ಬಾಂಗ್ಲಾದೇಶದ ಖ್ಯಾತ ಚಿತ್ರ ನಿರ್ದೇಶಕ ಝಾಹಿದುರ್ ರಹೀಮ್ ಅಂಜನ್ ಬೆಂಗಳೂರಿನಲ್ಲಿ ನಿಧನ

Date:

ಯಕೃತ್ತಿನ ಕಸಿ ಚಿಕಿತ್ಸೆ ಪಡೆಯುವುದಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬಾಂಗ್ಲಾದೇಶದ ಖ್ಯಾತ ಚಿತ್ರ ನಿರ್ದೇಶಕ, ರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದ ನಿರ್ದೇಶಕ ಝಾಹಿದುರ್ ರಹೀಮ್ ಅಂಜನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ನಿಧನರಾಗಿದ್ದಾರೆ.

- Advertisement -

ಅವರಿಗೆ 60 ವರ್ಷ ವಯಸ್ಸಾಗಿತ್ತು. ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಾದ ನಿರ್ದೇಶಕ ಝಾಹಿದುರ್ ರಹೀಮ್ ಅಂಜನ್, ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕಸಿ ಚಿಕಿತ್ಸೆ ಪಡೆಯುವುದಕ್ಕೆ ಬೆಂಗಳೂರಿನ ಯಶವಂತಪುರದಲ್ಲಿರುವ ಸ್ಪರ್ಶ್ ಖಾಸಗಿ ಆಸ್ಪತ್ರೆಗೆ ಕಳೆದ ಕೆಲವು ತಿಂಗಳುಗಳ ಹಿಂದೆ ದಾಖಲಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಳೆದ ಮಂಗಳವಾರ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ಕೂಡ ನಡೆಸಿದ್ದರು. ಆರಂಭದಲ್ಲಿ ಚೆನ್ನಾಗಿಯೇ ಚಿಕಿತ್ಸೆಗೆ ಸ್ಪಂದಿಸಿದ್ದ ಅಂಜನ್ ಅವರು, ಸೋಮವಾರ ಚಿಕಿತ್ಸೆಗೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಸದ್ಯ ಬೆಂಗಳೂರಿನಲ್ಲಿರುವ ಝಹೀದುರ್ ರಹೀಮ್ ಅಂಜನ್ ಅವರ ಸಹೋದರ ಸಜ್ಜಾದುರ್ ರಹೀಮ್ ಪಾಂಥ ಈದಿನ ಡಾಟ್‌ ಕಾಮ್‌ಗೆ ಮಾಹಿತಿ ನೀಡಿದ್ದಾರೆ.

“ಸದ್ಯ ಇನ್ನೂ ಕೂಡ ಮೃತದೇಹವು ಆಸ್ಪತ್ರೆಯಲ್ಲೇ ಇದೆ. ಚೆನ್ನೈನಲ್ಲಿರುವ ಬಾಂಗ್ಲಾದೇಶದ ರಾಯಭಾರ ಕಚೇರಿಯಿಂದ ದಾಖಲೆಗಳು ಹಾಗೂ ಕೆಲವೊಂದು ಪ್ರಕ್ರಿಯೆಗಳು ನಡೆಯಲಿಕ್ಕಿದೆ. ಆ ಬಳಿಕ ವಿಮಾನದ ಮೂಲಕ ಬಾಂಗ್ಲಾದೇಶಕ್ಕೆ ತೆಗೆದುಕೊಂಡು ಹೋಗಿ ಅಂತ್ಯಕ್ರಿಯೆಯ ಪ್ರಕ್ರಿಯೆಗಳು ನಡೆಯಲಿದೆ” ಎಂದು ಸಜ್ಜಾದುರ್ ರಹೀಮ್ ಪಾಂಥ ಈದಿನ ಡಾಟ್‌ ಕಾಮ್‌ಗೆ ತಿಳಿಸಿದ್ದಾರೆ.

ಝಾಹಿದುರ್ ರಹೀಮ್ ಅಂಜನ್ ಅವರು ತಮ್ಮ ಮೊದಲ ನಿರ್ದೇಶನದ ‘ಮೇಘಮಲ್ಹಾರ್’ ಚಿತ್ರಕ್ಕಾಗಿ 2015 ರಲ್ಲಿ ಅತ್ಯುತ್ತಮ ನಿರ್ದೇಶನ ಮತ್ತು ಅತ್ಯುತ್ತಮ ಸ್ಕ್ರಿಪ್ಟ್‌ಗಾಗಿ ಬಾಂಗ್ಲಾದೇಶದ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದಿದ್ದರು. ಬರಹಗಾರ ಅಖ್ತರುಜ್ಜಮಾನ್ ಇಲ್ಯಾಸ್ ಅವರ ‘ರೇನ್‌ಕೋಟ್’ ಕಥೆಯನ್ನು ಆಧರಿಸಿ ಅಂಜನ್ ‘ಮೇಘಮಲ್ಲರ್’ ಎಂಬ ಚಲನಚಿತ್ರವನ್ನು ನಿರ್ಮಿಸಿ, ಡಿಸೆಂಬರ್ 2014ರಲ್ಲಿ ಬಿಡುಗಡೆಗೊಳಿಸಿದ್ದರು.

