ಪಾಕಿಸ್ತಾನದಲ್ಲಿ ಭೀಕರ ಅಪಘಾತ: ಕಂದಕಕ್ಕೆ ಬಸ್ ಉರುಳಿ 40 ಮಂದಿ ದುರ್ಮರಣ

Date:

ನೈಋತ್ಯ ಪಾಕಿಸ್ತಾನದಲ್ಲಿ ಶುಕ್ರವಾರ ಮುಂಜಾನೆ ಅತಿ ವೇಗ ಮತ್ತು ಮಿತಿಮೀರಿದ ಪ್ರಯಾಣಿಕರಿಂದ ತುಂಬಿದ್ದ ಬಸ್ಸೊಂದು ನಿಯಂತ್ರಣ ತಪ್ಪಿ ಹೆದ್ದಾರಿಯಿಂದ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ. ಭೀಕರ ಅಪಘಾತದಲ್ಲಿ ಕನಿಷ್ಠ 40 ಪ್ರಯಾಣಿಕರು ಸಾವನ್ನಪ್ಪಿದ್ದು, ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಬಲೂಚಿಸ್ತಾನ್ ಮತ್ತು ಖೈಬರ್ ಪಖ್ತುಂಖ್ವಾ ಪ್ರಾಂತ್ಯಗಳ ಗಡಿಯ ಸಮೀಪವಿರುವ ದಾನಾಸರ್ ಎಂಬ ಪರ್ವತ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೀಡಾದ ಬಸ್ಸು ತನ್ನ ನಿಯಮಿತ ಪ್ರಯಾಣಿಕರಲ್ಲದೆ, ಮಾರ್ಗಮಧ್ಯೆ ಕೆಟ್ಟು ನಿಂತಿದ್ದ ಮತ್ತೊಂದು ಬಸ್ಸಿನ ಪ್ರಯಾಣಿಕರನ್ನೂ ಸಹ ಹತ್ತಿಸಿಕೊಂಡಿತ್ತು. ಹೀಗಾಗಿ ಬಸ್ಸಿನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರು ಪ್ರಯಾಣಿಸುತ್ತಿದ್ದರು ಎಂದು ಬಲೂಚಿಸ್ತಾನ್ ಸರ್ಕಾರದ ವಕ್ತಾರ ಶಾಹಿದ್ ರಿಂಡ್ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಮೃತರ ಗುರುತು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ಅವರು ವಿವರಿಸಿದ್ದಾರೆ.

ಭೀಕರ ದುರಂತಕ್ಕೆ ಪಾಕಿಸ್ತಾನ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. “ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ. ಗಾಯಗೊಂಡವರಿಗೆ ಅಗತ್ಯವಿರುವ ಅತ್ಯುತ್ತಮ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದಿದ್ದಾರೆ.  ಬಲೂಚಿಸ್ತಾನ್ ಮುಖ್ಯಮಂತ್ರಿ ಸರ್ಫ್ರಾಜ್ ಬುಗ್ತಿ ಕೂಡ ಅಪಘಾತಕ್ಕೆ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಗಾಯಾಳುಗಳ ತುರ್ತು ಚಿಕಿತ್ಸೆಗೆ ಆದೇಶಿಸಿದ್ದಾರೆ.

ಈ ಲೇಖನ ಓದಿದ್ದೀರಾ?: 20 ವರ್ಷ ಗೆಲ್ಲಿಸಿದವರನ್ನೇ ಬಾಂಗ್ಲಾದೇಶಿಗರು ಎಂದರಾ ಎಚ್‌ಡಿಕೆ?

ಪಾಕಿಸ್ತಾನದಲ್ಲಿ ಅದರಲ್ಲೂ ವಿಶೇಷವಾಗಿ ಪರ್ವತ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ರಸ್ತೆಗಳ ದುಃಸ್ಥಿತಿ, ಸಂಚಾರ ನಿಯಮಗಳ ಉಲ್ಲಂಘನೆ ಹಾಗೂ ಅಜಾಗರೂಕ ಚಾಲನೆಯಿಂದಾಗಿ ಇಂತಹ ಭೀಕರ ರಸ್ತೆ ಅಪಘಾತಗಳು ನಿರಂತರವಾಗಿ ಸಂಭವಿಸುತ್ತಿರುತ್ತವೆ. ಕಳೆದ ಮೇ ತಿಂಗಳಿನಲ್ಲಿ ವಾಯುವ್ಯ ಪಾಕಿಸ್ತಾನ ಪ್ರದೇಶದಲ್ಲಿ ನಿಂತಿದ್ದ ಬಸ್ಸಿಗೆ ಮಿನಿಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ 17 ಜನರು ಸಾವನ್ನಪ್ಪಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಸಂಸದೀಯ ಸಮಿತಿ ಸಭೆಯಿಂದ ಸುಪ್ರೀಂ ಕೋರ್ಟ್‌ ಹಿಂದೆ ಸರಿದದ್ದು ಸ್ವಾಗತಾರ್ಹ!

ಸಂವಿಧಾನದ 143ನೇ ವಿಧಿಯಡಿ ಸಂಸದೀಯ ಸಮಿತಿಯು ಮಹತ್ವದ ಕಾನೂನು ರೂಪಿಸುವಾಗ, ಸುಪ್ರೀಂ...

ರಾಜೌರಿಯಲ್ಲಿ ಎಲ್‌ಒಸಿ ದಾಟಿ ಬಂದ ಪಾಕ್ ಆಕ್ರಮಿತ ಕಾಶ್ಮೀರದ ಅಪ್ರಾಪ್ತೆ ಬಂಧನ

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ವಲಯದಲ್ಲಿ ಗಡಿ ನಿಯಂತ್ರಣ...

ಸಾಗರ | ʻಮೀಶೋ ಲಕ್ಕಿ ಡ್ರಾʼ ಆಮಿಷವೊಡ್ಡಿ ಮಹಿಳೆಗೆ ರೂ.23 ಲಕ್ಷ ವಂಚನೆ

ಆನ್‌ಲೈನ್ ಶಾಪಿಂಗ್ ವೇದಿಕೆ ಮೀಶೋ ಹೆಸರಿನಲ್ಲಿ ಲಕ್ಕಿ ಡ್ರಾ ಆಮಿಷವೊಡ್ಡಿ ಸಾಗರದ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...