚು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ” ಎಂದು ಬರೆದಿದ್ದಾರೆ.

“ನಾವೆಲ್ಲರೂ ಈಗ ಸುರಕ್ಷಿತರಾಗಿದ್ದೇವೆ. ದುಬೈ ವಿಮಾನ ನಿಲ್ದಾಣದ ಸಿಬ್ಬಂದಿ ಮತ್ತು ದುಬೈ ಅಧಿಕಾರಿಗಳ ಪ್ರಯತ್ನಗಳಿಗೆ ಧನ್ಯವಾದಗಳು. ನಮ್ಮನ್ನು ಸುರಕ್ಷಿತವಾಗಿಡಲು ಸಹಾಯ ಮಾಡುವಲ್ಲಿ ಅವರ ಅದ್ಭುತ ಬೆಂಬಲ ಮತ್ತು ನಿರಂತರ ಸಹಾಯಕ್ಕಾಗಿ ದುಬೈನಲ್ಲಿರುವ ಭಾರತೀಯ ಹೈಕಮಿಷನ್‌ಗೆ ವಿಶೇಷ ಧನ್ಯವಾದಗಳು” ಎಂದು ಸಿಂಧು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಸರ್ಕಾರದ ವಿರುದ್ಧ ನ್ಯಾಯಾಲಯದ ಮಹತ್ವದ ಆದೇಶ: 55 ಸಾವಿರ ಗ್ರೀನ್ ಕಾರ್ಡ್ ಅರ್ಜಿಗಳ ಪರಿಗಣನೆಗೆ ಸೂಚನೆ

ಅಮೆರಿಕದಲ್ಲಿ ಶಾಶ್ವತವಾಗಿ ನೆಲೆಸಲು ಬಯಸುವ ವಿದೇಶಿಯರಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ, ಜಗತ್ತಿನ...

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...