ಅವರ ಇತ್ತೀಚಿನ ನಿರ್ಮಾಣ ‘ಚಂದರ್ ಅಮವಾಸ್ಯೆ’ಗೆ ಸರ್ಕಾರದಿಂದ ಹಣಕಾಸು ನೆರವು ದೊರೆತಿತ್ತು. ಚಿತ್ರೀಕರಣ ಮುಗಿದ ನಂತರ ಕಳೆದ ವರ್ಷ ಚಿತ್ರವನ್ನು ಬಿಡುಗಡೆ ಮಾಡಲು ಯೋಜಿಸಲಾಗಿತ್ತು, ಆದರೆ ಬಾಂಗ್ಲಾದೇಶದಲ್ಲಿ ನಡೆದ ಕ್ಷಿಪ್ರ ರಾಜಕೀಯ ಪರಿಸ್ಥಿತಿ ಮತ್ತು ಅವರ ಅನಾರೋಗ್ಯದ ಕಾರಣದಿಂದಾಗಿ ಅವರು ಅದನ್ನು ಬಿಡುಗಡೆ ಮಾಡಲು ಸಾಧ್ಯವಾಗಲಿಲ್ಲ. ಆದಾಗ್ಯೂ, ಪೋಸ್ಟರ್ ಬಿಡುಗಡೆ ಮಾಡಿ, ಚಿತ್ರವನ್ನು ಶೀಘ್ರದಲ್ಲೇ ಪ್ರೇಕ್ಷಕರಿಗೆ ತಲುಪಿಸುತ್ತೇನೆ ಎಂದು ತಿಳಿಸಿದ್ದರು. ಅಂಜನ್ ಅವರು ಮಹಾರಾಷ್ಟ್ರದ ಪುಣೆಯಲ್ಲಿರುವ ಚಲನಚಿತ್ರ ಸಂಸ್ಥೆಯಿಂದ ಚಲನಚಿತ್ರದಲ್ಲಿ ಪದವಿ ಪಡೆದಿದ್ದು, ಸ್ಟ್ಯಾಮ್‌ಫೋರ್ಡ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರಾಗಿಯೂ ಸೇವೆ ಸಲ್ಲಿಸಿದ್ದರು.

ಇದನ್ನು ಓದಿದ್ದೀರಾ? ಮಹಾ ಕುಂಭಮೇಳಕ್ಕೆ ತೆರಳಿದ್ದ ವೇಳೆ ಅಪಘಾತ; ಬೀದರ್ ಜಿಲ್ಲೆಯ 6 ಮೃತದೇಹಗಳ ಸಾಮೂಹಿಕ ಅಂತ್ಯಸಂಸ್ಕಾರ

ಮೃತರಾಗಿರುವ ನಿರ್ದೇಶಕ ಝಹೀದುರ್ ರಹೀಮ್ ಅಂಜನ್ ಅವರು ಪತ್ನಿ, ಬಾಂಗ್ಲಾದ ಲೇಖಕಿಯಾಗಿರುವ ಶಾಹೀನ್ ಅಖ್ತರ್, ಇಬ್ಬರು ಸಹೋದರರು, ಒಬ್ಬ ಸಹೋದರಿ ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಝಾಹಿದುರ್ ರಹೀಮ್ ಅಂಜನ್ ಅವರು ಭಾಷಾಶಾಸ್ತ್ರಜ್ಞರಾಗಿದ್ದ ಮಿಜಾನೂರ್ ರಹೀಮ್ ಅವರ ಪುತ್ರರಾಗಿದ್ದಾರೆ.

ಝಹೀದುರ್ ರಹೀಮ್ ಅಂಜನ್ ಅವರ ನಿಧನಕ್ಕೆ ಬಾಂಗ್ಲಾದ ನಿರ್ಮಾಪಕರಾದ ಅಮಿತಾಬ್ ರೆಜಾ, ಗಿಯಾಸ್ ಉದ್ದೀನ್ ಸೆಲಿಮ್, ಅಕ್ರಮ್ ಖಾನ್ ಮತ್ತು ಇತರ ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಸಂತಾಪ ಸೂಚಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...