ತೀವ್ರ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ಪ್ರಸಿದ್ಧ ತಬಲ ಮಾಂತ್ರಿಕ ಉಸ್ತಾದ್ ಝಾಕೀರ್ ಹುಸೇನ್ (73) ನಿಧನರಾಗಿದ್ದಾರೆ.
ಖ್ಯಾತ ತಬಲ ವಾದಕ ಝಾಕೀರ್ ಹುಸೇನ್ ಅವರಿಗೆ ರಕ್ತದೊತ್ತಡ ಸಮಸ್ಯೆ ಇತ್ತು. ಕಳೆದ ವಾರದಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಅವರನ್ನು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದರು.
ಪ್ರಸಿದ್ಧ ತಬಲ ವಾದಕ ಅಲ್ಲಾ ರಖಾ ಅವರ ಹಿರಿಯ ಪುತ್ರರಾಗಿದ್ದ ಝಾಕಿರ್ ಹುಸೇನ್, ತಮ್ಮ ತಂದೆಯ ಹಾದಿಯಲ್ಲಿ ಸಾಗುವ ಮೂಲಕ ವಿಶ್ವ ವಿಖ್ಯಾತಿಯನ್ನು ಪಡೆದಿದ್ದರು. ಐದು ಗ್ರ್ಯಾಮಿ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿಯನ್ನು ಬೆಳಗಿದವರು ಹುಸೇನ್.
ಏಳನೇ ವಯಸ್ಸಿನಲ್ಲೇ ತಬಲ ವಾದನ ಅಭ್ಯಾಸ ಶುರು ಮಾಡಿದ್ದ ಹುಸೇನ್ ಅವರು 12ನೇ ವಯಸ್ಸಿಗೆ ದೇಶದಾದ್ಯಂತ ಪ್ರದರ್ಶನ ನೀಡಲು ಆರಂಭಿಸಿದರು.
ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟ ಹುಸೇನ್ ಅವರಿಗೆ 1988 ರಲ್ಲಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಶ್ರೀ, 2002 ರಲ್ಲಿ ಪದ್ಮಭೂಷಣ ಮತ್ತು 2023 ರಲ್ಲಿ ಪದ್ಮವಿಭೂಷಣ ಪುರಸ್ಕಾರಗಳು ಲಭಿಸಿದ್ದವು.

ದುಃಖದ ಸಂಗತಿ- ತಬಲಾ ಮಾಂತ್ರಿಕನ ಅಗಲುವಿಕೆ. ವಿಷಾದಪೂರ್ವಕ ವಿದಾಯ.
Om Shanti Rip